
ಬೆಂಗಳೂರು: ನಗರದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಉನ್ನತ ಮಟ್ಟದ ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿದರು. ಕಾನೂನು ಸುವ್ಯವಸ್ಥೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ನೈತಿಕ ಪೊಲೀಸ್ ಗಿರಿ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು, ಇಲ್ಲವಾದಲ್ಲಿ ಆಯಾ ವಿಭಾಗದ ಡಿಸಿಪಿ ಹಾಗೂ ಎಸ್ ಪಿ ಅವರನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ.
ಹಿಂದೆ ನಾಲ್ಕು ವರ್ಷ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ನೀವು ಏನು ಮಾಡಿದ್ದೀರಿ ಎಂಬುದು ಗೊತ್ತು, ಆ ತಪ್ಪು ಮತ್ತೆ ಆಗಬಾರದು. ರೌಡಿಸಂ ಚಟುವಟಿಕೆಗಳಿಗೆ ಸಂಪೂರ್ಣ ಕಡಿವಾಣ ಹಾಕಬೇಕು. ಯಾರಿಗೂ ತಾರತಮ್ಯ ಮಾಡದೇ ಕಾನೂನು ಪ್ರಕಾರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಿ, ನೈತಿಕ ಪೊಲೀಸ್ ಗಿರಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ಸಿಎಂ ಸಿದ್ದರಾಮಯ್ಯ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ಈ ಸಭೆಯಲ್ಲಿ ಸಚಿವರಾದ ಕೆ ಜೆ ಜಾರ್ಜ್, ಕೆ ಎಚ್ ಮುನಿಯಪ್ಪ, ಎಂ ಬಿ ಪಾಟೀಲ್, ಸತೀಶ್ ಜಾರಕಿಹೊಳಿ, ಜಮೀರ್ ಅಹ್ಮದ್, ಡಿಜಿಪಿ ಅಲೋಕ್ ಮೋಹನ್ ಉಪಸ್ಥಿತರಿದ್ದರು…
ರಘುರಾಜ್ ಹೆಚ್.ಕೆ…9449553305….