


ಗೃಹ ಸಚಿವರಾದ ಆರಗ ಜ್ಞಾನೇಂದ್ರ ಅವರು ಇಡೀ ರಾಜ್ಯದ ಜವಾಬ್ದಾರಿಯ ಜೊತೆಗೆ ತನ್ನ ಕ್ಷೇತ್ರವಾದ ತೀರ್ಥಹಳ್ಳಿಯ ಸಮಸ್ಯೆಗಳ ಬಗ್ಗೆ ವಿಶೇಷ ಕಾಳಜಿ ವಹಿಸಿ ಜನರ ಸಮಸ್ಯೆಗಳನ್ನು ಕೇಳುವುದರ ಜೊತೆಗೆ ಕೆಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ದೊರಕಿಸಿಕೊಟ್ಟರು.
ಹಾಗೆ ಇಂದು ಹಲವು ಅಧಿಕಾರಿಗಳ ಸಭೆಯನ್ನು ಕರೆದು ಕ್ಷೇತ್ರದ ಸಮಸ್ಯೆಗಳ ಬಗ್ಗೆ ಗಮನಹರಿಸಿದರು.
ನಂತರ ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ಕುಂದುಕೊರತೆಗಳನ್ನು ಪರಿಶೀಲನೆ ಮಾಡಿದರು.
ಪೊಲೀಸ್ ವ್ಯವಸ್ಥೆಯಲ್ಲಿ ತಳಮಟ್ಟದಿಂದಲೇ ಹಲವು ಬದಲಾವಣೆಗಳನ್ನು ತರಬೇಕು, ರಾಜ್ಯದ ಎಲ್ಲಾ ಪೊಲೀಸ್ ವಸತಿಗೃಹಗಳನ್ನು ಮೇಲ್ದರ್ಜೆಗೆ ಏರಿಸಬೇಕು, ಉತ್ತಮ ಅಧಿಕಾರಿಗಳನ್ನು ಮುಂದಿನ ದಿನಗಳಲ್ಲಿ ಉತ್ತಮ ಸ್ಥಾನಗಳಲ್ಲಿ ನಿಯೋಜನೆ ಆಗುವಂತೆ ನೋಡಿಕೊಳ್ಳುವುದರ ಜೊತೆಗೆ ತಮ್ಮ ಅಧಿಕಾರ ಅವಧಿಯಲ್ಲಿ ಉತ್ತಮವಾಗಿ ಕಾರ್ಯ ವಹಿಸಬೇಕು ಎನ್ನುವ ಮಹಾತ್ವಕಾಂಕ್ಷೆ ಹೊಂದಿದ್ದಾರೆ.
ಪತ್ರಿಕೆ ಜೊತೆ ಮಾತನಾಡುತ್ತಾ ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಂಡಿದ್ದಾರೆ…
ವರದಿ… ರಘುರಾಜ್ ಹೆಚ್. ಕೆ …
ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ…9449553305/7892830899…