
ಶಿವಮೊಗ್ಗ : ಜಿಪಂ ಸಿಇಓ.ಎಂ. ಎಲ್ . ವೈಶಾಲಿ ಯವರನ್ನ ಗದಗ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಅವರ ಜಾಗಕ್ಕೆ ನೂತನ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕರ್ನಾಟಕ ಪಂಚಾಯತ್ ರಾಜ್ ಇಲಾಖೆ ಯಲ್ಲಿ ಬೆಂಗಳೂರನಲ್ಲಿ ಸಂಪನ್ಮೂಲ ಅಧಿಕಾರಿಯಾಗಿದ್ದ ಎನ್. ಡಿ. ಪ್ರಕಾಶ್ ರವರನ್ನು
ಶಿವಮೊಗ್ಗ ಜಿಪಂ ನ ಯೋಜನಾ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಿದ್ದು .ಜೊತೆಯಲ್ಲಿ ಅವರು ಸಿಇಓ ಆಗಿ ಕಾರ್ಯನಿರ್ವಹಿಸುವಂತೆ ಸರ್ಕಾರ ಆದೇಶಿಸಿದೆ.
ಎಂ ಎಲ್ ವೈಶಾಲಿ ಅವರು ಶಿವಮೊಗ್ಗ ಉಪ ವಿಭಾಗದ ಉಪ ವಿಭಾಗಾಧಿಕಾರಿಯಾಗಿ .ಚಿಕ್ಕಮಗಳೂರು, ಹಾಸನ ಮುಂತಾದ ಜಿಲ್ಲೆಗಳಲ್ಲಿ ಸೇವೆ ಸಲ್ಲಿಸಿ,ಶಿವಮೊಗ್ಗ ಜಿಲ್ಲೆಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕರಾಗಿ ಕಳೆದ 3 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು ಐಎಎಸ್ ದರ್ಜೆಗೆ ಬಡ್ತಿ ಹೊಂದಿ ಇದೀಗ ಜಿಲ್ಲಾಧಿಕಾರಿಯಾಗಿ ವರ್ಗಾವಣೆಯಾಗಿ ಹೋಗಿದ್ದಾರೆ.
ಓಂಕಾರ್ ಎಸ್ ವಿ ತಾಳಗುಪ್ಪ….
ರಘುರಾಜ್ ಹೆಚ್.ಕೆ…9449553305….