Home ರಾಜ್ಯಸಹ್ಯಾದ್ರಿ ಕಾಲೇಜಿನಲ್ಲಿ ಮತ ಎಣಿಕೆ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ಸುಗಮ ಸಂಚಾರದ ಹಿತ ದೃಷ್ಠಿಯಿಂದ ಮಾರ್ಗ ಬದಲಾವಣೆ..!!

ಸಹ್ಯಾದ್ರಿ ಕಾಲೇಜಿನಲ್ಲಿ ಮತ ಎಣಿಕೆ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ಸುಗಮ ಸಂಚಾರದ ಹಿತ ದೃಷ್ಠಿಯಿಂದ ಮಾರ್ಗ ಬದಲಾವಣೆ..!!

by EDITOR NEWS WARRIORS
0 comments
          ಕರ್ನಾಟಕ ವಿಧಾನ ಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ದಿನಾಂಕ: 13-05-2023 ರಂದು ಶಿವಮೊಗ್ಗ ನಗರದ ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯವು ನಡೆಯಲಿರುವುದರಿಂದ, ಸಾರ್ವಜನಿಕರಿಗೆ ಸುಗಮ ಸಂಚಾರದ ಹಿತ ದೃಷ್ಠಿಯಿಂದ ದಿನಾಂಕ: 13-05-2023 ರಂದು ವಾಹನಗಳ ಸಂಚಾರಕ್ಕೆ ಈ ಕೆಳಕಂಡಂತೆ ಮಾರ್ಗ ಬದಲಾವಣೆ ಮಾಡಲಾಗಿರುತ್ತದೆ.   
  1. ಸಹ್ಯಾದ್ರಿ ಕಾಲೇಜಿನ ಸುತ್ತಮುತ್ತ 100 ಮೀಟರ್ ಅಂತರದಲ್ಲಿ ಎಲ್ಲಾ ವಾಹನಗಳ ಸಂಚಾರ ಮತ್ತು ನಿಲುಗಡೆಯನ್ನು ನಿಷೇದಿಸಲಾಗಿದೆ.
  2. ಎಂ.ಆರ್.ಎಸ್ ಸರ್ಕಲ್ ನಿಂದ ಬಿ.ಹೆಚ್ ರಸ್ತೆ, ವಿದ್ಯಾನಗರ, ಮತ್ತೂರು ಕ್ರಾಸ್ ನ ವರೆಗೆ ಸಾರ್ವಜನಿಕರ ವಾಹನಗಳು ಓಡಾಡದಂತೆ ನಿಷೇದಿಸಿದೆ.
  3. ಬೆಂಗಳೂರು, ಭದ್ರಾವತಿ, ಎನ್.ಆರ್ ಪುರ ಕಡೆಯಿಂದ ಬರುವ ಎಲ್ಲಾ ಭಾರಿ ವಾಹನ ಮತ್ತು ಎಲ್ಲಾ ಬಸ್ಸುಗಳು ಹಾಗೂ ಕಾರು ದ್ವಿಚಕ್ರ, ತ್ರಿಚಕ್ರ ವಾಹನಗಳು ಬೈಪಾಸ್ ರಸ್ತೆ ಮುಖಾಂತರ ಹೋಗುವುದು.
  4. ಚಿತ್ರದುರ್ಗ, ಹೊಳೆಹೊನ್ನೂರಿನಿಂದ ಬರುವ ಮತ್ತು ಹೋಗುವ ಎಲ್ಲಾ ಭಾರಿ ವಾಹನ ಮತ್ತು ಬಸ್ಸುಗಳು ಬಿ.ಹೆಚ್ ರಸ್ತೆ ಮಾರ್ಗವಾಗಿ ಬಸ್ಟಾಂಡ್ ಗೆ ಹೋಗುವುದು.
  5. ಹೊನ್ನಾಳಿ ದಾವಣಗೆರೆಯಿಂದ ಬರುವ ಎಲ್ಲಾ ಭಾರಿ ವಾಹನಗಳು, ಎಲ್ಲಾ ಬಸ್ ಗಳನ್ನು ವಿನೋಬನಗರ 100 ಅಡಿ ರಸ್ತೆ ಮಾರ್ಗವಾಗಿ ಹೋಗುವುದು.
  6. ಕೆ.ಎಸ್.ಆರ್.ಟಿ.ಸಿ ಮತ್ತು ಖಾಸಗಿ ಬಸ್ ನಿಲ್ದಾಣದಿಂದ ಹೊನ್ನಾಳಿ ಹರಿಹರ, ದಾವಣಗೆರೆಗೆ ಹೋಗುವ ಎಲ್ಲಾ ಬಸ್ ಗಳು ಎ.ಎ ಸರ್ಕಲ್, ಗೋಪಿ ಸರ್ಕಲ್, ಮಹಾವೀರ ಸರ್ಕಲ್, ಕೆಇಬಿ ಸರ್ಕಲ್ ಮುಖಾಂತರವಾಗಿ ಹೋಗುವುದು.
  7. ಕೆಎಸ್.ಆರ್.ಟಿ.ಸಿ ಮತ್ತು ಖಾಸಗಿ ಬಸ್ ನಿಲ್ದಾಣ ದಿಂದ ಬೆಂಗಳೂರು ಭದ್ರಾವತಿ ಎನ್.ಆರ್ ಪುರ ಕಡೆಗೆ ಹೋಗುವ ಎಲ್ಲಾ ವಾಹನಗಳು ಬೈಪಾಸ್ ರಸ್ತೆ ಮುಖಾಂತರ ಎಂ.ಆರ್.ಎಸ್ ಸರ್ಕಲ್ ಕಡೆಗೆ ಹೋಗುವುದು.
  8. ಏಜೆಂಟರು ಮತ್ತು ಎಲ್ಲಾ ಇಲಾಖೆಯ ಅಧಿಕಾರಿಗಳ ವಾಹನಗಳನ್ನು ಸಹ್ಯಾದ್ರಿ ಸೈನ್ಸ್ ಕಾಲೇಜು ಎದುರು, ವಜ್ರ ಮಹೋತ್ಸವ ಕಟ್ಟಡದ ಎದುರು ಮತ್ತು ಬಿ.ಹೆಚ್. ರಸ್ತೆಗೆ ಹೊಂದಿಕೊಂಡಂತಿರುವ ಮ್ಯಾಚ್ ಫ್ಯಾಕ್ಟರಿಗೆ ಸೇರಿದ ಮೈದಾನದಲ್ಲಿ ಪಾರ್ಕಿಂಗ್ ಮಾಡುವುದು.
  9. ಸಾರ್ವಜನಿಕರ ಕಾರುಗಳು ಮತ್ತು ದ್ವಿ ಚಕ್ರ ವಾಹನಗಳನ್ನು ಮಾತ್ರ ಎಂ.ಆರ್.ಎಸ್ ನಿಂದ ಎನ್.ಆರ್ ಪುರ ರಸ್ತೆಯ ಎಡಭಾಗದಲ್ಲಿ ಪಾರ್ಕಿಂಗ್ ಮಾಡುವುದು.
  10. ಸಾರ್ವಜನಿಕರ ಎಲ್ಲಾ ತರದ ವಾಹನಗಳನ್ನು ಎಂ.ಆರ್.ಎಸ್. ಸರ್ಕಲ್ ನ ಹತ್ತಿರವಿರುವ ಕೆ.ಇ.ಬಿ ಸಮುದಾಯ ಭವನದ ಹಿಂಭಾಗ ಮತ್ತು ಬೈಪಾಸ್ ರಸ್ತೆಗೆ ಹೊಂದಿಕೊಂಡಂತಿರುವ ಸಹ್ಯಾದ್ರಿ ಕಾಲೇಜಿನ ಸ್ಟೇಡಿಯಂ ಹತ್ತಿರ ಪಾರ್ಕಿಂಗ್ ಮಾಡುವುದು.

ಮತ ಎಣಿಕಾ ಕೇಂದ್ರದ ಒಳಗಡೆ ಮೊಬೈಲ್ ಫೋನ್‌, ಡಿಜಿಟಲ್‌ ವಾಚ್‌ ಮತ್ತು ಇತರೆ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಮತ ಎಣಿಕಾ ಕೇಂದ್ರಕ್ಕೆ ಬರುವ ಚುನಾವಣಾ ಏಜೆಂಟರ್ ಗಳು ಮತ್ತು ಇತರೆ ವ್ಯಕ್ತಿಗಳು ಮೊಬೈಲ್ ಫೋನ್, ಡಿಜಿಟಲ್‌ ವಾಚ್‌ ಮತ್ತು ಇತರೆ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ಯಾವುದೇ ಕಾರಣಕ್ಕೂ ತರುವಂತಿರುವುದಿಲ್ಲ.…. ಎಂದು ಶಿವಮೊಗ್ಗ ಪೊಲೀಸ್ ಇಲಾಖೆ ಪತ್ರಿಕಾ ಪ್ರಕಟಣೆ ಹೊರಡಿಸಿದೆ…

ರಘುರಾಜ್ ಹೆಚ್.ಕೆ..9449553305…

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...