
ಶಿವಮೊಗ್ಗ: ಇಂದು ಜಿಲ್ಲಾಡಳಿತ ಹಾಗೂ ಜಿಲ್ಲಾಪಂಚಾಯತ್ ಮತ್ತು ಮಹಾನಗರಪಾಲಿಕೆ ಸ್ವೀಪ್ ಸಮಿತಿ ವತಿಯಿಂದ ಮತದಾನ ಜಾಗೃತಿಗಾಗಿ ಹಮ್ಮಿಕೊಂಡಿದ್ದ ಬೃಹತ್ ಬೈಕ್ ಜಾಥಾ ಯಶಸ್ವೀಯಾಗಿ ಮುಕ್ತಾಯವಾಗಿದ್ದು.
ಸದರಿ ಜಾಥಾದಲ್ಲಿ ಸುಮಾರು 250 ಕ್ಕೂ ಅಧಿಕ ಬೈಕ್ ಸವಾರರು ಪಾಲ್ಗೊಂಡು ನಗರದ ಪ್ರಮುಖ ಬಡಾವಣೆಗಳಲ್ಲಿ ಮತದಾನ ಜಾಗೃತಿ ಮೂಡಿಸಿದರು.
ಈ ಜಾಥವನ್ನು ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸ್ನೇಹಲ್ ಸುಧಾಕರ್ ಲೋಕಂಡೆ, ಮಾಹನಗರ ಪಾಲಿಕೆಯ ಆಯುಕ್ತರಾದ ಮಾಯನಗೌಡ ಉದ್ಘಾಟಿಸಿದರು…
ಕಾರ್ಯಕ್ರಮದಲ್ಲಿ ಸ್ವೀಪ್ ಸಮಿತಿಯ ಎಲ್ಲಾ ಸದಸ್ಯರು ಭಾಗವಹಿಸಿದ್ದರು…
ರಘುರಾಜ್ ಹೆಚ್.ಕೆ…9449553305….