Wednesday, April 30, 2025
Google search engine
Homeರಾಜ್ಯದಲಿತ ಸಮುದಾಯದ ಅಭಿವೃದ್ಧಿಗೆ ಬಿಡುಗಡೆಯಾದ ಹಣವನ್ನು ಅಧಿಕಾರಿಗಳು ಸಮರ್ಪಕವಾಗಿ ಬಳಸುತ್ತಿಲ್ಲ:ಹೆಗ್ಗೆರೆ ರಂಗಪ್ಪ ...

ದಲಿತ ಸಮುದಾಯದ ಅಭಿವೃದ್ಧಿಗೆ ಬಿಡುಗಡೆಯಾದ ಹಣವನ್ನು ಅಧಿಕಾರಿಗಳು ಸಮರ್ಪಕವಾಗಿ ಬಳಸುತ್ತಿಲ್ಲ:ಹೆಗ್ಗೆರೆ ರಂಗಪ್ಪ …

ಹರಿಹರ:-ಅನ್ಯ ಇಲಾಖೆಯಲ್ಲಿರುವ ಎಸ್ ಸಿ ಎಸ್ ಪಿ ಹಾಗೂ ಟಿಎಸ್ ಪಿ ಹಣವನ್ನು ಸಮಾಜ ಕಲ್ಯಾಣ ಇಲಾಖೆಗೆ ವಾಪಸ್ಸು ಪಡೆದು ವಿವಿಧ ಅಭಿವೃದ್ಧಿ ನಿಗಮಗಳ ಸಹಾಯಧನ ಹಾಗೂ ಶೈಕ್ಷಣಿಕ ಸೌಲಭ್ಯಗಳನ್ನು ಹೆಚ್ಚು ಮಾಡಿ ನಿಗದಿತ ಸಮಯದಲ್ಲಿ ಅನುದಾನ ಖರ್ಚು ಮಾಡದ ಅಧಿಕಾರಿಗಳನ್ನು ನೇಮಾನುಸಾರ ಶಿಕ್ಷೆಗೆ ಗುರಿಪಡಿಸುವಂತೆ ಆಗ್ರಹಿಸಿ ದಲಿತ ಶೋಷಿತ ಸಮಾಜ ಸಂಘರ್ಷ ಸಮಿತಿಯ ಜಿಲ್ಲಾಧ್ಯಕ್ಷ ಹೆಗ್ಗೇರಿ ರಂಗಪ್ಪನವರು ಒತ್ತಾಯಿಸಿದ್ದಾರೆ .

ಸ್ವಾತಂತ್ರ ಬಂದು 74 ವರ್ಷ ಗತಿಸಿದರೂ ಕವಿ ಸಿದ್ದಲಿಂಗಯ್ಯ ಹೇಳಿರುವಂತೆ ಬಡವರ ಮನೆಗೆ ಬರಲಿಲ್ಲ ಬೆಳಕಿನ ಕಿರಣ ತರಲಿಲ್ಲ, ಸಮಾನತೆಯ ಹೂವನ್ನು ಅರಳಿಸಲಿಲ್ಲ ನೋವಿನ ಕಡಲನ್ನು ಬತ್ತಿಸಲಿಲ್ಲ, ಹಣವಂತರು ಕಣ್ ಸನ್ನೆ ಮಾಡಿದ್ದರೆ ಕತ್ತಲೆಯಲ್ಲೇ ಬತ್ತಲೆಯಾಯಿತ್ತು ಯಾರೂ ಕಾಣದ ಸ್ವಾತಂತ್ರ ನಲವತ್ತೇಳರ ಸ್ವಾತಂತ್ರ್ಯ.ಎಂಬಂತೆ ದೇಶದಲ್ಲಿ ಬಡವರ ಬಡತನ ನಿವಾರಣೆಯಾಗಲಿಲ್ಲ. ನಮ್ಮನ್ನಾಳಿದ ಮತ್ತು ನಮ್ಮನ್ನಾಳುತ್ತಿರುವ ಸರ್ಕಾರಗಳು ಅನೇಕ ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತಂದರೂ ಅನುಷ್ಠಾನಗೊಳಿಸುವ ಆಡಳಿತ ಯಂತ್ರದ ಬದ್ಧತೆಯ ಕೊರತೆ ಯಿಂದಾಗಿ ಅವರು ಮಾಡುವ ವಂಚನೆಯಿಂದಾಗಿ ಯೋಜನೆಯ ಸೌಲಭ್ಯಗಳು ನಿರೀಕ್ಷಿತ ಮಟ್ಟದಲ್ಲಿ ತಲುಪದೆ ಬಹುತೇಕ ಬಡವರು ಬಡತನ ರೇಖೆಗಿಂತ ಕೆಳಗಿದ್ದಾರೆ ಎಂದರು .

ರಾಜ್ಯದಲ್ಲಿ ಎಸ್ ಸಿ ಎಸ್ ಪಿ ಹಾಗೂ ಟಿಎಸ್ ಪಿ ಕಾಯ್ದೆ ಜಾರಿಯಲ್ಲಿದ್ದರೂ ಅನುದಾನವನ್ನು ಅನ್ಯ ಉದ್ದೇಶಗಳಿಗೆ ಬಳಸಲು ಅವಕಾಶ ನೀಡುವ ಕಾಯ್ದೆ ಒಳಗಿನ 7 ಡಿ ನಿಯಮಾನುಸಾರ ತೆಗೆದು ಹಾಕಲಾಗಿಲ್ಲ .ಇತ್ತೀಚೆಗೆ ಕೋವಿಡ್ ನೆಪದಲ್ಲಿ ಎಸ್ ಸಿ ಎಸ್ ಪಿ ಹಾಗೂ ಟಿಎಸ್ ಪಿ ಅನುದಾನವನ್ನು ಕಡಿತಗೊಳಿಸಲಾಗುತ್ತಿದೆ ವಿವಿಧ ಅಭಿವೃದ್ಧಿ ನಿಗಮಗಳ ಸಹಾಯ ಧನ ಹಾಗೂ ಶೈಕ್ಷಣಿಕ ಸೌಲಭ್ಯಗಳನ್ನು ಕಡಿಮೆ ಮಾಡಲಾಗಿದೆ,ಎಸ್ ಸಿ ಎಸ್ ಪಿ ಹಾಗೂ ಟಿಎಸ್ ಪಿ ಅನುದಾನದಲ್ಲಿ ಕೈಗೊಳ್ಳಲಾಗುವ ಕಾಮಗಾರಿಗಳ ದುರ್ಬಳಕೆಯಾಗುತ್ತಿವೆ.ಅಲ್ಲದೆ ಕಳಪೆ ಕಾಮಗಾರಿಗಳನ್ನು ನಿಯಂತ್ರಿಸಲಾಗುತ್ತಿಲ್ಲ ಅನ್ಯ ಇಲಾಖೆಗಳಲ್ಲಿರುವ ಎಸ್ ಸಿ ಎಸ್ ಪಿ ಹಾಗೂ ಟಿಎಸ್ ಪಿ ಹಣವನ್ನು ಬೇರೆ ಬೇರೆ ಉದ್ದೇಶಗಳಿಗೆ ಬಳಸಲಾಗುತ್ತಿದೆ .ಆದ್ದರಿಂದ ಅನ್ಯ ಇಲಾಖೆಗಳಲ್ಲಿರುವ ಎಸ್ ಸಿ ಎಸ್ ಪಿ ಹಾಗೂ ಟಿಎಸ್ ಪಿ ಹಣವನ್ನು ಸಮಾಜ ಕಲ್ಯಾಣ ಇಲಾಖೆಗೆ ವಾಪಸ್ ಪಡೆದು ವಿವಿಧ ಅಭಿವೃದ್ಧಿ ನಿಗಮಗಳ ಸಹಾಯಧನ ಹಾಗೂ ಶೈಕ್ಷಣಿಕ ಸೌಲಭ್ಯಗಳನ್ನು ಹೆಚ್ಚು ಮಾಡಿ ನಿಗದಿತ ಸಮಯದಲ್ಲಿ ಅನುದಾನ ಖರ್ಚು ಮಾಡದ ಅಧಿಕಾರಿಗಳನ್ನು ನಿಯಮಾನುಸಾರ ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಿ ದಲಿತ ಶೋಷಿತ ಸಮಾಜ ಸಂಘರ್ಷ ಸಮಿತಿಯವರು ತಾಲ್ಲೂಕು ದಂಡಾಧಿಕಾರಿ ಕೆ ಬಿ ರಾಮಚಂದ್ರಪ್ಪ ನವರಲ್ಲಿ ಮನವಿ ಸಲ್ಲಿಸಿದರು .

ಈ ಸಂದರ್ಭದಲ್ಲಿ ದಲಿತ ಶೋಷಿತ ಸಮಾಜ ಸಂಘರ್ಷ ಸಮಿತಿಯ ಜಿಲ್ಲಾ ಕಾರ್ಯಾಧ್ಯಕ್ಷ ಸಂತೋಷ ನೇೂಟದವರ,ಜಿಲ್ಲಾ ಉಪಾಧ್ಯಕ್ಷ ಎಲ್ ಜಯಪ್ಪ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ವಿನಾಯಕ,ಜಿಲ್ಲಾ ಉಪಾಧ್ಯಕ್ಷ ಡಿ ಡಿ ಹನುಮಂತಪ್ಪ ,ಚಿಕ್ಕನಹಳ್ಳಿ ಹನುಮಂತಪ್ಪ ,ಮಂಜುನಾಥ್, ನ್ಯಾಮತಿ ಹಾಲೇಶ್ ಉಪಸ್ಥಿತರಿದ್ದರು…

ವರದಿ… ಶ್ರೀನಿವಾಸ್ ಆರ್…

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ…9449553305/7892830899…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...