Home ರಾಜ್ಯG P S ಮೂಲಕ ಉದ್ಯಮಿಯನ್ನು ಹಿಂಬಾಲಿಸಿ 50 ಲಕ್ಷ ದೋಚಿದ 9ಮಂದಿ ದರೋಡೆಕೋರರ ಬಂಧನ..!! ಶಿರಸಿ ಪೊಲೀಸರ ಕಾರ್ಯಾಚರಣೆಗೆ ಸಾಮಾಜಿಕ ಜಾಲ ತಾಣಗಳಲ್ಲಿ ವ್ಯಾಪಕ ಪ್ರಶಂಸೆ…!!!

G P S ಮೂಲಕ ಉದ್ಯಮಿಯನ್ನು ಹಿಂಬಾಲಿಸಿ 50 ಲಕ್ಷ ದೋಚಿದ 9ಮಂದಿ ದರೋಡೆಕೋರರ ಬಂಧನ..!! ಶಿರಸಿ ಪೊಲೀಸರ ಕಾರ್ಯಾಚರಣೆಗೆ ಸಾಮಾಜಿಕ ಜಾಲ ತಾಣಗಳಲ್ಲಿ ವ್ಯಾಪಕ ಪ್ರಶಂಸೆ…!!!

by EDITOR NEWS WARRIORS
1 comment

ಶಿರಸಿ: ಕಳೆದ ಎಂಟು ದಿನಗಳ ಹಿಂದೆ ತಾಲೂಕಿನ ಬನವಾಸಿ ಸಮೀಪದ ಅಂಡಗಿ ಸಮೀಪ ನಡೆದ 50 ಲಕ್ಷ ರೂ.ದರೋಡೆಗೆ ಸಂಬಂಧಿಸಿ 9 ಮಂದಿ ಅಂತರ್ ಜಿಲ್ಲಾ ದರೋಡೆಕೋರರನ್ನು ಶಿರಸಿ ಉಪ ವಿಭಾಗದ ಪೊಲೀಸರು ಬಂಧಿಸಿ 13.82 ಲಕ್ಷ ರೂ. ವಶಪಡಿಸಿಕೊಂಡಿದ್ದಾರೆ.ನ.19 ರ ಸಂಜೆ ಹಸನ್ ಜಾವೇದ್‌ಖಾನ್ ಎಂಬುವವರು ತನ್ನ ಇಬ್ಬರು ಸಂಬಂಧಿಕರೊಂದಿಗೆ 50 ಲಕ್ಷ ರೂ.ತೆಗೆದುಕೊಂಡು ಬೆಳಗಾವಿಯಲ್ಲಿ ಸೈಟ್ ನೋಡಿಕೊಂಡು ಕಾರಿನಲ್ಲಿ ವಾಪಸ್ ಬರುತ್ತಿರುವಾಗ ಅಂಡಗಿ ಬಸ್ ನಿಲ್ದಾಣದ ಹತ್ತಿರ ಒಂದು ಕೆಂಪು ಬಣ್ಣದ ಕಾರಿನಲ್ಲಿ ಬಂದ ದರೋಡೆಕೋರರು ಅಡ್ಡ ಹಾಕಿದ್ದರು. ಹಿಂಬದಿ ಸೀಟಿನ ಮೇಲಿದ್ದ 50 ಲಕ್ಷ ರೂಪಾಯಿ ಹಣವಿದ್ದ ಪ್ಲಾಸ್ಟಿಕ್ ಚೀಲವನ್ನು ಕಸಿದುಕೊಂಡು ಪರಾರಿಯಾದ ಬಗ್ಗೆ ಬನವಾಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಬಗ್ಗೆ ಸಿಪಿಐ ರಾಮಚಂದ್ರ ನಾಯಕ ನೇತೃತ್ವದಲ್ಲಿ ತಂಡ ರಚನೆ ಮಾಡಿ ಕಾರ್ಯಾಚರಣೆ ನಡೆಸಿ ಪ್ರಕರಣ ಭೇಧಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿ ಆಸೀಫ್ ಅಬ್ದುಲ್ ಸತ್ತಾರ್ ಸಾಗರ, ಅಬ್ದುಲ್ ಹಮೀದ್ ಅಬ್ದುಲ್ ಸತ್ತಾರ್ ಸಿದ್ಧಾಪುರ, ಅಜಿಮುಲ್ಲಾ ಅಕ್ಷರಸಾಬ್ ಸಿದ್ಧಾಪುರ, ಮನ್ಸೂರ್ ಜಾಫರ್ ಖಾನ್ ಸಾಗರ, ಅಬ್ದುಲ್ ರೆಹಮಾನ್ ಶಟ್ಟರ್ ವಟರಾಗ ಭಟ್ಕಳ, ರಿಯಾಜ್ ಫಯಾಜ್ ಕೊಪ್ಪ,ವಿಶ್ವನಾಥ ವಾಸು ಶೆಟ್ಟಿ ಕೊಪ್ಪ, ಮನೋಹರ ಆನಂದ ಶೆಟ್ಟಿ ಕೊಪ್ಪ, ಈಕ್ವಾಲ್ ಅಬ್ದುಲ್ ಕೆ. ತೀರ್ಥಹಳ್ಳಿ ಇವರುಗಳನ್ನು ಬಂಧಿಸಲಾಗಿದೆ.

ಬಂಧಿತರಿಂದ ಕೃತ್ಯಕ್ಕೆ ಉಪಯೋಗಿಸಿದ ಎರಡು ಕಾರು, 12 ಮೊಬೈಲ್ ಹಾಗೂ ಜಿಪಿಎಸ್ ಟ್ರ‍್ಯಾಕರ್ ವಶಪಡಿಸಿಕೊಳ್ಳಲಾಗಿದೆ. ಇನ್ನೂ ಕೆಲ ಆರೋಪಿಗಳ ಪತ್ತೆ ಹಾಗೂ ನಗದು ಜಪ್ತು ಬಾಕಿ ಇದ್ದು ತನಿಖೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಟ್ರ್ಯಾಕರ್ ಬಳಸಿ ಬೆನ್ನು ಬಿದ್ದಿದ್ದರು”

ಉದ್ಯಮಿ ಜಾವೇದ್ ಹಣಕಾಸು ವ್ಯವಹಾರ ಅರಿತಿದ್ದ ಆಸಿಫ್, ಆಗಾಗ ಉದ್ಯಮಿಯ ಮನೆಗೆ ಭೇಟಿ ನೀಡುತ್ತಿದ್ದ. ಭೂಮಿ ಖರೀದಿಗೆ ಬೆಳಗಾವಿಗೆ ತೆರಳುವುದನ್ನು ಅರಿತಿದ್ದರಿಂದ ವಾಹನಕ್ಕೆ ಜಿ.ಪಿ.ಎಸ್. ಟ್ರ್ಯಾಕರ್ ಅಳವಡಿಸಿದ್ದ. ನಿರಂತರವಾಗಿ ಟ್ರ್ಯಾಕರ್ ಮೂಲಕ ಚಲನವಲನ ಗಮನಿಸುತ್ತಿದ್ದ ಈತ ಸಹಚರರ ಜತೆ ಸೇರಿ ನಿರ್ಜನ ಪ್ರದೇಶದಲ್ಲಿ ಅಡ್ಡಗಟ್ಟಿ ಕೃತ್ಯ ಎಸಗಿದ್ದ’ ಎಂದು ತನಿಖೆಯ ನೇತೃತ್ವ ವಹಿಸಿದ್ದ ಡಿಎಸ್ಪಿ ರವಿ ನಾಯ್ಕ ವಿವರಿಸಿದರು.

ಈ ಪ್ರಕರಣದ ಪತ್ತೆಕಾರ್ಯದಲ್ಲಿ ಉಸ್ತುವಾರಿ ವಹಿಸಿದ ಡಿವೈಎಸ್‌ಪಿ ರವಿ ಡಿ. ನಾಯ್ಕ, ತನಿಖಾಧಿಕಾರಿಯಾದ ಸಿಪಿಐ ರಾಮಚಂದ್ರ ನಾಯಕ, ಪತ್ತೆ ತಂಡದ ಅಧಿಕಾರಿ ಪಿಎಸ್‌ಐಗಳಾದ ಹನುಮಂತ ಬಿರಾದಾರ, ಭೀಮಾ ಶಂಕರ ಸಿನೂರು, ಚಂದ್ರಕಲಾ ಪತ್ತಾರ, ಸಿಬಂದಿಗಳ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿ ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಎನ್ ಬಹುಮಾನ ಘೋಷಿಸಿದ್ದಾರೆ.

ಓಂಕಾರ ಎಸ್. ವಿ. ತಾಳಗುಪ್ಪ….

ರಘುರಾಜ್ ಹೆಚ್.ಕೆ..9449553305…

Related Articles

1 comment

mitolyn official January 26, 2026 - 8:48 am

**mitolyn official**

Mitolyn is a carefully developed, plant-based formula created to help support metabolic efficiency and encourage healthy, lasting weight management.

Reply

Leave a Comment

Latest news
Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?!