Home ರಾಜ್ಯHIGHCOURT : ಕಡು ಬಡತನದ ತಳ ಸಮುದಾಯದ ಯುವತಿ ಗಾಯಿತ್ರಿ 25 ನೇ ವಯಸ್ಸಿಗೆ ಹೈಕೋರ್ಟ್ ಸಿವಿಲ್ ನ್ಯಾಯಾಧೀಶೆ ಯಾಗಿ ಆಯ್ಕೆ..!!

HIGHCOURT : ಕಡು ಬಡತನದ ತಳ ಸಮುದಾಯದ ಯುವತಿ ಗಾಯಿತ್ರಿ 25 ನೇ ವಯಸ್ಸಿಗೆ ಹೈಕೋರ್ಟ್ ಸಿವಿಲ್ ನ್ಯಾಯಾಧೀಶೆ ಯಾಗಿ ಆಯ್ಕೆ..!!

by EDITOR NEWS WARRIORS
0 comments

ಕರ್ನಾಟಕ ಹೈ ಕೋರ್ಟ್‌ನ ಸಿವಿಲ್ ನ್ಯಾಯಾಧೀಶೆಯಾಗಿ ಬಂಗಾರಪೇಟೆಯ ಎನ್.ಗಾಯಿತ್ರಿ ರವರು ಆಯ್ಕೆಯಾಗಿ ಬಂಗಾರಪೇಟೆ ತಾಲ್ಲೂಕಿಗೆ ಕೀರ್ತಿ ತಂದಿದ್ದಾರೆ.
2021ರಲ್ಲಿ ಕಾನೂನು ಪದವಿ ಪಡೆದುಕೊಂಡಿರುವ ಗಾಯತ್ರಿರವರು ತಾವು ಕಂಡ ಕನಸನ್ನು ನನಸು ಮಾಡಿಕೊಳ್ಳುವ ನಿಟ್ಟಿನಲ್ಲಿ ಸತತ ಮತ್ತು ಸರಿಯಾದ ಪ್ರಯತ್ನದ ಮೂಲಕ 25ನೇ ವಯಸ್ಸಿಗೆ ಕರ್ನಾಟಕ ಸಿವಿಲ್ ಕೋರ್ಟ್‌ನ ನ್ಯಾಯಾಧೀಶರಾಗಿ ಆಯ್ಕೆಯಾಗುವಲ್ಲಿ ಯಶಸ್ವಿಯಾಗಿದ್ದಾರೆ.
ಕರ್ನಾಟಕ ಉಚ್ಛ ನ್ಯಾಯಾಲಯವು ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿತ್ತು. ಇದೀಗ ಫಲಿತಾಂಶ ಪ್ರಕಟಗೊಂಡಿದ್ದು ಗಾಯತ್ರಿ ಅವರು ಆಯ್ಕೆಯಾಗಿದ್ದಾರೆ.

ಅತ್ಯಂತ ತಳ ಸಮುದಾಯದ ಮತ್ತು ಬಡತನದ ಹಿನ್ನೆಲೆಯಿಂದ ಬಂದ ಗಾಯತ್ರಿರವರು ಬಂಗಾರಪೇಟೆಯ ಕಾರಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿಧ್ಯಾಭ್ಯಾಸ ಆರಂಭಿಸಿ ಬಾಲಕಿಯ ಪ್ರೌಢಶಾಲೆಯಲ್ಲಿ ಓದಿ ಪದವಿ ಪೂರ್ವ ಕಾಲೇಜು ಶಿಕ್ಷಣ ಪಡೆದುಕೊಂಡಿದ್ದರು.
ಕೆಜಿಎಫ್‌ನ ಕೆಂಗಲ್ ಹನುಮಂತಯ್ಯ ಲಾ ಕಾಲೇಜಿನಲ್ಲಿ ಕಾನೂನು ಪದವಿಯಲ್ಲಿ ಕರ್ನಾಟಕಕ್ಕೆ ನಾಲ್ಕನೆ‌ ಶ್ರೇಣಿಯನ್ನು ಪಡೆದುಕೊಂಡು ಉತ್ತೀರ್ಣರಾಗುವ ಮೂಲಕ ಗಮನ ಸೆಳೆದಿದ್ದರು.

ಗಾಯತ್ರಿರವರು ಬಂಗಾರಪೇಟೆಯ ನಾರಾಯಣಸ್ವಾಮಿ ವೆಂಕಟಲಕ್ಷ್ಮಿರವರ ಒಬ್ಬಳೇ ಮಗಳಾಗಿದ್ದು ತೀರಾ ಬಡತನದಲ್ಲಿ ಬೆಳೆದ ಗಾಯಿತ್ರಿರವರು ಮೊದಲಿನಿಂದಲೂ ಸಾಮಾಜಿಕ ಕಾಳಜಿಹೊಂದಿದ್ದು ಏನಾದರೂ ಸಾಧಿಸಬೇಕೆಂಬ ಛಲ ಹೊಂದಿದ್ದರು.

ರಘುರಾಜ್ ಹೆಚ್.ಕೆ…9449553305…

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...