Wednesday, May 7, 2025
Google search engine
Homeರಾಜ್ಯಎಲೆಚುಕ್ಕಿ ರೋಗ ಅಧ್ಯಯನಕ್ಕೆ ಸಮಿತಿ ರಚನೆ: ಗೃಹ ಸಚಿವ ಆರಗ ಜ್ಞಾನೇಂದ್ರ ಸ್ವಾಗತ...!!

ಎಲೆಚುಕ್ಕಿ ರೋಗ ಅಧ್ಯಯನಕ್ಕೆ ಸಮಿತಿ ರಚನೆ: ಗೃಹ ಸಚಿವ ಆರಗ ಜ್ಞಾನೇಂದ್ರ ಸ್ವಾಗತ…!!

ಎಲೆ ಚುಕ್ಕಿ ರೋಗ ಅಧ್ಯಯನಕ್ಕೆ ಸಮಿತಿ ರಚನೆ: ಗೃಹ ಸಚಿವ ಆರಗ ಜ್ಞಾನೇಂದ್ರ ಸ್ವಾಗತ...!!

ರಾಜ್ಯದಲ್ಲಿ ಅಡಿಕೆ ತೋಟಗಳಲ್ಲಿ ಹಬ್ಬಿರುವ ಎಲೆಚುಕ್ಕೆ ರೋಗದ ಬಗ್ಗೆ ಅಧ್ಯಯನ ನಡೆಸಿ, ಪರಿಹಾರ ಕಂಡುಕೊಳ್ಳಲು, ಕೇಂದ್ರ ಸರಕಾರದ ಏಳು ಮಂದಿ ತಜ್ಞರನ್ನು ಒಳಗೊಂಡ ತಜ್ನರ ನೇಮಕಾತಿ ನಿರ್ಧಾರವನ್ನು, ಗೃಹ ಸಚಿವ ಆರಗ ಜ್ಞಾನೇಂದ್ರ ರವರು, ಸ್ವಾಗತಿಸಿದ್ದಾರೆ.

ಈ ಬಗ್ಗೆ, ಮಾಧ್ಯಮಗಳ ಜತೆ ಮಾತನಾಡಿರುವ ಸಚಿವರು, ಮಲೆನಾಡು ಹಾಗೂ ಕರಾವಳಿ ಭಾಗದ ರೈತರು ಎದುರಿಸುತ್ತಿರುವ ಸಂಕಷ್ಟಕ್ಕೆ, ಕೇಂದ್ರ ಸರಕಾರ, ತಕ್ಷಣ ಸ್ಪಂದಿಸಿದ್ದು, ಅಡಿಕೆ ಬೆಳೆಗೆ ಎದುರಾಗಿರುವ ರೋಗ ನಿವಾರಣೆಗೆ, ಸಮಿತಿ ಪರಿಹಾರ ಕಂಡುಕೊಳ್ಳಲು ಸಹಕಾರಿಯಾಗಲಿ, ಎಂದು ಹಾರೈಸಿದ್ದಾರೆ.

ಕಳೆದ ವಾರವಷ್ಟೇ, ಅಡಿಕೆ ಬೆಳೆಗಾರರ ಆತಂಕಕ್ಕೆ ಕಾರಣವಾದ, ಎಲೆ ಚುಕ್ಕೆ ರೋಗಕ್ಕೆ ಪರಿಹಾರ ಬಯಸಿ, ನಿಕಟಪೂರ್ವ ಮುಖ್ಯಮಂತ್ರಿಗಳೂ ಹಾಗೂ ಹಿರಿಯ ಬಿಜೆಪಿ ನಾಯಕರಾದ ಬಿ ಎಸ್ ಯಡಿಯೂರಪ್ಪ ನವರ ನೇತೃತ್ವದಲ್ಲಿ, ಕೇಂದ್ರ ಕೃಷಿ ಸಚಿವ ನರೆಂದ್ರ ಸಿಂಗ್ ತೋಮರ್ ಅವರಿಗೆ, ನವದೆಹಲಿಯಲ್ಲಿ ನಿಯೋಗ, ಭೇಟಿಯಾಗಿ, ಮನವಿ ಸಲ್ಲಿಸಿದ್ದು, ಕೇಂದ್ರ ಸರಕಾರ, ಸಮಸ್ಯೆಯ ಪರಿಹಾರಕ್ಕೆ, ಕ್ಷಿಪ್ರ ಗತಿಯಲ್ಲಿ, ಸ್ಪಂದಿಸಿ, ಸಮಿತಿ ರಚಿಸಿದೆ, ಎಂದರು.

ರಾಜ್ಯದಲ್ಲಿ ಸುಮಾರು 20 ಸಾವಿರ ಹೆಕ್ಟೇರ್ ಪ್ರದೇಶದ ಅಡಿಕೆ ತೋಟಗಳು, ಎಲೆ ಚುಕ್ಕೆ ರೋಗಕ್ಕೆ ಬಲಿಯಾಗಿದ್ದು, ಕಾಳ್ಗಿಚ್ಚಿನಂತೆ, ಇತರೆಡೆ ಹರಡುತ್ತಿದೆ, ಎಂದು, ಸಚಿವರು, ಆತಂಕ ವ್ಯಕ್ತಪಡಿಸಿದರು.

ಸರಿಸುಮಾರು ಐವತ್ತು ಲಕ್ಷ ಜನರಿಗೆ, ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಜೀವನೋಯ ಕಲ್ಪಿಸಿಕೊಟ್ಟಿ ರುವ, ಅಡಿಕೆ ಬೆಳೆ, ನಮ್ಮ ಭಾಗದ ರೈತರ ಆರ್ಥಿಕ ಜೀವನಾಡಿಯಾಗಿದೆ, ಎಂದು ಹೇಳಿದ್ದಾರೆ.

ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕರಾವಳಿ ಭಾಗದಲ್ಲಿ, ರೈತ ಸಮುದಾಯದ ಜೀವನಾಡಿಯದ, ಅಡಿಕೆ ಬೆಳೆ, ಎಲೆ ಚುಕ್ಕೆ ರೋಗದಿಂದ, ನಲುಗಿದ್ದು, ನಿಯಂತ್ರಣ ಬಗ್ಗೆ ಕೇಂದ್ರ ಸರಕಾರದ ಗಮನ ಸೆಳೆಯಲು, ಮಾಜಿ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ, ಶಿವಮೊಗ್ಗ ಸಂಸದ ಬಿ ವೈ ರಾಘವೇಂದ್ರ, ಗೃಹ ಸಚಿವ ಆರಗ ಜ್ಞಾನೇಂದ್ರ ರವರು, ಬಿಜೆಪಿ ಶಾಸಕ ಹರತಾಳು ಹಾಲಪ್ಪ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯ ಕೃಷ್ಣ ಭಟ್ ರವರು, ಕಳೆದ ವಾರ, ಕೇಂದ್ರ ಕೃಷಿ ಸಚಿವ ನರೆಂದ್ರ ಸಿಂಗ್ ತೋಮರ್ ಅವರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
Big news :ಮಾಜಿ ಡಿಸಿಎಂ ಈಶ್ವರಪ್ಪ ನವರಿಂದ ನಿರೀಕ್ಷಣಾ ಜಾಮೀನಿಗೆ ಅರ್ಜಿ..! ಕಾರಣವೇನು..?! ಕೆಲಕಾಲ ಕಾರ್ಯದ ಒತ್ತಡದಿಂದ ಮುಕ್ತರಾಗಿ ಸಂತಸದ ದಿನ ಕಳೆಯಲು ಸೂಕ್ತ ವಾತಾವರಣ ನಿರ್ಮಿಸುತ್ತಿರುವುದು ಉತ್ತಮ ಬೆಳವಣಿಗೆ ಜ... Shivamogga breaking:ಪೊಲೀಸರಿಂದ ಆರೋಪಿ ಕಾಲಿಗೆ ಗುಂಡೇಟು..! Shivamogga breaking:ಪಾಲಿಕೆಯ ನಿಷ್ಕ್ರಿಯ ಆಯುಕ್ತೆ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ ಸಾಧ್ಯತೆ..?! 8 ಜನ ಅಧಿಕಾರಿ... ಬೀದಿ ನಾಯಿಗಳ ಸಂತಾನ ಹರಣಕ್ಕೆ ದಿನಾಂಕ ಫಿಕ್ಸ್..! ಇಬ್ಬರು ಮಹಿಳೆಯರು ನಾಪತ್ತೆ..! ಮಿನಿಸ್ಟರ್ ಮಧು ಬಂಗಾರಪ್ಪನವರ ಮಗ ಸೂರ್ಯನ ಸಾಧನೆ..! ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..!