Saturday, May 3, 2025
Google search engine
Homeರಾಜ್ಯ75 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲ್ಲಲಿದ್ದೇನೆ: ಬೊಮ್ಮನಹಳ್ಳೀ ಶಾಸಕ ಸತೀಶ್‌ ರೆಡ್ಡಿ..!!

75 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲ್ಲಲಿದ್ದೇನೆ: ಬೊಮ್ಮನಹಳ್ಳೀ ಶಾಸಕ ಸತೀಶ್‌ ರೆಡ್ಡಿ..!!

ಬೆಂಗಳೂರು ಏಪ್ರಿಲ್‌ 17: ಕ್ಷೇತ್ರದಲ್ಲಿ ನಾನು ಮಾಡಿರುವ ಅಭಿವೃದ್ದಿ ಕೆಲಸಗಳು ಕೈ ಹಿಡಿಯಲಿದ್ದು, ಸುಮಾರು 75 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ನಾಲ್ಕನೇ ಬಾರಿಗೆ ಬೊಮ್ಮನಹಳ್ಳಿ ಕ್ಷೇತ್ರದ ಜನರು ನನಗೆ ಆಶೀರ್ವದಿಸಲಿದ್ದಾರೆ ಎಂದು ಬಿಜೆಪಿ ಮುಖ್ಯ ಸಚೇತಕರು ಹಾಗೂ ಬೊಮ್ಮನಹಳ್ಳಿ ಶಾಸಕರಾದ ಸತೀಶ್‌ ರೆಡ್ಡಿ ಹೇಳಿದರು.

ಇಂದು ಬೊಮ್ಮನಹಳ್ಳೀ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ನಾಲ್ಕನೇ ಬಾರಿ ನಾಮಪತ್ರ ಸಲ್ಲಿಸಿ ಮಾತನಾಡಿದರು. ಕೇಂದ್ರದಲ್ಲಿ ನರೇಂದ್ರ ಮೋದಿಜಿ ಅವರ ನೇತೃತ್ವದ ಸರಕಾರ ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರಗಳು ಡಬಲ್‌ ಫೋರ್ಸ್‌ನಲ್ಲಿ ಅಭಿವೃದ್ದಿ ಕಾರ್ಯವನ್ನು ಮಾಡಿವೆ. ಸತತ ಮೂರು ಬಾರಿ ಆಯ್ಕೆಯಾಗುವ ಮೂಲಕ ನನ್ನ ಕ್ಷೇತ್ರದಲ್ಲಿ ಹಲವಾರು ಅಭಿವೃದ್ದಿ ಕಾರ್ಯಗಳನ್ನು ಮಾಡಿದ್ದು ಇವುಗಳ ಆಧಾರದ ಮೇಲೆ ಮತದಾರರು ಹೆಚ್ಚಿನ ಅಂತರದಿಂದ ಗೆಲ್ಲಿಸಲಿದ್ದಾರೆ ಎಂದು ಹೇಳಿದರು.

ನಾಮಪತ್ರ ಸಲ್ಲಿಕೆಗೂ ಮುನ್ನ ಬೃಹತ್‌ ಮೆರವಣಿಗೆಯಲ್ಲಿ ಆಗಮಿಸಿದ ಅವರು ಹೊಂಗಸಂದ್ರದ ಶ್ರೀ ವೀರಾಂಜನೇಯಸ್ವಾಮಿ ದೇವರಿಗೆ ಪೂಜೆ ಸಲ್ಲಿಸಿ, ಬಿಬಿಎಂಪಿ ಮಾಜಿ ಉಪಮೇಯರ್‌ ರಾಮ್‌ ಮೋಹನ್‌ ರಾಜ್‌ ಹಾಗೂ ಇನ್ನಿತರ ಪ್ರಮುಖ ನಾಯಕರೊಂದಿಗೆ ನಾಮಪತ್ರ ಸಲ್ಲಿಸಿದರು…

ರಘುರಾಜ್ ಹೆಚ್.ಕೆ…9449553305…

RELATED ARTICLES
- Advertisment -
Google search engine

Most Popular

Recent Comments

Latest news
ಬೀದಿ ನಾಯಿಗಳ ಸಂತಾನ ಹರಣಕ್ಕೆ ದಿನಾಂಕ ಫಿಕ್ಸ್..! ಇಬ್ಬರು ಮಹಿಳೆಯರು ನಾಪತ್ತೆ..! ಮಿನಿಸ್ಟರ್ ಮಧು ಬಂಗಾರಪ್ಪನವರ ಮಗ ಸೂರ್ಯನ ಸಾಧನೆ..! ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ...