Saturday, May 3, 2025
Google search engine
Homeಶಿವಮೊಗ್ಗArrangement of various religious programs at Sri Adichunchanagiri Math: ಏಪ್ರಿಲ್ 6 ರಂದು...

Arrangement of various religious programs at Sri Adichunchanagiri Math: ಏಪ್ರಿಲ್ 6 ರಂದು ಕಾಲಭೈರವೇಶ್ವರ ದೇವಾಲಯದ ವಾರ್ಷಿಕೋತ್ಸವ ಹಾಗೂ ಆದಿಚುಂಚನಗಿರಿ ಸಮುದಾಯ ಭವನದ ರಜತ ಮಹೋತ್ಸವ..!!

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪರಮಪೂಜ್ಯ ಜಗದ್ಗುರು ಪದ್ಮಭೂಷಣ ಶ್ರೀ ಶ್ರೀ ಶ್ರೀ ಡಾ. ಬಾಲ ಗಂಗಾಧರನಾಥ ಮಹಾಸ್ವಾಮೀಜಿಗಳವರ ಕೃಪಾ ಆಶೀರ್ವಾದಗಳೊಂದಿಗೆ,

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮಿಗಳ ಮತ್ತು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಗಳವರ ದಿವ್ಯ ಸಾನ್ನಿ ಧ್ಯದಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ .ಶ್ರೀ ಕಾಲಭೈರವೇಶ್ವರ ಸ್ವಾಮಿ ದೇವಸ್ಥಾನದ ವಾರ್ಷಿಕೋತ್ಸವ, ಆದಿಚುಂಚನಗಿರಿ ಸಮುದಾಯ ಭವನದ ರಜತ ಮಹೋತ್ಸವ, ಆದರ್ಶ ಹಿರಿಯ ದಂಪತಿಗಳಿಗೆ ಸನ್ಮಾನ, ಬಿಜಿಎಸ್ ದತ್ತಿನಿದಿ ಹಾಗೂ ಸಾಹಿತ್ಯ ಹುಣ್ಣಿಮೆ ಕಾರ್ಯಕ್ರಮ ಏಪ್ರಿಲ್ 6 ಮತ್ತು 7 ರಂದು ಎರಡು ದಿನಗಳ ಕಾಲ ನಗರದ ಶರಾವತಿ ನಗರದ ಬಡಾವಣೆಯಲ್ಲಿರುವ ಶ್ರೀ ಕಾಲಭೈರವೇಶ್ವರ ದೇವಸ್ಥಾನದ ಸನ್ನಿಧಿಯಲ್ಲಿ ನಡೆಯಲಿದೆ.

ಏಪ್ರಿಲ್ 6 ರಂದು ಬೆಳಿಗ್ಗೆ 5:30 ರಿಂದ ಶ್ರೀ ಕಾಲಭೈರವೇಶ್ವರ ದೇವಾಲಯದ ವಾರ್ಷಿಕೋತ್ಸವ ಸಮಾರಂಭದ ನಿಮಿತ್ತ ಸ್ವಾಮಿಗೆ  ಹೋಮ  ಹವನಾದಿಗಳೊಂದಿಗೆ ಕುಂಭಾಭಿಷೇಕ, ಮಹಾಮಂಗಳಾರತಿ ವಿಶೇಷ ಪೂಜಾ ಕೈಂಕರ್ಯಗಳೊಂದಿಗೆ   ಕಾರ್ಯಕ್ರಮಕ್ಕೆ ಚಾಲನೆ  ದೊರೆಯಲಿದೆ.ನಂತರ ಬೆಳಿಗ್ಗೆ 8 ಗಂಟೆಗೆ ಆದರ್ಶ ಹಿರಿಯ ದಂಪತಿಗಳಿಗೆ ಸನ್ಮಾನ ಕಾರ್ಯಕ್ರಮ ಸಹ ಇದೇ ಸ್ಥಳದಲ್ಲಿ ನಡೆಯಲಿದೆ.

  ಶ್ರೀ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಬೆಳಿಗ್ಗೆ 10:30ಕ್ಕೆ ಪಿಯುಸಿ ವಿದ್ಯಾರ್ಥಿಗಳಿಗೆ ನಡೆಯುವ ಕಾರ್ಯಕ್ರಮದಲ್ಲಿ  ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಲಿದ್ದು, ಅಂದು ಸಂಜೆ 6:30 ರಿಂದ ಸಾಹಿತ್ಯ ಹುಣ್ಣಿಮೆ ಹಾಗೂ ಬಿಜಿಎಸ್ ದತ್ತಿ ನಿಧಿ ಹಾಗೂ ಸಾಹಿತ್ಯ ಹುಣ್ಣಿಮೆ ಮತ್ತು ಇತರೆ ಕಾರ್ಯಕ್ರಮಗಳು ಆದಿಚುಂಚನಗಿರಿ ಸಮುದಾಯ ಭವನದಲ್ಲಿ ನಡೆಯಲಿದೆ.

ಏಪ್ರಿಲ್ 7 ರಂದು ಬೆಳಿಗ್ಗೆ 8:00ಗೆ ಚಿಣ್ಣರ ಬೇಸಿಗೆ ಶಿಬಿರ ಉದ್ಘಾಟನೆ ಪರಮ ಪೂಜ್ಯರಿಂದ ಆಗಲಿದ್ದು ಶ್ರೀ ಆದಿಚುಂಚನಗಿರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಾಗೂ ಶರಾವತಿ ನಗರದ ಸಂಯುಕ್ತ ಪ್ರೌಢಶಾಲೆಯಲ್ಲಿ ಶಿಬಿರವನ್ನ ಆಯೋಜಿಸಲಾಗಿದೆ.

     ಅಂದು ಬೆಳಿಗ್ಗೆ 10:30ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಈ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾ ಸ್ವಾಮೀಜಿಯವರು ಸಾನ್ನಿಧ್ಯ  ವಹಿಸಲಿದ್ದು, ಶ್ರೀ ಆದಿಚುಂಚನಗಿರಿ ಮಹಾಸಂಸಾನ ಶಾಖಾ ಮಠದ ಪೂಜ್ಯರು ಈ ಎಲ್ಲಾ ಕಾರ್ಯಕ್ರಮದಲ್ಲಿ ನಗರದ ನಾಗರಿಕರು ಹಾಗೂ ಪೋಷಕ ಬಂಧುಗಳು,ಹಾಗೂ ಶ್ರೀ ಮಠದ ಸದ್ಭಕ್ತರು  ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ಎರಡು ದಿನಗಳ ಕಾರ್ಯಕ್ರಮವನ್ನ ಯಶಸ್ವಿಗೊಳಿಸಿ ಕೊಡಬೇಕಾಗಿ ಕಾರ್ಯಕ್ರಮದ ಆಯೋಜಕರು ಕೋರಿದ್ದಾರೆ...

ರಘುರಾಜ್ ಹೆಚ್.ಕೆ..9449553305....
RELATED ARTICLES
- Advertisment -
Google search engine

Most Popular

Recent Comments

Latest news
ಬೀದಿ ನಾಯಿಗಳ ಸಂತಾನ ಹರಣಕ್ಕೆ ದಿನಾಂಕ ಫಿಕ್ಸ್..! ಇಬ್ಬರು ಮಹಿಳೆಯರು ನಾಪತ್ತೆ..! ಮಿನಿಸ್ಟರ್ ಮಧು ಬಂಗಾರಪ್ಪನವರ ಮಗ ಸೂರ್ಯನ ಸಾಧನೆ..! ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ...