Wednesday, April 30, 2025
Google search engine
Homeರಾಜ್ಯನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ 75 ನೇ ಸ್ವಾತಂತ್ರೋತ್ಸವದಲ್ಲಿ ನಾಡಿನ ಜನರಿಗೆ ನೀಡಿದ ಭರವಸೆಗಳೇನು?

ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ 75 ನೇ ಸ್ವಾತಂತ್ರೋತ್ಸವದಲ್ಲಿ ನಾಡಿನ ಜನರಿಗೆ ನೀಡಿದ ಭರವಸೆಗಳೇನು?

ಬೆಂಗಳೂರು>ಆಗಸ್ಟ್15> ಬಸವರಾಜ ಬೊಮ್ಮಾಯಿ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಮೊದಲ ಬಾರಿಗೆ 75ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ. ಬಳಿಕ ರಾಜ್ಯವನ್ನ ಉದ್ದೇಶಿಸಿ ಮಾತನಾಡಿದ ಅವರು ಈ ದಿನಕ್ಕಾಗಿ ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರನ್ನು ನೆನಪಿಸಿಕೊಂಡಿದ್ದಾರೆ.

ಇಂದು ಸಂಗೊಳ್ಳಿ ರಾಯಣ್ಣರ ಜನ್ಮದಿನವೂ ಆಗಿದೆ
ಧ್ವಜಾರೋಹಣ ನೆರವೇರಿಸಿದ ಬಳಿಕ ಭಾಷಣ ಆರಂಭಿಸಿದ ಸಿಎಂ ಬಸವರಾಜ ಬೊಮ್ಮಾಯಿ, ರಾಣಿ ಚೆನ್ನಮ್ಮ ಬ್ರಿಟಿಷರ ವಿರುದ್ಧ ಹೋರಾಡಿದ್ದರು. ರಾಣಿ ಚೆನ್ನಮ್ಮ ನಮ್ಮೆಲ್ಲರ ಅಭಿಮಾನದ ಸಂಕೇತ. ಸಂಗೊಳ್ಳಿ ರಾಯಣ್ಣರ ಜನ್ಮದಿನವೂ ಇಂದೇ ಆಗಿದೆ.
ರಾಯಣ್ಣರ ತ್ಯಾಗ, ಬಲಿದಾನ ಬಹಳ ಮಹತ್ವದ್ದಾಗಿದೆ. ರಾಯಣ್ಣ ಜನ್ಮದಿನ ಆಚರಣೆ ಮಾಡಲಾಗುತ್ತಿದೆ. ಅವರ ಜನ್ಮ ದಿನ ಆಚರಿಸುತ್ತಿರುವುದು ನಮಗೆ ಖುಷಿಯ ವಿಚಾರ. ಸ್ವಾತಂತ್ರ್ಯಕ್ಕಾಗಿ ಪ್ರಾಣತ್ಯಾಗ ಮಾಡಿದವರ ಸ್ಮರಣೆ ಮಾಡಬೇಕು. ಅನಾಮಧೇಯ ಸ್ವಾತಂತ್ರ್ಯ ಸೇನಾನಿಗಳಿಗೆ ಭಾವಪೂರ್ಣ, ಭಕ್ತಿಪೂರ್ಣ ನಮನ ಎಂದು ನಮನ ಸಲ್ಲಿಸಿದ್ದಾರೆ.

ಇಂದಿನಿಂದಲೇ ನವ ಕರ್ನಾಟಕ ನಿರ್ಮಾಣ ಆರಂಭ


ಭಾರತ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಸಾಂಸ್ಕೃತಿಕವಾಗಿ ವಿಶ್ವದ ಗಮನವನ್ನು ಸೆಳೆದಿದೆ. ಗ್ರಾಮಗಳಿಂದ ಬಾಹ್ಯಾಕಾಶದವರೆಗೂ ಪ್ರಧಾನಿ ಮೋದಿ ಹಲವು ಯೋಜನೆ ಕೊಟ್ಟಿದ್ದಾರೆ. ಇಂದಿನಿಂದಲೇ ನವ ಕರ್ನಾಟಕ ನಿರ್ಮಾಣ ಆರಂಭವಾಗುತ್ತದೆ. ಹೊಸ ಚಿಂತನೆ, ಹೊಸ ದಾರಿ, ಹೊಸ ದಿಕ್ಸೂಚಿ ಇದೆ ಎಂದು ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಸಿಎಂ ಘೋಷಣೆ ಮಾಡಿದ್ದಾರೆ.

ರೈತರ ಬದುಕಿನಲ್ಲಿ ಕ್ರಾಂತಿ….

ರೈತರ ಬದುಕಿನಲ್ಲಿ ಕ್ರಾಂತಿ ತರುವ ಕಾಲ ಬಂದಿದೆ. ರೈತನನ್ನು ಕೇಂದ್ರ ಬಿಂದುವಾಗಿ ಅಭಿವೃದ್ಧಿ ಮಾಡಬೇಕು. ರೈತ ಕೇಂದ್ರಿತ ಅಭಿವೃದ್ಧಿ ಚಿಂತನೆ ಮಾಡುತ್ತಿದ್ದೇವೆ. ರೈತನ ಶ್ರಮ, ಕೂಲಿಕಾರನ ಬೆವರಿನಲ್ಲಿ ದೇವರಿದ್ದಾನೆ. ಇದಕ್ಕೆ ನಾವು ಬೆಲೆ ಕೊಡಬೇಕು. ಕೃಷಿ ಕ್ಷೇತ್ರದಲ್ಲಿ ಶೇ.1ರಷ್ಟು ಬೆಳವಣಿಗೆಯಾದರೆ, ಕೈಗಾರಿಕಾ ಕ್ಷೇತ್ರದಲ್ಲಿ ಶೇ.4ರಷ್ಟು ಬೆಳವಣಿಗೆಯಾಗುತ್ತೆ, ಸೇವಾ ವಲಯದಲ್ಲಿ ಶೇ.10ರಷ್ಟು ಬೆಳವಣಿಗೆಯಾಗುತ್ತೆ ಎಂದರು.

ನನಗೆ 20 ತಿಂಗಳು ಮಾತ್ರ ಅಧಿಕಾರ ಇದೆ ಎಂದು ನೆನಪಿಸಿಕೊಂಡ ಮುಖ್ಯಮಂತ್ರಿಗಳು….

ಎಲ್ಲ ಯೋಜನೆ ಮನೆ ಬಾಗಿಲಿಗೆ ತಲುಪುವುದಕ್ಕೆ ಕ್ರಮ ಕೈಗೊಳ್ಳಲಾಗುತ್ತೆ. ಬೆಳವಣಿಗೆ ಅಂದರೆ ಕೇವಲ ಅಂಕಿ ಅಂಶವಲ್ಲ. ರಾಜ್ಯದ ಪ್ರತಿಯೊಬ್ಬರ ಬದುಕು ಹಸನಾಗಬೇಕು. ಪ್ರತಿ ಕುಟುಂಬಕ್ಕೂ ಸರ್ಕಾರದ ಯೋಜನೆ ಮುಟ್ಟಬೇಕು. ದೀರ್ಘಾವಧಿ, ಅಲ್ಪಾವಧಿ ಯೋಜನೆಗಳನ್ನು ಮಾಡುತ್ತೇನೆ. ನನಗೆ 20 ತಿಂಗಳು ಮಾತ್ರ ಅಧಿಕಾರ ಇದೆ. ಅಲ್ಪಾವಧಿ ಯೋಜನೆಗಳನ್ನು ಶೇ.100ರಷ್ಟು ಮಾಡುತ್ತೇವೆ.

ಕೋರೋಣ ಸರ್ಕಾರಕ್ಕೆ ಸವಾಲು….

ಕೊರೊನಾದಿಂದ ರಾಜ್ಯದ ಜನ ಸಂಕಷ್ಟ ಅನುಭವಿಸಿದ್ದಾರೆ. ಕೊರೊನಾ ಒಂದು ಸವಾಲು. ಕೊರೊನಾ ನಿಯಂತ್ರಣಕ್ಕೆ ಬಿಎಸ್‌ವೈ ನಿರಂತರ ಪ್ರಯತ್ನಿಸಿದ್ದರು. ಆರೋಗ್ಯ ಇಲಾಖೆಗೆ ಹೆಚ್ಚು ಹಣಕಾಸು ನೆರವು ನೀಡಿದ್ದಾರೆ. ಹೀಗಾಗಿ ಕೊರೊನಾ ನಿಯಂತ್ರಣಕ್ಕೆ ಸಹಾಯವಾಗಿದೆ. ಯಡಿಯೂರಪ್ಪಗೆ ಧನ್ಯವಾದ ತಿಳಿಸುತ್ತೇನೆ. ಜೀವ ಜೀವನವನ್ನು ಸಮತೋಲವಾಗಿ ಕಾಪಾಡಲು ಕೊರೊನಾ ತಡೆಗೆ ಸರ್ಕಾರ ಹಲವು ಕ್ರಮ ತೆಗೆದುಕೊಂಡಿದೆ.

ಮೂಲಸೌಕರ್ಯಗಳ ಅಭಿವೃದ್ಧಿಗೆ ಒತ್ತು….


ಶೇ.100ರಷ್ಟು ಘನತ್ಯಾಜ್ಯ ವಿಂಗಡಣೆ ಹಾಗೂ ವಿಲೇವಾರಿ, ತ್ಯಾಜ್ಯ ನೀರನ್ನು ವೈಜ್ಞಾನಿಕವಾಗಿ ವಿಸರ್ಜಿಸುವುದು, ಸೌರವಿದ್ಯುತ್, ಡಿಜಿಟಲ್ ಗ್ರಂಥಾಲಯಗಳೊಂದಿಗೆ ಶಾಲೆ ಸ್ಥಾಪನೆ. ಶಾಲೆಗಳ ಸಮಗ್ರ ಮೂಲಸೌಕರ್ಯದೊಂದಿಗೆ ಅಭಿವೃದ್ಧಿ ಮಾಡಲಾಗುವುದು ಎಂದರು.

ಅಮೃತ ರೈತ ಉತ್ಪಾದಕ ಸಂಸ್ಥೆ ಯೋಜನೆಗೆ ಚಾಲನೆ…


ಇನ್ನು ರೈತ, ನೇಕಾರ ಮತ್ತು ಮೀನುಗಾರರ ಉತ್ಪನ್ನಗಳ ಉತ್ಪಾದನೆ, ಮಾರಾಟಕ್ಕೆ ವಿಶೇಷ ಪ್ರೋತ್ಸಾಹ ನೀಡಲು ಸಂಸ್ಥೆಗಳ ಆರಂಭ ಮಾಡಲಾಗುವುದು. 750 ಅಮೃತ ರೈತ ಉತ್ಪಾದಕ ಸಂಸ್ಥೆಗಳನ್ನು ಸ್ಥಾಪಿಸಲಾಗುವುದು. ಪ್ರತಿ ಸಂಸ್ಥೆಗೆ 30 ಲಕ್ಷ ರೂ.ನಂತೆ 3 ವರ್ಷ ನೀಡಲಾಗುವುದು. ಇದಕ್ಕಾಗಿ 225 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ಅಮೃತ ರೈತ ಉತ್ಪಾದಕ ಸಂಸ್ಥೆ ಯೋಜನೆಯನ್ನು ಸಿಎಂ ಘೋಷಣೆ ಮಾಡಿದ್ದಾರೆ.

ಅಮೃತ ನಿರ್ಮಲ ನಗರ ಯೋಜನೆಗೆ ಚಾಲನೆ..
ಆಯ್ದ 75 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸ್ವಚ್ಛತೆ ಮತ್ತು ಸೌಂದರ್ಯ ಕಾಪಾಡಲು ಅಮೃತ ನಿರ್ಮಲ ನಗರ ಯೋಜನೆಯನ್ನು ಸಿಎಂ ಘೋಷಿಸಿದ್ದಾರೆ. ಪ್ರತಿ ಸ್ಥಳೀಯ ಸಂಸ್ಥೆಗೆ 1 ಕೋಟಿ ರೂಪಾಯಿ ನೀಡಲಾಗುವುದು
ಇದಕ್ಕಾಗಿ ಒಟ್ಟು 75 ಕೋಟಿ ರೂ. ಒದಗಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಅಮೃತ ಶಾಲಾ ಸೌಲಭ್ಯ ಯೋಜನೆಗೆ ಚಾಲನೆ..


ಆಯ್ದ 750 ಶಾಲೆಗಳಿಗೆ ಸುಸಜ್ಜಿತ ಕಟ್ಟಡ, ಪ್ರಯೋಗಾಲಯ, ಗ್ರಂಥಾಲಯ, ಶೌಚಾಲಯ ಇತ್ಯಾದಿ ಸಮಗ್ರ ಸೌಲಭ್ಯಗಳಿಗಾಗಿ 750 ಶಾಲೆಗಳಿಗೆ ತಲಾ 10 ಲಕ್ಷ ರೂಪಾಯಿ ನೀಡಲಾಗುವುದು. ಇದಕ್ಕಾಗಿ ಒಟ್ಟು 75 ಕೋಟಿ ರೂ. ವೆಚ್ಚ ಮಾಡಲಾಗಿದೆ.

750 ಅಂಗನವಾಡಿ ಕೇಂದ್ರಗಳು ಮೇಲ್ದರ್ಜೆಗೆ ಅಮೃತ ಅಂಗನವಾಡಿ ಯೋಜನೆಯಡಿ ಪ್ರತಿ ಅಂಗನವಾಡಿ 1 ಲಕ್ಷ ರೂಪಾಯಿ ನೀಡಲಾಗುವುದು. ಇದಕ್ಕಾಗಿ 7.5 ಕೋಟಿ ರೂ. ವಿನಿಯೋಗಿಸಲಾಗುವುದು. ಅಮೃತ ಸ್ವಸಹಾಯ ಕಿರು ಉದ್ದಿಮೆಯಡಿ 7,500 ಸ್ವಸಹಾಯ ಗುಂಪು ಉದ್ದಿಮೆಗಳಾಗಿ ಬದಲಾವಣೆ ಮಾಡಿ ಕಿರು ಉದ್ಯಮ ಸಂಸ್ಥೆಗಳಾಗಿ ರೂಪಿಸಲು ತಲಾ 1 ಲಕ್ಷ ರೂ. ನೀಡಲಾಗುತ್ತದೆ ಎಂದರು….

ವರದಿ …ರಘುರಾಜ್ ಹೆಚ್. ಕೆ..

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ….9449553305/7892830899…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...