ಕೋವಿಡ್ ಮೂರನೇ ಅಲೆ ಕೇರಳದಲ್ಲಿ ತೀವ್ರವಾಗಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕೇರಳದ ಗಡಿ ಜಿಲ್ಲೆಗಳಾದ ಉಡುಪಿ ,ಮೈಸೂರು, ಶಿವಮೊಗ್ಗ, ಚಾಮರಾಜನಗರ ,ಕೊಡಗು, ಜಿಲ್ಲಾಡಳಿತದೊಂದಿಗೆ ಮಹತ್ವದ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿಇಓ ಗಳು, ಜಿಲ್ಲಾ ಆರೋಗ್ಯ ಅಧಿಕಾರಿಗಳು ಉಪಸ್ಥಿತರಿದ್ದರು. ಈ ಸಮಯದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು ಮುಂದಿನ ದಿನಗಳಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಕೆಲವು ಮಾಹಿತಿಗಳನ್ನು ನೀಡುವುದರ ಜೊತೆಗೆ ಈಗಾಗಲೇ ಜಿಲ್ಲಾಡಳಿತ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ವಿವರಣೆಯನ್ನು ಪಡೆದರು.ಹಾಗೆ ಎಲ್ಲಾ ಮುಂಜಾಗ್ರತೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಿದರು….