
ಬೆಂಗಳೂರು: ಮಾಡಾಳು ವಿರೂಪಾಕ್ಷಪ್ಪರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ ಲೋಕಾಯುಕ್ತ ಪೊಲೀಸರು, ಹೆಚ್ಚಿನ ವಿಚಾರಣೆಗಾಗಿ 10 ದಿನಗಳ ಕಾಲ ತಮ್ಮ ಕಸ್ಟಡಿಗೆ ನೀಡುವಂತೆ ಮನವಿ ಮಾಡಿಕೊಂಡಿದ್ದರು.
ಆದರೆ ಘನ ಜನಪ್ರತಿನಿಧಿ ನ್ಯಾಯಾಲಯವು ಹೆಚ್ಚಿನ ವಿಚಾರಣೆಗಾಗಿ 5 ದಿನಗಳ ಕಾಲ ಲೋಕಾಯುಕ್ತ ಪೊಲೀಸರ ವಶಕ್ಕೆ ಒಪ್ಪಿಸಿ ಆದೇಶಿಸಿದೆ.
10 ದಿನಗಳ ಕಾಲ ಲೋಕಾಯುಕ್ತ ಪೊಲೀಸರು ತಮ್ಮ ವಶಕ್ಕೆ ನೀಡಬೇಕು ಎಂಬ ಮನವಿಗೆ ಮಾಡಾಳು ವಿರೂಪಾಕ್ಷಪ್ಪ ಪರ ವಕೀಲರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು ಕೊನೆಗೂ ಮಾಡಾಳು ವಿರೂಪಾಕ್ಷಪ್ಪರನ್ನು 5 ದಿನ ಲೋಕಾಯುಕ್ತ ಪೊಲೀಸರ ವಶಕ್ಕೆ ನೀಡಿದೆ….

ರಘುರಾಜ್ ಹೆಚ್.ಕೆ…9449553305….