Saturday, June 14, 2025
Google search engine
Homeರಾಜ್ಯಹುಣಸೆಕಟ್ಟೆ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ..!!!!

ಹುಣಸೆಕಟ್ಟೆ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ..!!!!

“””ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ-ಕಂದಾಯ ಇಲಾಖೆ’“”


ಭದ್ರಾವತಿ: ಸಾರ್ವಜನಿಕರಿಂದ ಕುಂದು ಕೊರತೆ ಅರ್ಜಿಗಳನ್ನು ಸ್ಥಳದಲ್ಲೇ ಸ್ವೀಕರಿಸಿ ಶೀಘ್ರ ಪರಿಹಾರಕ್ಕೆ ಕ್ರಮ ಕೈಗೊಳ್ಳುವ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ-ಕಂದಾಯ ಇಲಾಖೆ’ ಕಾರ್ಯಕ್ರಮವನ್ನು ಪ್ರತಿ 3ನೇ ಶನಿವಾರದಂದು ಆಯ್ದ ಗ್ರಾಮಗಳಲ್ಲಿ ಆಯೋಜಿಸಲಾಗುತ್ತಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕೆಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ತಿಳಿಸಿದರು.


ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ-ಕಂದಾಯ ಇಲಾಖೆ’ ಕಾರ್ಯಕ್ರಮದಡಿ ಇಂದು ಭದ್ರಾವತಿ ತಾಲ್ಲೂಕಿನ ಕಸಬಾ ಹೋಬಳಿಯ ಹುಣಸೆಕಟ್ಟೆ ಗ್ರಾಮದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.


ಈಗಾಗಲೇ ಹಲವು ಅರ್ಜಿಗಳನ್ನು ಸ್ವೀಕರಿಸಿ ವಿಲೇವಾರಿ ಮಾಡಲಾಗಿದ್ದು, ಇನ್ನೂ ಗ್ರಾಮಸ್ಥರು, ಸುತ್ತಮುತ್ತಲ ಗ್ರಾಮಸ್ಥರಿಂದ ಅರ್ಜಿಗಳನ್ನು ಸ್ವೀಕರಿಸಿ ಪರಿಹಾರೋಪಾಯ ಕುರಿತು ಚರ್ಚಿಸಿ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಭದ್ರಾವತಿ ಶಾಸಕರಾದ ಬಿ.ಕೆ.ಸಂಗಮೇಶ್ವರ್, ಎಡಿಸಿ ಡಾ.ನಾಗೇಂದ್ರ ಎಫ್ ಹೊನ್ನಳ್ಳಿ, ಎಸಿ ದೊಡ್ಡಗೌಡರ್, ಭದ್ರಾವತಿ ತಹಶೀಲ್ದಾರ್, ಜನಪ್ರತಿನಿಧಿಗಳು, ಅಧಿಕಾರಿಗಳು ಹಾಜರಿದ್ದರು….

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!