Friday, May 2, 2025
Google search engine
Homeರಾಜ್ಯComplaint against Harathalu Halappa to former Chief Minister Yeddyurappa: ಸಮಾಧಾನದಿಂದ ದೂರು ಕೇಳಿಸಿಕೊಂಡ...

Complaint against Harathalu Halappa to former Chief Minister Yeddyurappa: ಸಮಾಧಾನದಿಂದ ದೂರು ಕೇಳಿಸಿಕೊಂಡ ಬಿಎಸ್ ವೈ ಹೇಳಿದ್ದೇನು..?!

ಸಾಗರ ವಿಧಾನ ಸಭಾ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ವಿರುದ್ದ ಬಿಜೆಪಿ ನಾಯಕರು,ಸಂಘ ಪರಿವಾರದ ಪ್ರಮುಖರು ಮಾಜಿ ಮುಖ್ಯಮಂತ್ರಿ ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರಿಗೆ ದೂರು ನೀಡಿದ್ದಾರೆ.

ಮುಂಬರುವ ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ನೀಡದಂತೆ ವಿರೋಧಿ ಬಣ ಒತ್ತಡ ಹಾಕಿದೆ .ಶಿಕಾರಿಪುರದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರರನ್ನುಭೇಟಿ ಮಾಡಿದ ವಿರೋಧಿ ಬಣ ಬಹಳಷ್ಟು ಹೊತ್ತು ಚರ್ಚೆ ನಡೆಸಿದೆ. ೨೦೦೮ರಿಂದಲೂ ನಿಮ್ಮ ಗರಡಿಯಲ್ಲೇ ಬೆಳೆದಿರುವ ಹಾಲಪ್ಪನವರು ಪ್ರಬುದ್ಧ ರಾಜಕಾರಣಿಯಂತೆ ಕಾಣಿಸುತ್ತಾರೆ. ಇಲ್ಲಿ ಒಂದು ಬಾರಿ ಗೆದ್ದು ಜನಾಂಗೀಯ ಹಲ್ಲೆ ಮಾಡಿಸಿರುವ ಅವರು, ಮತ್ತೊಮ್ಮೆ ಗೆದ್ದರೆ ಸಾಗರವನ್ನೇ ದೋಚಿಬಿಡುತ್ತಾರೆ.

೨೦೧೮ರಲ್ಲಿ ನಿಮಗೆ ಮನಸ್ಸಿಲ್ಲದಿದ್ದರೂ ನಾವೇ ಹಠ ಮಾಡಿ ಹಾಲಪ್ಪನವರಿಗೆ ಟಿಕೆಟ್ ಗೆಲ್ಲಿಸಿದ್ದೆವು. ಕೊಡಿಸಿ ಆದರೆ ನಂತರ ಅವರ ಅವಾಂತರ ಮಿತಿ ಮೀರಿದೆ. ಹಾವಳಿ ತಡೆಯಲು ನಮಗೂ ಸಾಧ್ಯವಾಗುತ್ತಿಲ್ಲ. ಆದ್ದರಿಂದ ಪಕ್ಷ, ತತ್ವಸಿದ್ಧಾಂತಗಳಿಗೆ ಬದ್ಧರಾಗಿರುವ, ಪ್ರಾಮಾಣಿಕವಾಗಿ ಕೆಲಸ ಮಾಡುವವರಿಗೆ ಟಿಕೆಟ್ ಕೊಡಿ ಎಂದು ವಿರೋಧಿಗಳು ಮಾಜಿ ಸಿಎಂ ಎದುರು ಒಕ್ಕೊರಲ ಮನವಿ ಮಾಡಿದ್ದಾರೆ.

ಕೇವಲ ದೂರುಗಳನ್ನು ಮಾತ್ರ ಹೊತ್ತೊಯ್ಯದೆ, ಅವೆಲ್ಲಕ್ಕೂ ಹತ್ತಾರು ಸಾಕ್ಷಿಗಳನ್ನು ಒದಗಿಸಿದ್ದಾರೆ. ಸದ್ಯ ಹಾಲಪ್ಪನವರನ್ನು ಮಾತನಾಡಿಸುವುದು ಕಷ್ಟ ತಮ್ಮದೇ ಗುಂಪು ಕಟ್ಟಿಕೊಂಡು ತಿರುಗುತ್ತಾರೆ. ಹಿಂದೂಪರ ಸಂಘಟನೆ ಗಳ ಕಾಠ್ಯಕ್ರಮಕ್ಕೆ ಬಾರದಿರುವುದು, ಪ್ರಮುಖವಾಗಿ ಲಕ್ಷ್ಮೀ ಪೂಜೆಗೂ ಆಗಮಿಸದೆ ಅಸಡ್ಡೆ ಮಾಡಿದ್ದು ಕಾರಕರ್ತರ ಅಸಮಾಧಾನಕ್ಕೆ ಕಾರಣವಾಗಿದೆ, ಪರ್ಸೆಂಟೇಜ್ ರಾಜಕೀಯ, ಅವರ ಆಪ್ತರ ಅಹಂಕಾರದ ಮಾತುಗಳು, ಹೀಗೆ ಪಟ್ಟಿ ದೊಡ್ಡದಿದೆ. ಜತೆಯಲ್ಲಿ ಶಾಸಕರನ್ನು ಸಂಘಟನೆಯ ಬೇರ್ಪಡಿಸುವ ಹಿರಿಯರಿಂದ ಪಿತೂರಿಯಲ್ಲಿ ಕೆಲ ಆಪ್ತರ ಹಿತ್ತಾಳೆ ಕಿವಿ ಕಾರಣವಾಗಿದೆ.
ಹಾಲಪ್ಪನವರ ವಿರುದ್ಧ ದೂರು ನೀಡಿದವರ ವಿರುದ್ಧ ಹಲ್ಲೆ ನಡೆಸುವುದು, ಅವರ ಜಾಗಕ್ಕೆ ತೊಂದರೆ ಕೊಡುವುದು, ಹೆದರಿಸುವಂಥ ಚಟುವಟಿಕೆಗಳೂ ನಡೆಯುತ್ತಿವೆ. ಆದ್ದರಿಂದ ತಾಲೂಕಿನ ಕಾನೂನು ಸುವ್ಯವಸ್ಥೆ ಹದಗೆಡುತ್ತಿದ್ದು, ಇದನ್ನು ಸರಿಪಡಿಸುವ ಉದ್ದೇಶದಿಂದ ಹೊಸಬರನ್ನು ಆಯ್ಕೆ ಮಾಡಬೇಕು ಎಂದು ಎಲ್ಲರೂ ಆಗ್ರಹಿಸಿದ್ದಾರೆ ಎಂದು ತಿಳಿದುಬಂದಿದೆ.
ಈ ತಂಡ ಇಷ್ಟಕ್ಕೆ ಸುಮ್ಮನಾಗದೆ ಎಲ್ಲ ದಾಖಲೆಗಳನ್ನು ಹಿಂದಿಗೆ ಭಾಷಾಂತರಿಸಿ ಕೇಂದ್ರ ನಾಯಕರಿಗೆ ಮತ್ತು ಸಂಘದ ಹಿರಿಯರಿಗೆ ಕಳುಹಿಸುವ ಸಿದ್ಧತೆಯಲ್ಲಿ ತೊಡಗಿದೆ. ವಿಶೇಷವೆಂದರೆ ಮಾಜಿ ಸಿಎಂ ಹಾಗೂ ವಿಜಯೇಂದ್ರ ಅವರು ಈ ಎಲ್ಲ ಆರೋಪಗಳನ್ನು ಸಮಾಧಾನದಿಂದ ಆಲಿಸಿ ಸೂಕ್ತ ಕ್ರಮ ತೆಗೆದುಕೊಳ್ಳುವ ಭರವಸೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.


ಸಾಗರದ ಆಶ್ರಯ ಸಮಿತಿ ಅಧ್ಯಕ್ಷ ಯು.ಎಚ್. ರಾಮಪ್ಪ, ಹಿರಿಯ ವಕೀಲ ಮತ್ತು ತಾಲೂಕು ಬಿಜೆಪಿ ಮಾಜಿ ಅಧ್ಯಕ್ಷ ಕೆ.ಎನ್.ಶ್ರೀಧರ್, ಶಿಮುಲ್ ಅಧ್ಯಕ್ಷ ಶ್ರೀಪಾದ ಹೆಗಡೆ ನಿಸರಾಣಿ, ವೀರಶೈವ ಮುಖಂಡರಾದ ಜಗದೀಶ್ ಗೌಡ, ಕುಮಾರ್, ವಸಂತ್ ಬಿಜೆಪಿ ಮುಖಂಡರಾದ ಸತೀಶ್ ಹಕ್ರೆ, ರಾಘವೇಂದ್ರ ಶೇಟ್, ಕೃಷ್ಣಮೂರ್ತಿ ಮಂಕಳಲೆ ಮತ್ತಿತರ ಮುಖಂಡರು ನಿಯೋಗದಲ್ಲಿ ಇದ್ದರು…

ರಘುರಾಜ್ ಹೆಚ್. ಕೆ…9449553305…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಮಿನಿಸ್ಟರ್ ಮಧು ಬಂಗಾರಪ್ಪನವರ ಮಗ ಸೂರ್ಯನ ಸಾಧನೆ..! ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..!