Friday, May 9, 2025
Google search engine
Homeರಾಜ್ಯPrecautionary measures to avoid the danger of upcoming rains: ಮುಂಬರುವ ಮಳೆ ಮುಂಜಾಗ್ರತೆ...

Precautionary measures to avoid the danger of upcoming rains: ಮುಂಬರುವ ಮಳೆ ಮುಂಜಾಗ್ರತೆ ಕ್ರಮವಾಗಿ ಜಿಲ್ಲಾಧಿಕಾರಿ ಡಾ.ಆರ್ ಸೆಲ್ವಮಣಿ ಅವರಿಂದ ವಿವಿಧ ಸ್ಥಳಗಳಿಗೆ ಭೇಟಿ ಹಾನಿ ತಪ್ಪಿಸಲು ಸಲಹೆ ಸೂಚನೆ..!!


ಶಿವಮೊಗ್ಗ: ಜಿಲ್ಲಾಧಿಕಾರಿಗಳಾದ ಡಾ.ಸೆಲ್ವಮಣಿ ಆರ್ ಅವರು ಇಂದು ಸಹ ನಗರ ಹಾಗೂ ಹೊರವಲಯದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಮಳೆಯಿಂದ ಸಮಸ್ಯೆ ಎದುರಿಸಬಹುದಾದ ಸ್ಥಳಗಳಿಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಸೂಕ್ತ ಮುಂಜಾಗ್ರತಾ ಕ್ರಮ ಅನುಸರಿಸುವಂತೆ ಸಲಹೆ-ಸೂಚನೆ ನೀಡಿದರು.


ಪಾಲಿಕೆ ವ್ಯಾಪ್ತಿಯ ಎಲ್‍ಬಿಎಸ್ ನಗರದ ಚಾನಲ್‍ಗೆ ಭೇಟಿ ನೀಡಿ, ಚಾನಲ್‍ನಲ್ಲಿರುವ ಗಿಡಗಂಟಿ, ಕಸ ತೆಗೆಸಬೇಕು. ಇಲ್ಲವಾದಲ್ಲಿ ಮಳೆ ನೀರು ಸರಾಗವಾಗಿ ಹರಿಯದೇ ನೀರು ಹೊರಗೆ ನುಗ್ಗುವ ಸಂಭವವಿದ್ದು, ನೀರು ಸರಾಗವಾಗಿ ಹರಿಯಲು ಅನುವಾಗುವಂತೆ ಕ್ರಮ ವಹಿಸಲು ಅಧಿಕಾರಿಗಳಿಗೆ ತಿಳಿಸಿದರು.
ಶರಾವತಿ ನಗರ ಚಾನಲ್ ಬಳಿ ಭೇಟಿ ನೀಡಿ, ಚರಂಡಿ ಕೊಳಚೆ ನೀರನ್ನು ಚಾನಲ್‍ಗೆ ಬಿಡದಂತೆ ಕ್ರಮ ವಹಿಸಬೇಕೆಂದು ತಿಳಿಸಿದ ಅವರು ನಗರದ ಹೊರ ವಲಯದ ಗೋಪಿಶೆಟ್ಟಿಕೊಪ್ಪದ ಚಾನೆಲ್ ತಿರುವಿನಲ್ಲಿ ನೀರು ರಭಸವಾಗಿ ಹರಿಯುವುದರಿಂದ ಕಳೆದ ಬಾರಿ ಚಾನಲ್ ಏರಿ ಒಡೆದಿತ್ತು. ಈ ಬಾರಿ ಹಾಗಾಗದಂತೆ ರಾಮೇನಕೊಪ್ಪ ಬಳಿಯ ಕಾನೆಹಳ್ಳಕ್ಕೆ ನೀರು ಹರಿಸುವ ಮೂಲಕ ಆ ರಭಸವನ್ನು ಕಡಿಮೆ ಮಾಡಬಹುದೆಂದು ಸಲಹೆ ನೀಡಿದರು.


ದಿ.25 ರಂದು ನಗರದ ಹರಿಗೆ ಚಾನಲ್, ಗುರುಪುರ ಮತ್ತು ವಿದ್ಯಾನಗರದ ರಾಜಾ ಕಾ ಲುವೆ ಗಳ ಬಳಿ ಭೇಟಿ ನೀಡಿ ಪರಿಶೀಲನೆ ನಡೆಸಿ ಕೈಗೊಳ್ಳಬೇಕಾದ ಸೂಕ್ತ ಕ್ರಮಗಳ ಕುರಿತು ಸೂಚನೆಗಳನ್ನು ನೀಡಿದ್ದರು. ವಿವಿಧ ನಾಲೆಗಳು, ರಾಜ ಕಾಲುವೆ, ಚಾನಲ್, ಚರಂಡಿಗಳನ್ನು ಪರಿಶೀಲಿಸಿ, ಮಳೆ ಆರಂಭವಾಗುವ ಮುನ್ನ ಕಸ, ಮಣ್ಣು, ಹೂಳು ತೆಗೆಸುವಂತೆ ಹಾಗೂ ಇತರೆ ಪರ್ಯಾಯ ವ್ಯವಸ್ಥೆ ಮಾಡಿ ತೊಂದರೆಯಾಗದಂತೆ ಸೂಕ್ತ ರೀತಿಯಲ್ಲಿ ಕ್ರಮ ವಹಿಸುವಂತೆ ಸಣ್ಣ ನೀರಾವರಿ ಇಲಾಖೆ, ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಘುರಾಜ್ ಹೆಚ್.ಕೆ…9449553305….

RELATED ARTICLES
- Advertisment -
Google search engine

Most Popular

Latest news
ತುಂಗಾನಗರ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಅಪರಿಚಿತ ಶವ ಪತ್ತೆ..! Big news :ಮಾಜಿ ಡಿಸಿಎಂ ಈಶ್ವರಪ್ಪ ನವರಿಂದ ನಿರೀಕ್ಷಣಾ ಜಾಮೀನಿಗೆ ಅರ್ಜಿ..! ಕಾರಣವೇನು..?! ಕೆಲಕಾಲ ಕಾರ್ಯದ ಒತ್ತಡದಿಂದ ಮುಕ್ತರಾಗಿ ಸಂತಸದ ದಿನ ಕಳೆಯಲು ಸೂಕ್ತ ವಾತಾವರಣ ನಿರ್ಮಿಸುತ್ತಿರುವುದು ಉತ್ತಮ ಬೆಳವಣಿಗೆ ಜ... Shivamogga breaking:ಪೊಲೀಸರಿಂದ ಆರೋಪಿ ಕಾಲಿಗೆ ಗುಂಡೇಟು..! Shivamogga breaking:ಪಾಲಿಕೆಯ ನಿಷ್ಕ್ರಿಯ ಆಯುಕ್ತೆ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ ಸಾಧ್ಯತೆ..?! 8 ಜನ ಅಧಿಕಾರಿ... ಬೀದಿ ನಾಯಿಗಳ ಸಂತಾನ ಹರಣಕ್ಕೆ ದಿನಾಂಕ ಫಿಕ್ಸ್..! ಇಬ್ಬರು ಮಹಿಳೆಯರು ನಾಪತ್ತೆ..! ಮಿನಿಸ್ಟರ್ ಮಧು ಬಂಗಾರಪ್ಪನವರ ಮಗ ಸೂರ್ಯನ ಸಾಧನೆ..! ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ....