
ಶಿವಮೊಗ್ಗ: ಇಂದು ಬೆಳಿಗ್ಗೆ ಶಿವಮೊಗ್ಗ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಗಳಾದ ಜಿಕೆ ಮಿಥುನ್ ಕುಮಾರ್, ನೇತೃತ್ವದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು, ಪೊಲೀಸ್ ನಿರೀಕ್ಷಕರು, ಪೊಲೀಸ್ ಉಪ ನಿರೀಕ್ಷಕರು ಮತ್ತು ಸಿಬ್ಬಂಧಿಗಳನ್ನೊಳಗೊಂಡ ತಂಡವು ಕೇಂದ್ರ ಕಾರಾಗೃಹ ಶಿವಮೊಗ್ಗದಲ್ಲಿ ದಾಳಿ ನಡೆಸಿ ತಪಾಸಣೆ ಕೈಗೊಂಡಿದ್ದು,
ಈ ಸಂದರ್ಭದಲ್ಲಿ ಕಾರಾಗೃಹದ ಒಳಗೆ ತಂಬಾಕು ಉತ್ಪನ್ನಗಳಾದ ಬೀಡಿ ಮತ್ತು ಸಿಗರೇಟ್, ಬೆಂಕಿ ಪೊಟ್ಟಣಗಳು, ಲೈಟರ್ ಗಳು ಹಾಗೂ ಪ್ಲಾಸ್ಟಿಕ್ ಬಾಟಲ್ ನಿಂದ ಮಾರ್ಪಡಿಸಿ ತಯಾರಿಸಿದ ತಂಬಾಕು ಸೇದುವ ಚಿಲುಮೆ (ಹುಕ್ಕ) ಗಳು ದೊರೆತಿದ್ದು, ಸದರಿ ವಸ್ತುಗಳನ್ನು ಅಮಾನತ್ತು ಪಡಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
ರಘುರಾಜ್ ಹೆಚ್.ಕೆ…9449553305…