Home ರಾಜ್ಯBig breaking news: ಮಾಜಿ ಕಾಂಗ್ರೆಸ್ ಶಾಸಕ ಕೆಬಿ ಪ್ರಸನ್ನ ಕುಮಾರ್ ಜೆಡಿಎಸ್ ತೆಕ್ಕೆಗೆ ..?! ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ದೇವೇಗೌಡರ ರಾಜಕೀಯ ಲೆಕ್ಕಾಚಾರ ವರ್ಕೌಟ್ ಆಗುತ್ತಾ..?!

Big breaking news: ಮಾಜಿ ಕಾಂಗ್ರೆಸ್ ಶಾಸಕ ಕೆಬಿ ಪ್ರಸನ್ನ ಕುಮಾರ್ ಜೆಡಿಎಸ್ ತೆಕ್ಕೆಗೆ ..?! ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ದೇವೇಗೌಡರ ರಾಜಕೀಯ ಲೆಕ್ಕಾಚಾರ ವರ್ಕೌಟ್ ಆಗುತ್ತಾ..?!

by EDITOR NEWS WARRIORS
0 comments

ಶಿವಮೊಗ್ಗ : ಕಾಂಗ್ರೆಸ್ ಮಾಜಿ ಶಾಸಕ ಕೆಬಿ ಪ್ರಸನ್ನ ಕುಮಾರ್ ಕಾಂಗ್ರೆಸ್ ನಿಂದ ಟಿಕೆಟ್ ಸಿಗದಿದ್ದ ಕಾರಣ ಅಸಮಾಧಾನ ಗೊಂಡು ಜೆಡಿಎಸ್ ಪಕ್ಷಕ್ಕೆ ಮಾಜಿ ಪ್ರಧಾನಿ ಜೆಡಿಎಸ್ ಪಕ್ಷದ ವರಿಷ್ಠ ಎಚ್ ಡಿ ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಮ್ಮುಖದಲ್ಲಿ ಮಾತುಕತೆ ನಡೆಸಿದ್ದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಪ್ರಸನ್ನ ಕುಮಾರ್ ಅವರನ್ನು ಜೆಡಿಎಸ್ ಗೆ ಆತ್ಮೀಯವಾಗಿ ಸೇರ್ಪಡೆಗೊಳಿಸಿಕೊಂಡಿದ್ದಾರೆ.

.

ಈ ಸಮಯದಲ್ಲಿ ಇತ್ತೀಚೆಗೆ ಬಿಜೆಪಿಗೆ ಗುಡ್ ಬೈ ಹೇಳಿ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡಿ ಜೆಡಿಎಸ್ ಸೇರ್ಪಡೆಗೊಂಡು ಬಿ ಫಾರಂ ತೆಗೆದುಕೊಂಡು ನಾಮಪತ್ರ ಸಲ್ಲಿಸಿರುವ ಬಿಜೆಪಿಯ ರೆಬೆಲ್ ನಾಯಕ ಆಯನೂರು ಮಂಜುನಾಥ್, ಜೆಡಿಎಸ್ ಶಿವಮೊಗ್ಗ ಜಿಲ್ಲಾಧ್ಯಕ್ಷ ಶ್ರೀಕಾಂತ್ ಜೊತೆಗಿದ್ದರು..

ಜೆಡಿಎಸ್ ಗೆ ಮಾಜಿ ಕಾಂಗ್ರೆಸ್ ಶಾಸಕ ಕೆ ,ಬಿ ಪ್ರಸನ್ನ ಕುಮಾರ್ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆಯನೂರು ಮಂಜುನಾಥ್. ಜೆಡಿಎಸ್ ಶಿವಮೊಗ್ಗ ಜಿಲ್ಲಾಧ್ಯಕ್ಷ ಶ್ರೀಕಾಂತ್ ರವರ ಸಮ್ಮುಖದಲ್ಲಿ ಸೇರ್ಪಡೆಗೊಂಡಿದ್ದಾರೆ.

ಪಕ್ಷಕ್ಕೆ ಸೇರ್ಪಡೆಯ ಸಂದರ್ಭದಲ್ಲಿ ಮಾತನಾಡಿದ ಎಚ್ ಡಿ ಕುಮಾರಸ್ವಾಮಿ ಅವರು ಮಾಜಿ ಕಾಂಗ್ರೆಸ್ ಶಾಸಕ ಪ್ರಸನ್ನ ಕುಮಾರ್ ಅವರು ಕಾಂಗ್ರೆಸ್ ಪಕ್ಷಕ್ಕೆ ತನ್ನದೇ ಆದ ಕೊಡುಗೆ ನೀಡಿದ್ದಾರೆ. ಅವರ ಸಂಘಟನೆ ದೊಡ್ಡದಿದೆ ಅವರು ಕೂಡ ಕಾಂಗ್ರೆಸ್ನ ಟಿಕೆಟ್ ಪ್ರಬಲ ಆಕಾಂಕ್ಷಿಯಾಗಿದ್ದರು. ಆದರೆ ಕಾಂಗ್ರೆಸ್ ಪಕ್ಷ ಅವರಿಗೆ ಟಿಕೆಟ್ ನೀಡಲಿಲ್ಲ ಆದರೆ ಅದೆಲ್ಲವನ್ನು ಮರೆತು ಉತ್ತಮ ಸರ್ಕಾರ ತರಬೇಕು ಎನ್ನುವ ಆಕಾಂಕ್ಷೆಯನ್ನು ಹೊಂದಿ ಇಡೀ ರಾಜ್ಯದ್ಯಂತ ಸಂಚಲನ ಉಂಟು ಮಾಡುತ್ತಿರುವ ಪ್ರಾದೇಶಿಕ ಪಕ್ಷ ಜೆಡಿಎಸ್ ಗೆ ಬರುತ್ತಿರುವುದು ಸಂತೋಷದ ಸಂಗತಿ ಎಂದು ಹೇಳಿದರು..

ಇದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪಕ್ಷಕ್ಕೆ ತುಂಬಾ ಅಪಾಯಕಾರಿ ಬೆಳವಣಿಗೆಯಾಗಿದ್ದು ಪಕ್ಷಕ್ಕೆ ಡ್ಯಾಮೇಜ್ ಆಗುವುದರಲ್ಲಿ ಯಾವುದೇ ಸಂಶಯವಿಲ್ಲ..

ಹಾಗೆ ಈ ಬೆಳವಣಿಗೆ ಮುಂದಿನ ದಿನಗಳಲ್ಲಿ ಹಾಗೂ ಈ ಚುನಾವಣೆಗೆ ಜೆಡಿಎಸ್ ಪಕ್ಷಕ್ಕೆ ವರದಾನವಾದರೂ ಅಚ್ಚರಿಪಡಬೇಕಾಗಿಲ್ಲ…

ಮಾಜಿ ಪ್ರಧಾನಿ ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ರಾಜಕೀಯ ಲೆಕ್ಕಾಚಾರದ ಪ್ರಕಾರ ಶಿವಮೊಗ್ಗ ರಾಜಕೀಯದಲ್ಲಿ ಬ್ರಾಹ್ಮಣ, ಲಿಂಗಾಯತ ಕುರುಬ ಸಮುದಾಯದ ಮೂರು ಜನ ನಾಯಕರ ಒಂದುಗೂಡುವಿಕೆಯಿಂದ ಪಕ್ಷ ಇನ್ನಷ್ಟು ಬಲಿಷ್ಠ ವಾಗುವುದರಲ್ಲಿ ಸಂಶಯವಿಲ್ಲ ಎನ್ನುವ ರಾಜಕೀಯ ಲೆಕ್ಕಾಚಾರ ಜೆಡಿಎಸ್ ನ ನಾಯಕರದ್ದು ಏಕೆಂದರೆ ಪ್ರತಿಯೊಬ್ಬ ನಾಯಕರು ಅವರದೇ ಆದ ವರ್ಚಸ್ಸು ಹಾಗೂ ಮತಗಳನ್ನು ಹೊಂದಿದ್ದಾರೆ..

ಇವೆಲ್ಲವೂ ಕ್ರೂಡಿಕರಣವಾದರೆ ಜೆಡಿಎಸ್ ಪಕ್ಷಕ್ಕೆ ವರದಾನವಾಗುವುದರಲ್ಲಿ ಸಂಶಯವಿಲ್ಲ…

ರಘುರಾಜ್ ಹೆಚ್.ಕೆ..9449553305…

Related Articles

Latest news
Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?!