Wednesday, April 30, 2025
Google search engine
Homeರಾಜ್ಯಆಗಸ್ಟ್ 23ರಿಂದ ಪ್ರಥಮ ದ್ವಿತೀಯ ಪಿಯು ಕಾಲೇಜ್ ಪ್ರಾರಂಭ, ಮಾರ್ಗಸೂಚಿ ಪ್ರಕಟ ಏನಿದೆ ಮಾರ್ಗಸೂಚಿಯಲ್ಲಿ?

ಆಗಸ್ಟ್ 23ರಿಂದ ಪ್ರಥಮ ದ್ವಿತೀಯ ಪಿಯು ಕಾಲೇಜ್ ಪ್ರಾರಂಭ, ಮಾರ್ಗಸೂಚಿ ಪ್ರಕಟ ಏನಿದೆ ಮಾರ್ಗಸೂಚಿಯಲ್ಲಿ?

ಪ್ರಥಮ ಹಾಗೂ ದ್ವಿತೀಯ ಪಿಯುಸಿ ಕಾಲೇಜು ಆರಂಭಿಸುವ ಕುರಿತು ಸರ್ಕಾರದಿಂದ ಗೈಡ್​ಲೈನ್ಸ್ ಬಿಡುಗಡೆ ಆಗಿದೆ. ಶೇಕಡಾ 2 ಕ್ಕಿಂತ ಕಡಿಮೆ ಕೊರೊನಾ ಪಾಸಿಟಿವಿಟಿ ಇರುವ ಜಿಲ್ಲೆಗಳಲ್ಲಿ ಕಾಲೇಜು ತೆರೆಯಲು ಸೂಚಿಸಲಾಗಿದೆ. ಏಕಕಾಲದಲ್ಲಿ ಪ್ರಥಮ, ದ್ವಿತೀಯ ಪಿಯು ತರಗತಿ ನಡೆಸುವುದು ಎಂದು ಹೇಳಲಾಗಿದೆ. ವಾರದ ಮೊದಲ 3ದಿನ ಶೇಕಡಾ 50 ರಷ್ಟು ವಿದ್ಯಾರ್ಥಿಗಳಿಗೆ ಕ್ಲಾಸ್ ಮಾಡಬೇಕು. ಶೇಕಡಾ 50 ರಷ್ಟು ವಿದ್ಯಾರ್ಥಿಗಳು ಭೌತಿಕ ತರಗತಿಗಳಿಗೆ ಹಾಜರು ಆಗಬೇಕು. ಉಳಿದ ಶೇಕಡಾ 50 ರಷ್ಟು ವಿದ್ಯಾರ್ಥಿಗಳಿಗೆ ಮನೆಯಲ್ಲೇ ಆನ್​​ಲೈನ್​ ತರಗತಿ ನಡೆಸುವುದು. ಗುರುವಾರ, ಶುಕ್ರವಾರ, ಶನಿವಾರ ಉಳಿದ ಮಕ್ಕಳಿಗೆ ಕ್ಲಾಸ್​ ನಡೆಸುವ ಬಗ್ಗೆ ಸೂಚನೆ ಕೊಡಲಾಗಿದೆ.

ಆಗಸ್ಟ್ 23 ರಿಂದ ಪಿಯು ಕಾಲೇಜು ತರಗತಿಗಳು ಆರಂಭವಾಗಲಿದೆ. ಪ್ರಥಮ, ದ್ವಿತೀಯ ಪಿಯುಸಿ ತರಗತಿ ಏಕಕಾಲಕ್ಕೆ ಆರಂಭ ಆಗಲಿದೆ. ಪ್ರಥಮ, ದ್ವಿತೀಯ ಪಿಯುಸಿ ಆರಂಭಕ್ಕೆ ಮಾರ್ಗಸೂಚಿ ಪ್ರಕಟ ಆಗಿದೆ. ಕಾಲೇಜು ಆರಂಭಿಸುವ ಕುರಿತು ಸರ್ಕಾರದಿಂದ ಗೈಡ್​ಲೈನ್ಸ್ ನೀಡಲಾಗಿದೆ. ಅದರಂತೆ, ಶೇಕಡಾ 2 ಕ್ಕಿಂತ ಕಡಿಮೆ ಪಾಸಿಟಿವಿಟಿ ಇರುವ ಜಿಲ್ಲೆಗಳಲ್ಲಿ ಕಾಲೇಜು ಓಪನ್ ಆಗಲಿದೆ. ಏಕಕಾಲದಲ್ಲಿ ಪ್ರಥಮ, ದ್ವಿತೀಯ ಪಿಯುಸಿ ತರಗತಿ ನಡೆಸುವುದು ಎಂದು ಹೇಳಲಾಗಿದೆ. ವಾರದ ಮೊದಲ 3ದಿನ ಶೇಕಡಾ 50 ರಷ್ಟು ವಿದ್ಯಾರ್ಥಿಗಳಿಗೆ ಮತ್ತು ನಂತರ ಶೇಕಡಾ 50 ರಷ್ಟು ವಿದ್ಯಾರ್ಥಿಗಳು ಭೌತಿಕ ತರಗತಿಗಳಿಗೆ ಹಾಜರು ಆಗಬಹುದು.

ಕಾಲೇಜು ಆರಂಭಕ್ಕೆ ಮಾರ್ಗಸೂಚಿಯ ಪ್ರಮುಖ ಅಂಶಗಳು!!

1)ವಿದ್ಯಾರ್ಥಿಗಳ ಸಂಖ್ಯೆ 100 ಕ್ಕಿಂತ ಕಡಿಮೆ ಇರಬೇಕು
ವಿಶಾಲ ಕೊಠಡಿಗಳಿದ್ದರೆ ವಾರದ ಎಲ್ಲಾ ದಿನ ಭೌತಿಕ ತರಗತಿ ನಡೆಸಬಹುದು.


2)ಕಾಲೇಜು ಆವರಣದಲ್ಲಿ ದೈಹಿಕ ಅಂತರ ಕಡ್ಡಾಯವಾಗಿರುತ್ತೆ
ಪ್ರಿನ್ಸಿಪಾಲ್, ಸಿಬ್ಬಂದಿ ಕಡ್ಡಾಯವಾಗಿ ಲಸಿಕೆ ಪಡೆದಿರಬೇಕು.


3)ವಿದ್ಯಾರ್ಥಿಗಳು ಕಾಲೇಜಿಗೆ ಬರಲು ಪೋಷಕರ ಒಪ್ಪಿಗೆ ಬೇಕು
ವಿದ್ಯಾರ್ಥಿಗಳಿಗೆ ಕೊವಿಡ್​​-19 ನೆಗೆಟಿವ್ ವರದಿ ಕಡ್ಡಾಯ.


4)ಉಪನ್ಯಾಸಕರು ಹಾಗೂ ಪ್ರಾಂಶುಪಾಲರು ವಿದ್ಯಾರ್ಥಿಗಳಿಂದ ಕೊವಿಡ್ ನಿಯಮಗಳ ಉಲ್ಲಂಘನೆಯಾಗದಂತೆ ಗಮನಿಸಬೇಕು.


5)ಮಾಸ್ಕ್ ಹಾಗೂ ಸ್ಯಾನಿಟೈಸರ್ ಬಳಕೆ ಕಡ್ಡಾಯ.


6)ಕೆಮ್ಮುವಾಗ, ಸೀನುವಾಗ ಕರವಸ್ತ್ರ ಅಡ್ಡ ಹಿಡಿಯಬೇಕು,

ಎಲ್ಲೆಂದರಲ್ಲಿ ಉಗುಳಬಾರದು.


7)ಕಾಲೇಜು ಆರಂಭಕ್ಕೆ ಮುನ್ನ ಇಡೀ ಆವರಣ ಹಾಗೂ ಕೊಠಡಿಗಳನ್ನ ಸ್ಯಾನಿಟೈಸ್ ಮಾಡಬೇಕು.


8) ಕೋವಿಡ್ ಗೆ ಬಳಸಿದ ಕಟ್ಟಡಗಳನ್ನ ಎರೆಡೆರಡು ಬಾರಿ ಸ್ಯಾನಿಟೈಸ್ ಮಾಡಬೇಕು.


9)ಸಾಮೂಹಿಕ ಪ್ರಾರ್ಥನೆ, ಕ್ರೀಡೆ ಎಲ್ಲಾ ಚಟುವಟಿಕೆಗಳಿಗೆ ಕೋವಿಡ್ ನಿಯಮ ಕಡ್ಡಾಯ.


10)ಪ್ರವೇಶ ಧ್ವಾರದಲ್ಲಿ ಥರ್ಮಲ್ ಸ್ಕ್ಯಾನರ್ ಹಾಗೂ ಸ್ಯಾನಿಟೈಸರ್ ಕಡ್ಡಾಯವಾಗಿ ಇರಬೇಕು.

ಮೇಲೆ ವಿವರಿಸಿದ ಎಲ್ಲಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಮಾರ್ಗಸೂಚಿಯಲ್ಲಿ ಪ್ರಕಟ ಮಾಡಲಾಗಿದೆ…

ವರದಿ… ರಘುರಾಜ್ ಹೆಚ್. ಕೆ..

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ…9449553305/7892830899…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...