Home ರಾಜ್ಯಮಳೂರು ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಹೇಗಿತ್ತು..?!

ಮಳೂರು ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಹೇಗಿತ್ತು..?!

by EDITOR NEWS WARRIORS
1 comment


ಶಿವಮೊಗ್ಗ: ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ-ಕಂದಾಯ ಇಲಾಖೆ’ ಕಾರ್ಯಕ್ರಮದಡಿ ಜಿಲ್ಲಾಧಿಕಾರಿ
ಡಾ.ಆರ್ ಸೆಲ್ವಮಣಿ ಇವರು ಇಂದು ಶಿಕಾರಿಪುರ ತಾಲ್ಲೂಕಿನ ತಾಳಗುಂದ ಹೋಬಳಿಯ ಮಳೂರು ಗ್ರಾಮಕ್ಕೆ ಭೇಟಿ ನೀಡಿ, ಗ್ರಾಮ ವಾಸ್ತವ್ಯ ಮಾಡಿದರು.
ಜಿಲ್ಲಾಧಿಕಾರಿಗಳು ಮೊದಲಿಗೆ ಮಳೂರು ಗ್ರಾಮದ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದರು. ನಂತರ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ತೆರಳಿ, ಮಕ್ಕಳಿಗೆ ನೀಡುವ ಪೌಷ್ಟಿಕ ಆಹಾರ, ಇತರೆ ವ್ಯವಸ್ಥೆಯನ್ನು ಪರಿಶೀಲಿಸಿ ಮಕ್ಕಳೊಂದಿಗೆ ಸಂವಾದ ನಡೆಸಿದರು. ಮಳೂರಿನ ನ್ಯಾಯಬೆಲೆ ಅಂಗಡಿಗೆ ತೆರಳಿ ಪರಿಶೀಲನೆ ನಡೆಸಿದರು. ತದನಂತರ ಮಳೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಶಾಲೆಯಲ್ಲಿನ ಅಕ್ಷರ ದಾಸೋಹ ಆಹಾರ ಕೊಠಡಿ ಹಾಗೂ ಇತರೆ ಮೂಲಭೂತ ಸೌಕರ್ಯಗಳ ಪರಿಶೀಲನೆ ನಡೆಸಿ, ಮಕ್ಕಳೊಂದಿಗೆ ಸಂವಾದ ನಡೆಸಿದರು. ಮಧ್ಯಾಹ್ನ ಗ್ರಾ.ಪಂ ಅಧ್ಯಕ್ಷರು ಹಾಗೂ ಸದಸ್ಯರೊಂದಿಗೆ ಚರ್ಚೆ ನಡೆಸಿದರು.
ನಂತರ ಗ್ರಾಮದ ಮಾರಿಕಾಂಬ ಸಮುದಾಯ ಭವನದಲ್ಲಿ ಏರ್ಪಡಿಸಲಾಗಿದ್ದ ವೇದಿಕೆ ಕಾರ್ಯಕ್ರಮದಲ್ಲಿ ಕಂದಾಯ ಮತ್ತು ಇತರೆ ಎಲ್ಲಾ ಇಲಾಖೆಯ ಅಧಿಕಾರಿಗಳೊಂದಿಗೆ ಗ್ರಾಮಸ್ಥರಿಂದ ಕುಂದುಕೊರತೆಗಳನ್ನು ಆಲಿಸಿ ಅರ್ಜಿಗಳನ್ನು ಸ್ವೀಕರಿಸಿದರು,


ಎಸ್‍ಸಿ/ಎಸ್‍ಟಿ ಕಾಲೋನಿಗಳಿಗೆ ಭೇಟಿ ನೀಡಿ ಸ್ಥಳೀಯರೊಂದಿಗೆ ಸಮಾಲೋಚಿಸಿದರು. ನಂತರ ತೊಗರ್ಸಿಯ ಶ್ರೀ ಚೆನ್ನಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದರು.
ಕಾರ್ಯಕ್ರಮದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಅಪರ ಜಿಲ್ಲಾಧಿಕಾರಿ ನಾಗೇಂದ್ರ ಎಫ್ ಹೊನ್ನಳ್ಳಿ, ಪ್ರಭಾರ ಐಎಎಸ್ ಅಧಿಕಾರಿ ದಲ್ಜೀತ್ ಸಿಂಗ್, ತಹಶೀಲ್ದಾರ್, ಇತರೆ ಅಧಿಕಾರಿಗಳು ಪಾಲ್ಗೊಂಡಿದ್ದರು…

Related Articles

1 comment

mitolyn reviews January 26, 2026 - 6:34 am

**mitolyn reviews**

Mitolyn is a carefully developed, plant-based formula created to help support metabolic efficiency and encourage healthy, lasting weight management.

Reply

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...