Home ರಾಜ್ಯPOLITICAL BREAKING ::ಮಾಜಿ ಸಚಿವ ಈಶ್ವರಪ್ಪನವರಿಗೆ ಸಚಿವ ಸ್ಥಾನ ಇಂದು ಫೈನಲ್ ಆಗುತ್ತಾ..?! ಇನ್ನಷ್ಟು ಹೊಸ ಮುಖಗಳಿಗೆ ಸಚಿವ ಸಂಪುಟದಲ್ಲಿ ಸ್ಥಾನ ಸಿಗುತ್ತಾ..?!

POLITICAL BREAKING ::ಮಾಜಿ ಸಚಿವ ಈಶ್ವರಪ್ಪನವರಿಗೆ ಸಚಿವ ಸ್ಥಾನ ಇಂದು ಫೈನಲ್ ಆಗುತ್ತಾ..?! ಇನ್ನಷ್ಟು ಹೊಸ ಮುಖಗಳಿಗೆ ಸಚಿವ ಸಂಪುಟದಲ್ಲಿ ಸ್ಥಾನ ಸಿಗುತ್ತಾ..?!

by EDITOR NEWS WARRIORS
0 comments


ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪ್ರಕರಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಸ್ಥಾನಕ್ಕೆ ಶಿವಮೊಗ್ಗ ನಗರದ ಶಾಸಕ ಕೆ ಎಸ್ ಈಶ್ವರಪ್ಪನವರು ಷರತ್ತು ಬದ್ಧ ರಾಜೀನಾಮೆ ನೀಡಿದ್ದರು. ಸಂತೋಷ್ ಪ್ರಕರಣದಲ್ಲಿ ಕ್ಲೀನ್ ಚಿಟ್ ಸಿಕ್ಕರೆ ಮತ್ತೆ ಸಚಿವ ಸ್ಥಾನ ನೀಡಬೇಕು ಅದೇ ಖಾತೆಯನ್ನೇ ನೀಡಬೇಕು ಎನ್ನುವ ಬೇಡಿಕೆಯನ್ನು ವರಿಷ್ಠರ ಮುಂದೆ ಹಾಗೂ ಮುಖ್ಯಮಂತ್ರಿಗಳ ಮುಂದೆ ಇಟ್ಟಿದ್ದರು. ಇದಕ್ಕೆ ಒಪ್ಪಿ ಆ ಸಮಯದಲ್ಲಿ ಪಕ್ಷಕ್ಕೆ ಆಗುತ್ತಿದ್ದ ಮುಜುಗರವನ್ನು ತಪ್ಪಿಸಿಕೊಳ್ಳಲು ರಾಜೀನಾಮೆಯನ್ನು ಕೂಡಲೆ ಅಂಗೀಕಾರ ಮಾಡಿಕೊಂಡಿದ್ದರು.

ಈಗ ಮಾಜಿ ಸಚಿವ ಈಶ್ವರಪ್ಪ ರವರ ಸರದಿ,

40 ಪರ್ಸೆಂಟ್ ಹಗರಣದಲ್ಲಿ ಗುತ್ತಿಗೆದಾರ ಸಂತೋಷ್ ಪ್ರಕರಣದಲ್ಲಿ ಪೊಲೀಸ್ ಇಲಾಖೆಯಿಂದ ಕ್ಲೀನ್ ಚೀಟ್ ಸಿಕ್ಕಿರುವುದರಿಂದ ಈಗ ನನಗೆ ಮತ್ತೆ ಸಚಿವ ಸ್ಥಾನ ನೀಡಬೇಕು ಎಂದ ವರಿಷ್ಠರಲ್ಲಿ ಹಾಗೂ ಮುಖ್ಯಮಂತ್ರಿಗಳಲ್ಲಿ ಶಾಸಕ ಈಶ್ವರಪ್ಪ ಬೇಡಿಕೆ ಇಟ್ಟಿದ್ದಾರೆ. ಹಾಗೆ ಸದನಕ್ಕೂ ಹೋಗದೆ ಪ್ರತಿಭಟನೆ ಮಾಡಿ ತಮ್ಮ ಅಸಮಾಧಾನವನ್ನು ಹೊರಹಾಕಿದ್ದರು. ಇದಕ್ಕೆ ಸ್ಪಂದಿಸಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ ಹಾಗೂ ಮಾಜಿ ಸಚಿವ ಈಶ್ವರಪ್ಪನವರಿಗೆ ಸದನಕ್ಕೆ ಹಾಜರಾಗಿ ತಮಗೆ ಸಂಪುಟದಲ್ಲಿ ಸ್ಥಾನ ನೀಡಲು ಪ್ರಯತ್ನಿಸುತ್ತೇನೆ ಎಂದು ಭರವಸೆ ನೀಡಿದ್ದರು.ಇದೀಗ ಆ ಭರವಸೆಯ ಮೇರೆಗೆ ದೆಹಲಿ ಪ್ರವಾಸ ಕೈಗೊಳ್ಳುತ್ತಿದ್ದು. ಹೈಕಮಾಂಡ್ ಮುಂದೆ ಐದು ಜನ ಶಾಸಕರಿಗೆ ಸಚಿವ ಸ್ಥಾನ ನೀಡುವಂತೆ ಬೇಡಿಕೆ ಇಡುತ್ತಿದ್ದಾರೆ ಎನ್ನಲಾಗುತ್ತಿದೆ…

ಮಾಜಿ ಸಚಿವ ಜಾರಕಿಹೊಳಿ, ಬಸನಗೌಡ ಯತ್ನಾಳ್ ರೇಣುಕಾಚಾರ್ಯ ಮಾಜಿ ಸಚಿವ ಈಶ್ವರಪ್ಪ ಸೇರಿದಂತೆ ಇನ್ನಷ್ಟು ಹೊಸ ಮುಖಗಳಿಗೆ ಸಚಿವ ಸಂಪುಟದಲ್ಲಿ ಸ್ಥಾನ ಸಿಗುವ ಸಾಧ್ಯತೆ ಇದೆ…

ರಘುರಾಜ್ ಹೆಚ್.ಕೆ..9449553305…

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...