
ಶಿವಮೊಗ್ಗ :- ಶಿವಮೊಗ್ಗದ ಡಿ.ಸಿ.ಎಫ್ ಅರಣ್ಯ ಅಧಿಕಾರಿಯಾಗಿ ನಿವೃತ್ತರಾಗಿರುವ ಐ ಎಂ ನಾಗರಾಜ್ ಮಗಳು ಐಎನ್ ಮೇಘನಾ ಐ. ಎ. ಎಸ್ ಪರೀಕ್ಷೆ ತೇರ್ಗಡೆಯಾಗಿದ್ದಾರೆ.
ಕೇಂದ್ರ ಲೋಕಸೇವಾ ಆಯೋಗ ಮಂಗಳವಾರ ಫಲಿತಾಂಶ ಪ್ರಕಟವಾಗಿದ್ದು. ಮೇಘನಾ ಅಖಿಲ ಭಾರತ ಮಟ್ಟದಲ್ಲಿ 617ನೇ ರ್ಯಾಂಕ್ ಪಡೆದಿದ್ದಾರೆ. ಕಳೆದ ಬಾರಿ ಯುಪಿಎಸ್‌ಸಿ ಪರೀಕ್ಷೆ ಎದುರಿಸಿದ್ದರೂ ಸಂದರ್ಶನದಲ್ಲಿ ತೇರ್ಗಡೆ ಆಗಿರಲಿಲ್ಲ. ಈಗ ಎರಡನೇ ಪ್ರಯತ್ನದಲ್ಲಿ ತೇರ್ಗಡೆ ಆಗಿದ್ದಾರೆ.
ಮೇಘನಾ ಬೆಂಗಳೂರಿನ ವಿಜಯನಗರದ ಇನ್‌ಸೈಟ್ಸ್ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರದಲ್ಲಿ ತರಬೇತಿ ಪಡೆದಿದ್ದಾರೆ. ಪ್ರಾಥಮಿಕ ಶಿಕ್ಷಣವನ್ನು ಮೈಸೂರು ಜಿಲ್ಲೆ ಬಂಡೀಪುರ ಹಾಗೂ ದಾವಣಗೆರೆಯ ಸರ್ಕಾರಿ ಶಾಲೆಯಲ್ಲಿ ಮುಗಿಸಿದ್ದು, ಶಿವಮೊಗ್ಗದ ಸಾಂದೀಪನಿ ಶಾಲೆಯಲ್ಲಿ ಹೈಸ್ಕೂಲ್ ಹಾಗೂ ಪಿಯುಸಿ ವಿದ್ಯಾಭ್ಯಾಸವನ್ನ ಶಿವಮೊಗ್ಗದ ಪೇಸ್ ಕಾಲೇಜಿನಲ್ಲಿ ಮುಗಿಸಿದ್ದಾರೆ.
ಮೇಘನಾ ಬೆಂಗಳೂರಿನ ಬಿಎಂಎಸ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕೆಮಿಕಲ್ ಎಂಜಿನಿಯರಿಂಗ್ ಪದವಿ ಮುಗಿಸಿದ್ದಾರೆ. ಇಂಜಿನಿಯರಿಂಗ್ ಮುಗಿಸುತ್ತಿದ್ದಂತೆಯೇ ಮೇಘನಾ ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ನಡೆಸಿದ್ದಳು. ಈ ಬಾರಿ 1200 ಹುದ್ದೆಗಳು ಇದ್ದು, ಅವರ ರ್ಯಾಕಿಂಗ್ ಐಪಿಎಸ್ ಹುದ್ದೆ ಸಿಗುವ ನಿರೀಕ್ಷೆಯಲ್ಲಿ ಮೇಘನಾರ ಕುಟುಂಬವಿದೆ.
ಮೇಘನಾ ಮುಂದಿನ ಭವಿಷ್ಯ ಉಜ್ವಲವಾಗಿರಲೆಂದು ನ್ಯೂಸ್ ವಾರಿಯರ್ಸ್ ಪತ್ರಿಕೆ ಆಶಿಸುತ್ತದೆ….
ಓಂಕಾರ ಎಸ್. ವಿ. ತಾಳಗುಪ್ಪ…..