
ಶಿವಮೊಗ್ಗ: ಭಾರತ ದೇಶದಾದ್ಯಂತ ಸ್ವಾತಂತ್ರ್ಯ ದ 75ನೇ ವರ್ಷದ ಅಮೃತ ಮಹೋತ್ಸವವನ್ನು ಆಚರಿಸಲಾಗುತ್ತಿದ್ದು,
ಈ ಸಂಭ್ರಮದ ಅಂಗವಾಗಿ ಶಿಕಾರಿಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬೋಧಕರು ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಕಾಲ್ನಡಿಗೆ ( ಜಾತ) ಮೂಲಕ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಪ್ರತಿ ಮನೆಯಲ್ಲಿ ತ್ರಿವರ್ಣ ಧ್ವಜ ಹಾರಿಸಲು ವಿದ್ಯಾರ್ಥಿಗಳು ಘೋಷಣೆ ಮುಖಾಂತರ ಜನ ಜಾಗೃತಿ ಮೂಡಿಸಿದರು.
ಈ ಕಾರ್ಯಕ್ರಮಕ್ಕೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಶೇಖರ್ ರವರು ತ್ರಿವರ್ಣ ಧ್ವಜವನ್ನು ಹಾರಿಸುವ ಮೂಲಕ ಚಾಲನೆ ನೀಡಿದರು. ಈ ಕಾರ್ಯಕ್ರಮದಲ್ಲಿ ಎನ್ಎಸ್ಎಸ್, ರೆಡ್ ಕ್ರಾಸ್ ಘಟಕ, ಎನ್ ಸಿ ಸಿ, ಕ್ರೀಡಾ ವಿಭಾಗ , ಸಾಂಸ್ಕೃತಿಕ ವಿಭಾಗ, ರೋವರ್ಸ್ ಅಂಡ್ ರೇಂಜರ್ಸ್ ಸಂಯೋಜಕರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ಎಲ್ಲಾ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಭಾಗವಹಿಸಿ ಯಶಸ್ವಿಗೊಳಿಸಿದರು.
ರಘುರಾಜ್ ಹೆಚ್.ಕೆ…9449553305….