
ಪತ್ರಿಕೆ, ಮಾಧ್ಯಮ, ಸಾಮಾಜಿಕ ಜಾಲತಾಣ ಹಾಗೂ ಇನ್ನಿತರೆ ಮೂಲಗಳಿಂದ ಯಾವುದೇ ರಾಜಕೀಯ ಪ್ರಚಾರ ಮಾಡಬೇಕಾದಲ್ಲಿ ಮತ್ತು ರಾಜಕೀಯ ಪ್ರೇರಿತ ಹೇಳಿಕೆ ನೀಡಬೇಕಾದಲ್ಲಿ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ನೇಮಕ ಮಾಡಿರುವ ಜಿಲ್ಲಾ ಮಾಧ್ಯಮ ಪ್ರಮಾಣೀಕರಣ ಹಾಗೂ ಮೇಲ್ವಿಚಾರಣಾ ಸಮಿತಿಯವರಿಂದ ಪೂರ್ವಾನುಮತಿ ಪಡೆಯಬೇಕು’ ರಾಜ್ಯದಲ್ಲಿ ಚುನಾವಣೆ ನೀತಿಸಂಹಿತೆ ಜಾರಿಯಾದ ಮೇಲೆ ವಿವಿಧ ಪಕ್ಷಗಳ ಅಭ್ಯರ್ಥಿಗಳಿಗೆ ಹಾಗೂ ಸ್ಪರ್ಧೆಯ ಆಕಾಂಕ್ಷಿಗಳಿಗೆ ಚುನಾವಣಾ ಆಯೋಗದ ಬಿಗಿ ನಿಯಮಗಳು ದುಃಸ್ವಪ್ನವಾಗಿ ಪರಿಣಮಿಸಿವೆ.
ಇದು ಪ್ರಜಾಪ್ರತಿನಿಧಿ ಕಾಯ್ದೆ 1951ರ ಅಡಿಯಲ್ಲಿ ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾಗಿದ್ದು.
ಸಾಮಾಜಿಕ ಜಾಲತಾಣಗಳಲ್ಲಿ ಈ ತರಹ ಪೋಸ್ಟರ್ಗಳನ್ನು ವಿಡಿಯೋಗಳನ್ನು ಹಂಚಿಕೊಂಡಿರುವ ಹಲವು ಆಕಾಂಕ್ಷಿಗಳಿಗೆ ಚುನಾವಣೆ ಅಧಿಕಾರಿಗಳು ನೋಟಿಸ್ ಜಾರಿಗೊಳಿಸಿದ್ದಾರೆ.
ಹಾಗೂ ವ್ಯಾಟ್ಸಪ್ ಗ್ರೂಪ್ ನ ಅಡ್ಮಿನ್ ಗಳಿಗೂ ಸಹ ನೋಟಿಸ್ ಗಳನ್ನು ಜಾರಿಗೊಳಿಸಲಾಗಿದೆ ಹಾಗಾಗಿ ಯಾವುದೇ ರೀತಿಯ ಚುನಾವಣೆ ಪ್ರಚಾರದ ವಿಡಿಯೋಗಳು ಆಡಿಯೋಗಳು ಪೋಸ್ಟರ್ಗಳನ್ನು ಹಾಕುವಾಗ ಎಚ್ಚರದಿಂದಿರಿ…

ರಘುರಾಜ್ ಹೆಚ್.ಕೆ…9449553305…