
ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಲೋಕಾಯುಕ್ತ ಪೊಲೀಸ್ ತುಮಕೂರಿನ ಕ್ಯಾತಸಂದ್ರ ಟೋಲ್ ಬಳಿ ಅರೆಸ್ಟ್ ಮಾಡಿದ್ದಾರೆ. ಚನ್ನಗಿರಿಯ ತಮ್ಮ ನಿವಾಸದಿಂದ ಮಾಡಾಳ್ ವಿರೂಪಾಕ್ಷಪ್ಪ ಬೆಂಗಳೂರಿನ ಕಡೆ ಬರುತ್ತಾ ಇದ್ದರು. ಈ ವೇಳೆ ಇನ್ನೋವಾ ಕಾರಿನಲ್ಲಿ ಬರುತ್ತಿದ್ದಾಗಲೇ ಮಾರ್ಗಮಧ್ಯೆ ಲೋಕಾಯುಕ್ತ ಪೊಲೀಸರು ಅವರನ್ನು ಅರೆಸ್ಟ್ ಮಾಡಿದ್ದಾರೆ.
ಮಾಡಾಳ್ ವಿರೂಪಾಕ್ಷಪ್ಪ ಚನ್ನಗಿರಿಯಿಂದ ಬೆಂಗಳೂರಿಗೆ ಹೋಗುವ ಮಾರ್ಗ ಮಧ್ಯದಲ್ಲಿ . ಲೋಕಾಯುಕ್ತ ಪೊಲೀಸರು ಅವರನ್ನು ಬಂಧಿಸುವ ಉದ್ದೇಶದಿಂದ ಮಾಡಾಳ್ ನಿವಾಸಕ್ಕೆ ಹೊರಟಿದ್ದರು. ಈ ಮಧ್ಯೆ ಬೆಂಗಳೂರಿಗೆ ಬರುತ್ತಿದ್ದ ವೇಳೆ ತುಮಕೂರಿನ ಕ್ಯಾತಸಂದ್ರ ಬಳಿ ಲೋಕಾಯುಕ್ತ ಪೊಲೀಸರು ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ವಶಕ್ಕೆ ಪಡೆದ್ದಾರೆ.
ಭ್ರಷ್ಟಾಚಾರ ಪ್ರಕರಣದಲ್ಲಿ ಸಿಲುಕಿರುವ ಮಾಡಾಳ್ ನಿರೀಕ್ಷಣಾ ಜಾಮೀನಿಗೆ ಸಲ್ಲಿಸಿದ್ದ ಅರ್ಜಿ ಇಂದು ವಜಾಗೊಂಡಿತ್ತು. ಈ ವಿಷಯ ತಿಳಿಯುತ್ತಿದ್ದಂತೆ ಸಾರ್ವಜನಿಕ ಕಾರ್ಯಕ್ರಮದಲ್ಲಿದ್ದ ಮಾಡಾಳ್, ಅದನ್ನು ಅರ್ಧಕ್ಕೇ ನಿಲ್ಲಿಸಿ ನಾಪತ್ತೆಯಾಗಿದ್ದರು. ಪರಾರಿ ಯಾಗಲು ಪ್ರಯತ್ನಿಸಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲಗೆ ಬಿದ್ದಿದ್ದಾರೆ…

ರಘುರಾಜ್ ಹೆಚ್.ಕೆ…9449553305…