
ತೀರ್ಥಹಳ್ಳಿ : ಕ್ಷೇತ್ರದ ಶಾಸಕರಾಗಿರುವ ಹಾಗೂ ರಾಜ್ಯದ ಗೃಹ ಸಚಿವರಾಗಿರುವ ಆರಗ ಜ್ಞಾನೇಂದ್ರ ಅವರು ತೀರ್ಥಹಳ್ಳಿಯ ನೆರಟುರು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ, ಬಹಳ ದಿನಗಳ ಬೇಡಿಕೆಯಾದ ಮೊಬೈಲ್ ಟವರ್ ಅನ್ನು, ಮಂಜೂರು ಮಾಡಿಸಿ, ಇಂದು, ಲೋಕಾರ್ಪಣೆ ಗೊಳಿಸಿದರು.
ಟವರ್ ಇಲ್ಲದ ಕಾರಣ ಸುಮಾರು ಏಳರಿಂದ ಎಂಟು ಕಿಮೀ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ಜನತೆ ಎದುರಿಸುತ್ತಿದ್ದ ಮೊಬೈಲ್ ನೆಟ್ವರ್ಕ್ ಸಮಸ್ಯೆ ಪರಿಹಾರವಾಗಿದ್ದು, ಸಮಸ್ಯೆಗೆ ಪರಿಹಾರ ಒದಗಿಸಿದ ಸಚಿವರಿಗೆ, ಗ್ರಾಮಸ್ಥರು, ಕೃತಜ್ಞತೆ ಸಲ್ಲಿಸಿ, ಸನ್ಮಾನಿಸಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಸಚಿವರು, ದೂರವಾಣಿ ಯ ಮೂಲಭೂತ ಸೌಕರ್ಯವನ್ನು ಒದಗಿಸುವುದರ ಮೂಲಕ, ಈ ಭಾಗದ ಜನತೆಗೆ ಅತ್ಯಗತ್ಯ ವಾದ ಸೌಲಭ್ಯ ದೊರಕಿದೆ ಹಾಗೂ ಸಮಸ್ಯೆಗೆ ಪರಿಹಾರ ದೊರೆತಿದೆ ಎಂದು ಸಚಿವರು ತಿಳಿಸಿದರು.
ಕಳೆದ ನಾಲ್ಕು ವರ್ಷದಲ್ಲಿ, ನೆರಟುರು ಪಂಚಾಯ್ತಿ ವ್ಯಾಪ್ತಿಯಲ್ಲಿ ಸುಮಾರು 6.8 ಕೋಟಿ ರೂಪಾಯಿಗಳ ವಿವಿಧ ಅಭಿವೃದ್ದಿ ಕಾರ್ಯಗಳಿಗೆ ಮಂಜೂರಾಗಿದ್ದು, ಎಲ್ಲಾ ಕಾಮಗಾರಿಗಳು ಪೂರ್ಣಗೊಂಡಿವೆ.
ಈ ಮೂಲಕ ಗ್ರಾಮಸ್ಥರು ನಮ್ಮ ಮೇಲೆ ಇರಿಸಿದ ವಿಶ್ವಾಸಕ್ಕೆ ಋಣಿಯಾಗಿದ್ದೇನೆ ಹಾಗೂ ಅದನ್ನು ತೀರಿಸಲು ಬದ್ದನಾಗಿದ್ದೇನೆ ಎಂದು ಸಚಿವರು ತಿಳಿಸಿದರು.
ಇದೇ ಸಂದರ್ಭದಲ್ಲಿ, ಜಿಗಳಗೊಡು ಗ್ರಾಮದಲ್ಲಿ ಕುಡಿಯುವ ನೀರು ಪೂರೈಸುವ ಬೋರ್ವೆಲ್ ಅನ್ನೂ, ಇದೇ ಸಂದರ್ಭದಲ್ಲಿ, ಸೇವೆಗೆ ಅರ್ಪಿಸಿದರು.
ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸವಿತಾ ಸತೀಶ್, ಟಿಎಪಿಎಂಸಿ ಅಧ್ಯಕ್ಷ ನಾಗರಾಜ ಶೆಟ್ಟಿ, ಬಿಜೆಪಿ ನಾಯಕ ಸಿಬಿ ಈಶ್ವರ್ ಒಳಗೊಂಡಂತೆ ಇತರ ಗಣ್ಯರು ಉಪಸ್ಥಿತರಿದ್ದರು.
ರಘುರಾಜ್ ಹೆಚ್. ಕೆ…9449553305….