
ಶಿವಮೊಗ್ಗ: ಕೇಂದ್ರೀಯ ವಿದ್ಯಾನಿಲಯದ ವಿದ್ಯಾರ್ಥಿಗಳ ಪರವಾಗಿ ಎಂಟನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ರಿತು ಪಿ ಎಂಬ ವಿದ್ಯಾರ್ಥಿನಿ ನಗರದ ಹೊರವಲಯದಲ್ಲಿರುವ ಕೇಂದ್ರೀಯ ವಿದ್ಯಾಲಯಕ್ಕೆ ದಿನನಿತ್ಯ ಹೋಗಲು ಸಮರ್ಪಕವಾದ ಬಸ್ಸಿನ ವ್ಯವಸ್ಥೆ ಇಲ್ಲ ಹಾಗಾಗಿ ಹಲವು ವಿದ್ಯಾರ್ಥಿಗಳಿಗೆ ಇದರಿಂದ ತೊಂದರೆ ಆಗಿದೆ ತಾವು ದಯಮಾಡಿ ಬಸ್ಸಿನ ವ್ಯವಸ್ಥೆ ಕಲ್ಪಿಸಿ ಕೊಡುವಂತೆ ಜಿಲ್ಲಾಧಿಕಾರಿಗಳಿಗೆ ವಿದ್ಯಾರ್ಥಿನಿ ಎಲ್ಲಾ ವಿದ್ಯಾರ್ಥಿಗಳ ಪರವಾಗಿ ಮನವಿಯನ್ನು ಸಲ್ಲಿಸಿದಳು.
ಕೂಡಲೇ ಆಕೆಯ ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ಕೆಎಸ್ಆರ್ಟಿಸಿ ವಿಭಾಗದ ಅಧಿಕಾರಿಗಳಿಗೆ ಮಾತನಾಡಿ ಸೂಕ್ತ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸೂಚನೆ ನೀಡಿದರು…
ಜಿಲ್ಲಾಧಿಕಾರಿಗಳ ಒಂದು ಕರೆ ಆ ವಿದ್ಯಾರ್ಥಿಗಳಿಗೆ ಸಾಕಷ್ಟು ಅನುಕೂಲವನ್ನು ಮಾಡಿಕೊಟ್ಟಿದ್ದು ಆ ವಿದ್ಯಾರ್ಥಿಗಳ ಮುಖದಲ್ಲಿ ಹರ್ಷ ವ್ಯಕ್ತವಾಗಿತ್ತು.

ರಘುರಾಜ್ ಹೆಚ್.ಕೆ..944955305..