Home ರಾಜ್ಯBLOOD DONATION: ಗಣರಾಜ್ಯೋತ್ಸವದ ಸಂಭ್ರಮಾಚರಣೆ ಪ್ರಯುಕ್ತ ತೀರ್ಥಹಳ್ಳಿ ಸರ್ಕಾರಿ ನೌಕರರ ಸಂಘದಿಂದ ರಕ್ತದಾನ ಶಿಬಿರ..!!

BLOOD DONATION: ಗಣರಾಜ್ಯೋತ್ಸವದ ಸಂಭ್ರಮಾಚರಣೆ ಪ್ರಯುಕ್ತ ತೀರ್ಥಹಳ್ಳಿ ಸರ್ಕಾರಿ ನೌಕರರ ಸಂಘದಿಂದ ರಕ್ತದಾನ ಶಿಬಿರ..!!

by EDITOR NEWS WARRIORS
0 comments

ರಾಜ್ಯ ಸರ್ಕಾರಿ ನೌಕರರ ಸಂಘ ತೀರ್ಥಹಳ್ಳಿ ಶಾಖೆಯು ದಿನಾಂಕ: 25-1-23 ರ ಬುಧವಾರ ಬೆಳಿಗ್ಗೆ 10 ಗಂಟೆಯಿಂದ ಸೊಪ್ಪುಗುಡ್ಡೆಯ ಐಎಂಎ ರೋಟರಿ ರಕ್ತನಿಧಿಯಲ್ಲಿ ರಕ್ತದಾನ ಮಾಡುವ ಮೂಲಕ 74 ನೇ ಗಣ ರಾಜ್ಯೋತ್ಸವವನ್ನು ಸಂಭ್ರಮಿಸುತ್ತಿದೆ.

ತಾಲ್ಲೂಕಿನ ವಿವಿಧ ಇಲಾಖೆಗಳ ಸಹೃದಯಿ ಸರ್ಕಾರಿ ನೌಕರರು,ಅಧಿಕಾರಿಗಳು ಹಾಗೂ ನಾಗರೀಕ ಬಂಧುಗಳ ಸಹಕಾರದಿಂದ ರಾಷ್ಟ್ರೀಯ ಹಬ್ಬಗಳಾದ ಸ್ವಾತಂತ್ರ್ಯ ದಿನಾಚರಣೆ ಹಾಗೂ ಗಣ ರಾಜ್ಯೋತ್ಸವದ ಸಂದರ್ಭಗಳಲ್ಲಿ ನಿರಂತರವಾಗಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರಗಳನ್ನು ಯಶಸ್ವಿಯಾಗಿ ಸಂಘಟಿಸುತ್ತಿರುವ ಸಂಘದ ಹತ್ತನೆಯ ರಕ್ತದಾನ ಶಿಬಿರ ಇದಾಗಿದ್ದು, ಯಶಸ್ಸಿಗೆ ಸಹಕರಿಸಿದ ಪ್ರತಿಯೊಬ್ಬರನ್ನೂ ಸಂಘವು ಕೃತಜ್ಞತೆಯಿಂದ ಸ್ಮರಿಸುತ್ತದೆ.ವಿವಿಧ ಕಾರಣಗಳಿಂದ ರಕ್ತದ ಲಭ್ಯತೆ ಕಡಿಮೆ ಇರುವುದರಿಂದ ಈ ಬಾರಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನಿಗಳು ಪಾಲ್ಗೊಳ್ಳುವ ಮೂಲಕ ರೋಗಿಗಳ ಜೀವ ಉಳಿಸುವ ಮಹತ್ವದದ ಕಾರ್ಯಕ್ಕೆ ಕೈ ಜೋಡಿಸುವಂತೆ ಸಂಘದ ಅಧ್ಯಕ್ಷ ಟಿ ವಿ ಸತೀಶ ಕೋರಿದ್ದಾರೆ.


ರಕ್ತದಾನದ ಬಗ್ಗೆ ಅನೇಕರಲ್ಲಿ ಗೊಂದಲ ಆತಂಕಗಳು ಈಗಲೂ ಇವೆ. ಅವಶ್ಯಕತೆ ಇರುವಷ್ಟು ರಕ್ತದ ಅಲಭ್ಯತೆಗೆ ಇದು ಪ್ರಮುಖ ಕಾರಣ. ಅರೋಗ್ಯವಂತ ವ್ಯಕ್ತಿಯ ದೇಹದಲ್ಲಿ ಸರಾಸರಿ 5.5 ರಿಂದ 6 ಲೀಟರ್‌ ರಕ್ತವಿರುತ್ತದೆ. ರಕ್ತದಾನ ಪ್ರಕ್ರಿಯೆಯಲ್ಲಿ ಕೇವಲ 350 ಮಿ ಲೀ ನಷ್ಟೇ ರಕ್ತವನ್ನು ಸ್ವೀಕರಿಸುವುದರಿಂದ ದಾನಿಗೆ ಯಾವುದೇ ಅಪಾಯವಾಗುವುದಿಲ್ಲ. 18 ರಿಂದ 60 ವರ್ಷದೊಳಗಿನ 45 ಕೆ ಜಿ ಗಿಂತಲೂ ಹೆಚ್ಚು ತೂಕವಿರುವ 12.5 ಗ್ರಾಂ ಗಿಂತಲೂ ಹೆಚ್ಚು ಹಿಮೋಗ್ಲೋಬಿನ್ ಅಂಶ ಹೊಂದಿರುವ ಎಲ್ಲಾ ಆರೋಗ್ಯವಂತರೂ ರಕ್ತದಾನ ಮಾಡಬಹುದು. ಲಿವರ್ ಕಿಡ್ನಿ ಮತ್ತು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವವರು,ಗರ್ಭಿಣಿಯರು, ಋತುಸ್ರಾವದಲ್ಲಿರುವವರು, ಹಾಲುಣಿಸುವ ತಾಯಂದಿರು, ರಕ್ತಹೀನತೆ, ಕ್ಯಾನ್ಸರ್, ಕ್ಷಯ,ಅಧಿಕ ರಕ್ತದೊತ್ತಡ, ಅಪಸ್ಮಾರ,ಮುಂತಾದ ತೊಂದರೆಗಳಿರುವವರು ರಕ್ತದಾನ ಮಾಡಬಾರದು.ರಕ್ತದಾನದ ಬಳಿಕ ಹೆಚ್ಚೆಂದರೆ ಒಂದು ತಾಸಿನ ವಿಶ್ರಾಂತಿ ಸಾಕು.ಮೂರು ತಿಂಗಳೊಳಗಾಗಿ ದಾನಿಯ ದೇಹದಲ್ಲಿ ರಕ್ತವು ಮರು ಉತ್ಪತ್ತಿಯಾಗುತ್ತದೆ. ದಾನಿಯಿಂದ ಪಡೆದ ರಕ್ತವನ್ನು ಸಾಮಾನ್ಯವಾಗಿ 35 ದಿನಗಳವರೆಗೆ ಮಾತ್ರ ವಿಶೇಷ ಶೀತಲೀಕರಣ ವ್ಯವಸ್ಥೆಯಲ್ಲಿ ಕಾಪಾಡಿ ಉಪಯೋಗಿಸಲು ಸಾಧ್ಯ.ರಕ್ತವನ್ನು ಕೇವಲ ದಾನದಿಂದಷ್ಟೇ ಪಡೆಯಬಹುದು. ಆದ್ದರಿಂದ ಸಹೃದಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡುವಂತೆ ಅವರು ವಿನಂತಿಸಿದ್ದಾರೆ...

ರಘುರಾಜ್ ಹೆಚ್.ಕೆ..9449553305…

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...