Wednesday, April 30, 2025
Google search engine
Homeರಾಷ್ಟ್ರೀಯPadma Bhushan, Padma Vibhushan, Padma Awards are honored by the President to...

Padma Bhushan, Padma Vibhushan, Padma Awards are honored by the President to eminent persons who have achieved in various fields. ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ, ಖ್ಯಾತ ಸಾಹಿತಿ ಎಸ್ ಎಲ್ ಭೈರಪ್ಪ, ಸುಧಾ ಮೂರ್ತಿ, ಸೇರಿದಂತೆ 106 ಸಾಧಕರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ರಿಂದ ಪ್ರಶಸ್ತಿ ಪ್ರಧಾನ..!!

ನವದೆಹಲಿ : ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 106 ಸಾಧಕರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಶಸ್ತಿ ಪ್ರಧಾನ ಮಾಡಿದ್ದಾರೆ.

2023ನೇ ಸಾಲಿನಲ್ಲಿ 6 ಪದ್ಮವಿಭೂಷಣ, 9 ಪದ್ಮಭೂಷಣ ಮತ್ತು 91 ಪದ್ಮ ಪ್ರಶಸ್ತಿಗಳನ್ನು ಘೋಷಿಸಲಾಗಿತ್ತು. ರಾಷ್ಟ್ರಪತಿ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುರ್ಮು ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರಿಗೆ ಪದ್ಮವಿಭೂಷಣ ಪ್ರಶಸ್ತಿಪ್ರಧಾನ ಮಾಡಲಾಗಿದೆ. ಇನ್ನು ಸಾಹಿತಿ ಭೈರಪ್ಪ ಹಾಗೂ ಸುಧಾಮೂರ್ತಿ ಅವರಿಗೆ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಉಳಿದಂತೆ ಕರ್ನಾಟಕದಿಂದ ವಿಜ್ಞಾನಿ ಖಾದರ್‌ವಲ್ಲಿ ದುಡೇಕುಲ, ಉಮ್ಮತ್ತಾಟ್‌ ನೃತ್ಯ ಕಲಾವಿದೆ ರಾಣಿ ಮಾಚಯ್ಯ, ತಮಟೆ ವಾದಕ ಮುನಿವೆಂಕಟಪ್ಪ, ರಶೀದ್‌ ಅಹಮದ್‌ ಖಾದ್ರಿ, ಎಸ್‌.ಸುಬ್ಬರಾಮನ್‌ ಅವರಿಗೂ ಪ್ರಶಸ್ತಿ ಪ್ರಧಾನ ಮಾಡಲಾಗಿದೆ. ಇವರಲ್ಲದೇ ಖ್ಯಾತ ಗಾಯಕಿ ವಾಣಿ ಜಯರಾಂ ಹಾಗೂ ಆಸ್ಕರ್‌ ಪ್ರಶಸ್ತಿ ಗೆದ್ದ ಸಂಗೀತ ನಿರ್ದೇಶಕ ಎಂ.ಎಂ.ಕೀರವಾಣಿ ಅವರು ಸಹ ಪ್ರಶಸ್ತಿ ಸ್ವೀಕರಿಸಿದ್ದಾರೆ.

ವಾಸ್ತುಶಿಲ್ವ ಸಾಧನೆಯಲ್ಲಿ ಗುಜರಾತ್‌ನ ಬಾಲಕೃಷ್ಣ ದೋಶಿ(ಮರಣೋತ್ತರ), ಕಲಾ ಸಾಧನೆಗೈದ ಮಹಾರಾಷ್ಟ್ರದ ಝಾಕೀರ್ ಹುಸೈನ್, ಸಾರ್ವಜನಿಕ ವ್ಯವಹಾರ ಕ್ಷೇತ್ರದಲ್ಲಿ ಕರ್ನಾಟಕ ಮಾಜಿ ಸಿಎಂ ಎಂಎಸ್ ಕೃಷ್ಣ, ಮೆಡಿಸಿನ್ ಕ್ಷೇತ್ರದಲ್ಲಿನ ಸಾಧನೆಗೆ ಪಶ್ಚಿಮ ಬಂಗಾಳದ ದಿಲೀಪ್ ಮಹಾಲಾನಬಿಸ್ (ಮರಣೋತ್ತರ), ವಿಜ್ಞಾನ ಹಾಗೂ ಎಂಜಿನೀಯರ್, ಅಮೆರಿಕದ ಶ್ರೀನಿವಾಸ್ ವರ್ಧನ್, ಸಾರ್ವಜನಿಕ ವ್ಯವಹಾರ ಕ್ಷೇತ್ರದಲ್ಲಿ ಮುಲಾಯಂ ಸಿಂಗ್ ಯಾದವ್(ಮರಣೋತ್ತರ) ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ಪ್ರಧಾನ ಮಾಡಲಾಗಿದೆ.

ಸಾಹಿತ್ಯ ಕ್ಷೇತ್ರದಲ್ಲಿ ಸಾಧನಗೈದಿರುವ ಕರ್ನಾಟಕದ ಎಸ್‌ಎಲ್ ಭ್ಯರಪ್ಪ , ಟ್ರೇಡ್ ಹಾಗೂ ಇಂಡಸ್ಟ್ರಿ ವಿಭಾಗದಲ್ಲಿ ಮಹಾರಾಷ್ಟ್ರದ ಕುಮಾರ್ ಮಂಗಲಂ, ವಿಜ್ಞಾನ ಮತ್ತು ಇಂಜಿನಿಯರಿಂಗ್‌ನಲ್ಲಿ ಮಹಾರಾಷ್ಟ್ರದಲ್ಲಿ ದೀಪಕ್ ಧರ್, ಕಲಾ ಕ್ಷೇತ್ರದಲ್ಲಿನ ಸಾಧಕಿ ತಮಿಳುನಾಡಿನ ವಾಣಿ ಜಯರಾಂ ಸೇರಿದಂತೆ ಪ್ರಮುಖ ಗಣ್ಯರಿಗೆ ಪದ್ಮ ಭೂಷಣ್ ಪ್ರಶಸ್ತಿ ನೀಡಿ ಗೌರವಿಸಲಾಗಿದೆ…

ಷೇರು ಮಾರುಕಟ್ಟೆಯಲ್ಲಿ ಅಪ್ರತಿಮ ಸಾಧನೆ ಮೂಲಕ ದೇಶದ ಹೂಡಿಕೆ ಕ್ಷೇತ್ರದಲ್ಲಿ ಹೊಸ ಸಂಚಲನ ಸೃಷ್ಟಿಸಿದ ರಾಕೇಶ್ ಜುಂಜುನವಾಲ ಇತ್ತೀಚೆಗೆ ನಿಧನರಾಗಿದ್ದಾರೆ. ರಾಕೇಶ್ ಜುಂಜುನುವಾಲ ಅವರಿಗೆ ಮರಣೋತ್ತರವಾಗಿ ಪದ್ಮಶ್ರೀ ಪ್ರಶಸ್ತಿ ಪ್ರಧಾನ ಮಾಡಲಾಗಿದೆ. ರಾಕೇಶ್ ಜುಂಜುನವಾಲ್ ಪರವಾಗಿ ಅವರ ಪತ್ನಿ ರೇಖಾ ಜುಂಜುನವಾಲ ಪ್ರಶಸ್ತಿ ಸ್ವೀಕರಿಸಿದರು.

ರಘುರಾಜ್ ಹೆಚ್.ಕೆ..9449553305…

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...