
ಕರ್ನಾಟಕ ಪೊಲೀಸ್ ಕಾಯ್ದೆ-1963 ಅಸ್ತಿತ್ವಕ್ಕೆ ಬಂದ ನಂತರ, ದಿನಾಂಕ: 02-04-1965 ರಂದು ಪೊಲೀಸ್ ಇಲಾಖೆಗೆ ಪ್ರತ್ಯೇಕ ಧ್ವಜವನ್ನುರೂಪಿಸಿ ಪೊಲೀಸ್ ಇಲಾಖೆಗೆ ಹಸ್ತಾಂತರಗೊಳಿಸಿರುತ್ತದೆ. ಈ ಹಿನ್ನೆಲೆಯಲ್ಲಿ ಪ್ರತಿ ವರ್ಷ ಏಪ್ರಿಲ್ 2ನೇ ತಾರೀಕಿನಂದು ಪೊಲೀಸ್ ಧ್ವಜ ದಿನಾಚರಣೆಯನ್ನಾಗಿ ರಾಜ್ಯಾದ್ಯಂತ ಆಚರಿಸಲಾಗುತ್ತದೆ. ಈ ದಿನದಂದು ಪೊಲೀಸ್ ಇಲಾಖೆಯಲ್ಲಿ ನಿವೃತ್ತರಾದ ಅಧಿಕಾರಿ/ಸಿಬ್ಬಂದಿಯವರು ತಮ್ಮ ಸೇವಾವಧಿಯಲ್ಲಿ ನಿರ್ವಹಿಸಿದ ಸೇವೆಯನ್ನು ಸ್ಮರಿಸಲಾಗುತ್ತದೆ.
ಇಂದು ಶಿವಮೊಗ್ಗ ಡಿಎಆರ್ ಪೊಲೀಸ್ ಕವಾಯತು ಮೈದಾನದಲ್ಲಿ ಪೊಲೀಸ್ ಧ್ವಜ ದಿನಾಚರಣೆಯನ್ನು ಆಚರಿಸಲಾಗಿದ್ದು, ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಿಥುನ್ ಕುಮಾರ್. ಜಿ. ಕೆ. ಐಪಿಎಸ್, ಮಾನ್ಯ ಪೋಲಿಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆಯವರು ವಹಿಸಿದ್ದು, ಮುಖ್ಯ ಅತಿಥಿಗಳಾಗಿ ದಾನಂ ನಿವೃತ್ತ ಎಸ್ಐ ರವರು ಆಗಮಿಸಿ, ಪೊಲೀಸ್ ತುಕಡಿಗಳಿಂದ ಗೌರವ ವಂದನೆಗಳನ್ನು ಸ್ವೀಕರಿಸಿದರು. ಶಿವಾನಂದ ಗುಣದಾಳ್, ಆರ್. ಪಿ. ಐ ರವರು ಪೆರೇಡ್ ಕಮಾಂಡರ್ ಆಗಿ ನೇತೃತ್ವವನ್ನು ವಹಿಸಿದ್ದರು.
ದಿನಾಂಕ: 01-04-2022 ರಿಂದ ದಿನಾಂಕ: 31-03-2023 ರವರೆಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ನಲ್ಲಿ ಕರ್ತವ್ಯ ನಿರ್ವಹಿಸಿದ ಒಟ್ಟು 24 ಜನ ಎಎಸ್‌ಐ, 05 ಜನ ಎ.ಆರ್.ಎಸ್.ಐ, 03 ಜನ ಸಿಹೆಚ್‌ಸಿ, 02 ಜನ ಎಹೆಚ್‌ಸಿ ಮತ್ತು 1 ಸಿಪಿಸಿ ಸೇರಿದಂತೆ ಒಟ್ಟು 35 ಜನ ಪೊಲೀಸ್ ಅಧಿಕಾರಿ/ಸಿಬ್ಬಂದಿಗಳು ನಿವೃತ್ತಿ ಹೊಂದಿದ್ದು, ಇವರುಗಳ ಸೇವೆಯನ್ನು ಸ್ಮರಿಸಲಾಯಿತು.
ಶಿಸ್ತು ಮತ್ತು ದಕ್ಷತೆಗೆ ಹೆಸರಾಗಿರುವ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುವ ಪ್ರತಿ ಅಧಿಕಾರಿ ಸಿಬ್ಬಂಧಿಗಳು ತಮ್ಮಕಾರ್ಯಕ್ಷೇತ್ರದಲ್ಲಿ ಜವಾಬ್ದಾರಿಯರಿತು ಸದಾ ಎಚ್ಚರಿಕೆಯಿಂದಿದ್ದು ಕಾರ್ಯನಿರ್ವಹಿಸುವಂತೆ ನಿವೃತ್ತ a.s.i. ದಾನಂ ಅವರು ಹೇಳಿದರು.
ಪೊಲೀಸ್ ಇಲಾಖೆಯ ವತಿಯಿಂದ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಏರ್ಪಡಿಸಲಾಗಿದ್ದ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡುತ್ತಿದ್ದರು. ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿಗಳು ಇಲಾಖೆ ಮಾತ್ರವಲ್ಲದೆ ಎಲ್ಲೆಡೆಯಲ್ಲಿಯೂ ಗೌರವಕ್ಕೆ ಪಾತ್ರರಾಗುತ್ತಾರೆ ಎಂದರು.
ನನ್ನ ಸೇವೆಯನ್ನು ಗುರುತಿಸಿ ಇಲಾಖೆಯ ಹಿರಿಯ ಅಧಿಕಾರಿಗಳು ಅನೇಕ ಮಹತ್ವದ ಜವಾಬ್ದಾರಿಗಳನ್ನು ನೀಡಿದರು. ಹಿರಿಯ ಅಧಿಕಾರಿಗಳ ಸಲಹೆ ಮತ್ತು ಮಾರ್ಗದರ್ಶನದಿಂದ ಸಹ ಸಿಬ್ಬಂದಿಗಳ ಸಹಕಾರದಿಂದ ನಿರ್ವಹಿಸಿದ ಕಾರ್ಯಗಳಿಗಾಗಿ ಹಲವು ಪುರಸ್ಕಾರ ಲಭಿಸಿರುವುದು ನನಗೆ ಅತೀವ ಸಂತಸ ತಂದಿದೆ ಎಂದರು.
ಇಲಾಖೆಯ ಎಲ್ಲಾ ಹಂತದ ಅಧಿಕಾರಿ ಸಿಬ್ಬಂಧಿಗಳು ಕರ್ತವ್ಯದಲ್ಲಿ ನಿಷ್ಠೆ, ಶಿಸ್ತು , ಬದ್ಧತೆಯೊಂಡಿಗೆ ವೃತ್ತಿಪರತೆಯನ್ನು ಹೆಚ್ಚಿಸಿಕೊಳ್ಳುವಂತೆ ಸಲಹೆ ನೀಡಿದ ಅವರು, ಅಗತ್ಯವಿರುವ ಸಿಬ್ಬಂಧಿಗಳು ಸೂಕ್ತ ತರಬೇತಿ ಪಡೆದು ಮುಂದುವರೆಯುವಂತೆ ಸಲಹೆ ನೀಡಿದರು.
ಉತ್ತಮವಾಗಿ ಸೇವೆ ಸಲ್ಲಿಸಿ. ಸಮಯ ಪಾಲನೆ ಮಾಡಿ ನಿರೀಕ್ಷೆಯಂತೆ ಕಾರ್ಯ ನಿರ್ವಹಿಸಿ. ಮಾಡುವ ಕಾರ್ಯ ನೆನಪಿನಲ್ಲಿ ಉಳಿಯುವಂತಾಗಲಿ. ವಿಶೇಷವಾಗಿ ಜನರಲ್ಲಿ ವಾಹನ ಚಾಲನೆ, ಸಂಚಾರಿ ನಿಯಮಗಳ ಅರಿವು ಮೂಡಿಸಬೇಕಾದ ಅಗತ್ಯವಿದೆ ಎಂದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಅವರು ಸರ್ವರನ್ನು ಸ್ವಾಗತಿಸಿ ಮಾತನಾಡಿ ಸ್ಥಾಪಿಸಲಾಗಿರುವ ಪೊಲೀಸ್ ನಿಧಿಯಿಂದ ಜಿಲ್ಲೆಯಲ್ಲಿ ನಿವೃತ್ತಿ ಜೀವನ ಸಾಗಿಸುತ್ತಿರುವ ಹಾಗೂ ಅನಾರೋಗ್ಯದಿಂದಿರುವ 66ಜನರಿಗೆ 2ಲಕ್ಷಕ್ಕೂ ಹೆಚ್ಚಿನ ಧನ ಸಹಾಯವನ್ನು ಮಾಡಲಾಗಿದೆ. ಆಲ್ಲದೆ ಮೃತರಾದ 13ಪೊಲೀಸ್ ಕುಟುಂಬಗಳಿಗೆ 1.30ಲಕ್ಷ ಹಣ ನೀಡಿ ಸಹಕರಿಸಲಾಗಿದೆ. ಅಂತೆಯೇ ಪೊಲೀಸ್ ಕುಟುಂಬಗಳ ಕಲ್ಯಾಣ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಅನಿಲ್ ಕುಮಾರ್ ಭೂಮರಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ, ಹಾಗೂ ಶಿವಮೊಗ್ಗ ಜಿಲ್ಲೆಯ ಎಲ್ಲಾ ಹಿರಿಯ ಸಹಾಯಕ ಪೊಲೀಸ್ ಅಧೀಕ್ಷಕರು, ಪೋಲಿಸ್ ಉಪಾಧೀಕ್ಷಕರುಗಳು, ಪೋಲಿಸ್ ವೃತ್ತ ನಿರೀಕ್ಷಕರು / ಪೋಲಿಸ್ ನಿರೀಕ್ಷಕರು, ಪೋಲಿಸ್ ಉಪ ನಿರೀಕ್ಷಕರು, ನಿವೃತ್ತ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ಹಾಗೂ ಕುಟುಂಬ ವರ್ಗದವರು ಹಾಜರಿದ್ದರು…

ರಘುರಾಜ್ ಹೆಚ್.ಕೆ..9449553305…