Saturday, May 3, 2025
Google search engine
Homeರಾಜ್ಯನಾಡಪ್ರಭು ಕೆಂಪೇಗೌಡರ ಪ್ರತಿಮೆ ನಿರ್ಮಾಣ..!! ಜಿಲ್ಲೆಯಲ್ಲಿ ಪವಿತ್ರ ಮಣ್ಣು ಸಂಗ್ರಹ ಅಭಿಯಾನ ಯಶಸ್ವಿಗೆ ಕ್ರಮ :...

ನಾಡಪ್ರಭು ಕೆಂಪೇಗೌಡರ ಪ್ರತಿಮೆ ನಿರ್ಮಾಣ..!! ಜಿಲ್ಲೆಯಲ್ಲಿ ಪವಿತ್ರ ಮಣ್ಣು ಸಂಗ್ರಹ ಅಭಿಯಾನ ಯಶಸ್ವಿಗೆ ಕ್ರಮ : ಜಿಲ್ಲಾಧಿಕಾರಿ ಡಾ.ಸೆಲ್ವಮಣಿ..!!!

ಶಿವಮೊಗ್ಗ: ನಾಡಪ್ರಭು ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆ ನಿರ್ಮಾಣ ಕಾರ್ಯಕ್ಕಾಗಿ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಮಣ್ಣು ಸಂಗ್ರಹ ಅಭಿಯಾನಕ್ಕೆ ಅಕ್ಟೋಬರ್ 28ರಂದು ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣ ಗೌಡ ಅವರು ಚಾಲನೆ ನೀಡಲಿದ್ದು, ಅಭಿಯಾನದ ಯಶಸ್ವಿಗೆ ಎಲ್ಲರೂ ಕೈ ಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ ಅವರು ತಿಳಿಸಿದರು.

ಅವರು ಗುರುವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅಭಿಯಾನದ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದರು.

ಸರ್ಕಾರದ ಮಾರ್ಗಸೂಚಿ ಪ್ರಕಾರ ಎಲ್ಲಾ ತಾಲೂಕು ಕೇಂದ್ರಗಳು, ಆಯ್ದ ಗ್ರಾಮಗಳಲ್ಲಿ ಅಭಿಯಾನದ ಕೆಂಪೇಗೌಡ ರಥ ಸಂಚರಿಸಲಿದ್ದು, ಸ್ಥಳೀಯವಾಗಿ ರಥವನ್ನು ಸ್ವಾಗತಿಸಬೇಕು. ಈ ಸಂದರ್ಭದಲ್ಲಿ ಚುನಾಯಿತ ಪ್ರತಿನಿಧಿಗಳು, ಸ್ವಾತಂತ್ರ್ಯ ಹೋರಾಟಗಾರರು, ಸಾಹಿತಿಗಳು, ಪ್ರಗತಿಪರ ರೈತರು, ಧಾರ್ಮಿಕ ಮುಖಂಡರು ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿರಲು ಕ್ರಮ ಕೈಗೊಳ್ಳಬೇಕು. ಕೆರೆ, ನದಿ, ಪುಣ್ಯ ಕ್ಷೇತ್ರ, ಐತಿಹಾಸಿಕ ತಾಣಗಳಿಂದ ಸಂಗ್ರಹಿಸಿದ ಮಣ್ಣನ್ನು ಈಗಾಗಲೇ ಒದಗಿಸಲಾಗಿರುವ ಚೀಲದಲ್ಲಿ ತುಂಬಿ ಊರ ಪ್ರಮುಖರ ಸಮ್ಮುಖದಲ್ಲಿ ಹಸ್ತಾಂತರಿಸಬೇಕು ಎಂದು ಹೇಳಿದರು.

ಕೆಂಪೇಗೌಡ ರಥ ಸಂಚರಿಸುವ ಮಾರ್ಗದ ನಕ್ಷೆಯನ್ನು ಈಗಾಗಲೇ ಸಿದ್ಧಪಡಿಸಲಾಗಿದ್ದು, ಅಭಿಯಾನದ ಯಶಸ್ವಿಗೆ ತಾಲೂಕು ಮಟ್ಟದಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಜಿಲ್ಲೆಯ ಎಲ್ಲಾ 262 ಗ್ರಾಮ ಪಂಚಾಯತ್‍ಗಳು, 9 ನಗರ ಸ್ಥಳೀಯ ಸಂಸ್ಥೆಗಳು ಮತ್ತು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಣ್ಣನ್ನು ಸಂಗ್ರಹಿಸಲು ಸೂಚಿಸಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವರು ಶುಕ್ರವಾರ ಮಧ್ಯಾಹ್ನ 3ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕೆಂಪೇಗೌಡ ರಥಕ್ಕೆ ಹಸಿರು ನಿಶಾನೆ ನೀಡುವ ಮೂಲಕ ಚಾಲನೆ ನೀಡುವರು. ನವೆಂಬರ್ 5ರಂದು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಿಲ್ಲೆಯ ಎಲ್ಲಾ ಕಡೆಗಳಿಂದ ಸಂಗ್ರಹಿಸಿದ ಮಣ್ಣನ್ನು ವಿಧ್ಯುಕ್ತವಾಗಿ ಹಸ್ತಾಂತರಿಸಲಾಗುವುದು ಎಂದು ಹೇಳಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಡಿ.ಪ್ರಕಾಶ್, ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ್, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

ರಘುರಾಜ್ ಹೆಚ್.ಕೆ…9449553305….

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಬೀದಿ ನಾಯಿಗಳ ಸಂತಾನ ಹರಣಕ್ಕೆ ದಿನಾಂಕ ಫಿಕ್ಸ್..! ಇಬ್ಬರು ಮಹಿಳೆಯರು ನಾಪತ್ತೆ..! ಮಿನಿಸ್ಟರ್ ಮಧು ಬಂಗಾರಪ್ಪನವರ ಮಗ ಸೂರ್ಯನ ಸಾಧನೆ..! ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ...