
ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ, ಶಿವಮೊಗ್ಗ ಜಿಲ್ಲೆಯಾದ್ಯಂತ ಚೆಕ್ ಪೋಸ್ಟ್ ಗಳನ್ನು ತೆರೆದು, ವಾಹನಗಳ ತಪಾಸಣೆಯನ್ನು ನಡೆಸುತ್ತಿದ್ದು, ಸೂಕ್ತ ದಾಖಲೆಗಳಿಲ್ಲದೇ ಸಾಗಾಟ ಮಾಡುತ್ತಿದ್ದ ಮತ್ತು ಅನಧಿಕೃತವಾಗಿ ಸಂಗ್ರಹಿಸಿಟ್ಟಿದ್ದ ಈ ಕೆಳಕಂಡ ವಸ್ತುಗಳು ಮತ್ತು ನಗದು ಹಣವನ್ನು ಶಿವಮೊಗ್ಗ ಜಿಲ್ಲಾ ವರಿಷ್ಠಾಧಿಕಾರಿಗಳಾದ ಮಿಥುನ್ ಕುಮಾರ್ ಜಿ ಕೆ ಅವರ ಮಾರ್ಗದರ್ಶನದ ಮೇರೆಗೆ ಅಮಾನತ್ತು ಪಡಿಸಿಕೊಳ್ಳಲಾಗಿದೆ.
ನಿನ್ನೆ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ಅನಧಿಕೃತವಾಗಿ ಸಂಗ್ರಹಿಸಿ ಇಟ್ಟಿದ್ದ ಅಂದಾಜು ಮೌಲ್ಯ ರೂ 4,50,00,000/- ಗಳ ಸೀರೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ಬುಲೆರೋ ವಾಹನದಲ್ಲಿ ಸಾಗಿಸುತ್ತಿದ್ದ ರೂ 1,40,00,000/- ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ.
ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ವಾಹನದಲ್ಲಿ ಸಾಗಿಸುತ್ತಿದ್ದ ರೂ 20,00,000/- ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ.
ವಿನೋಬನಗರ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ಲಾರಿಯಲ್ಲಿ ಸಾಗಿಸುತ್ತಿದ್ದ ಒಟ್ಟು 100 ಬ್ಯಾಗ್ ಗಳಲ್ಲಿದ್ದ, ಅಂದಾಜು 1,56,000/- ರೂ ಮೌಲ್ಯದ 26 ಕ್ವಿಂಟಾಲ್ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ….

ರಘುರಾಜ್ ಹೆಚ್.ಕೆ..9449553305…