Tuesday, 17 November 2026 — News Warriors

News Warriors

Kannada News Portal Shimoga : Local News

BREAKING NEWS
ಅಂತಾರಾಷ್ಟ್ರೀಯ Fjvhvjvnbbb ಶಿವಮೊಗ್ಗ Shivamogga :10 ಸಾವಿರ ಸಾಲ ₹35 ಸಾವಿರವಾಗಿದ್ದು ಹೇಗೆ? ಮೂಲ ಬಾರ್‌ನಲ್ಲಿ ನಡೆದಿದ್ದೇನು? ಸಾವಿನ ಸುತ್ತ ಅನುಮಾನದ ಹುತ್ತ..! ರಾಜ್ಯ Shivamogga :ನಾಲ್ಕು ಸದನಗಳ ಅನುಭವ ಹೊಂದಿರುವ ಆಯನೂರು ಮಂಜುನಾಥ್‌ಗೆ ಕಾಂಗ್ರೆಸ್‌ನಲ್ಲಿ ಸೂಕ್ತ ಸ್ಥಾನಮಾನ ಸಿಕ್ಕಿದೆಯೇ..?! ಶಿವಮೊಗ್ಗ Shivamogga : ಸಾಗರ ಉಪವಿಭಾಗದ ಆಡಳಿತಕ್ಕೆ ಅನುಭವಿ ಅಧಿಕಾರಿ ಜಿ.ಹೆಚ್. ಸತ್ಯನಾರಾಯಣ್ ನೇಮಕ..! ಶಿವಮೊಗ್ಗ ನೆಹರು ಕ್ರೀಡಾಂಗಣದ ಅಂದಗೆಡಿಸುತ್ತಿದ್ದ ಫ್ಲೆಕ್ಸ್‌ಗಳಿಗೆ ಬ್ರೇಕ್..! ಜಿಲ್ಲಾಧಿಕಾರಿಗಳ ಖಡಕ್ ಆದೇಶಕ್ಕೆ ಸಾರ್ವಜನಿಕರ ಮೆಚ್ಚುಗೆ..! ಶಿವಮೊಗ್ಗ Big news: ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾಧಿಕಾರಿಗಳ ಹೆಸರಿನಲ್ಲಿ ಲಕ್ಷ ಲಕ್ಷ ಎತ್ತುವಳಿ..! ವರ್ಗಾವಣೆಗೂ ಮುನ್ನ ಡಿಸಿ ಕವಳಿಕಟ್ಟಿ ನೀಡಿದ ಆದೇಶವೇನು..?! ವರ್ಗಾವಣೆಗೂ ಈ ಪ್ರಕರಣಕ್ಕೂ ಸಂಬಂಧವಿದೆಯೇ..?!Big news: Lakhs of rupees extorted in the names of the Deputy Commissioner and the Additional Deputy Commissioner! What order did DC Kavalikatti issue just before his transfer?! Is there a connection between his transfer and this incident..?! ಶಿವಮೊಗ್ಗ Shivamogga breaking :ದಸರಾ ಮೆರವಣಿಗೆಯಲ್ಲಿ ಸೋಮಣ್ಣ ಆನೆ ರಂಪಾಟ: ಅನಾಹುತ ನಿವಾರಣೆಗೆ ದೇವರ ಮೊರೆ ಹೋದ ಅರ್ಚಕರು..! ರಾಜ್ಯ Big news :2011ರ ಕೆಎಎಸ್ ನೇಮಕಾತಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್! 2022ರ ನೇಮಕಾತಿ ಸಿಂಧುಗೊಳಿಸುವ ಕಾಯ್ದೆ ಅಸಂವಿಧಾನಿಕ; ನೇಮಕಗೊಂಡ ಅಧಿಕಾರಿಗಳ ಸೇವೆ ಅಂತ್ಯಕ್ಕೆ ಆದೇಶ! ಅಂತಾರಾಷ್ಟ್ರೀಯ Fjvhvjvnbbb ಶಿವಮೊಗ್ಗ Shivamogga :10 ಸಾವಿರ ಸಾಲ ₹35 ಸಾವಿರವಾಗಿದ್ದು ಹೇಗೆ? ಮೂಲ ಬಾರ್‌ನಲ್ಲಿ ನಡೆದಿದ್ದೇನು? ಸಾವಿನ ಸುತ್ತ ಅನುಮಾನದ ಹುತ್ತ..! ರಾಜ್ಯ Shivamogga :ನಾಲ್ಕು ಸದನಗಳ ಅನುಭವ ಹೊಂದಿರುವ ಆಯನೂರು ಮಂಜುನಾಥ್‌ಗೆ ಕಾಂಗ್ರೆಸ್‌ನಲ್ಲಿ ಸೂಕ್ತ ಸ್ಥಾನಮಾನ ಸಿಕ್ಕಿದೆಯೇ..?! ಶಿವಮೊಗ್ಗ Shivamogga : ಸಾಗರ ಉಪವಿಭಾಗದ ಆಡಳಿತಕ್ಕೆ ಅನುಭವಿ ಅಧಿಕಾರಿ ಜಿ.ಹೆಚ್. ಸತ್ಯನಾರಾಯಣ್ ನೇಮಕ..! ಶಿವಮೊಗ್ಗ ನೆಹರು ಕ್ರೀಡಾಂಗಣದ ಅಂದಗೆಡಿಸುತ್ತಿದ್ದ ಫ್ಲೆಕ್ಸ್‌ಗಳಿಗೆ ಬ್ರೇಕ್..! ಜಿಲ್ಲಾಧಿಕಾರಿಗಳ ಖಡಕ್ ಆದೇಶಕ್ಕೆ ಸಾರ್ವಜನಿಕರ ಮೆಚ್ಚುಗೆ..! ಶಿವಮೊಗ್ಗ Big news: ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾಧಿಕಾರಿಗಳ ಹೆಸರಿನಲ್ಲಿ ಲಕ್ಷ ಲಕ್ಷ ಎತ್ತುವಳಿ..! ವರ್ಗಾವಣೆಗೂ ಮುನ್ನ ಡಿಸಿ ಕವಳಿಕಟ್ಟಿ ನೀಡಿದ ಆದೇಶವೇನು..?! ವರ್ಗಾವಣೆಗೂ ಈ ಪ್ರಕರಣಕ್ಕೂ ಸಂಬಂಧವಿದೆಯೇ..?!Big news: Lakhs of rupees extorted in the names of the Deputy Commissioner and the Additional Deputy Commissioner! What order did DC Kavalikatti issue just before his transfer?! Is there a connection between his transfer and this incident..?! ಶಿವಮೊಗ್ಗ Shivamogga breaking :ದಸರಾ ಮೆರವಣಿಗೆಯಲ್ಲಿ ಸೋಮಣ್ಣ ಆನೆ ರಂಪಾಟ: ಅನಾಹುತ ನಿವಾರಣೆಗೆ ದೇವರ ಮೊರೆ ಹೋದ ಅರ್ಚಕರು..! ರಾಜ್ಯ Big news :2011ರ ಕೆಎಎಸ್ ನೇಮಕಾತಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್! 2022ರ ನೇಮಕಾತಿ ಸಿಂಧುಗೊಳಿಸುವ ಕಾಯ್ದೆ ಅಸಂವಿಧಾನಿಕ; ನೇಮಕಗೊಂಡ ಅಧಿಕಾರಿಗಳ ಸೇವೆ ಅಂತ್ಯಕ್ಕೆ ಆದೇಶ!
ರಾಜ್ಯ

SSLC Supplementary Exam Preparation :ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆಗೆ‌ ಸಕಲ ಸಿದ್ದತೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್..!!

EDITOR NEWS WARRIORS
ವರದಿ: EDITOR NEWS WARRIORS ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 9 ವೀಕ್ಷಣೆಗಳು


ಶಿವಮೊಗ್ಗ: 2023 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆಗಳು ಜಿಲ್ಲೆಯಲ್ಲಿ ಜೂನ್ 12 ರಿಂದ 19 ರವರೆಗೆ ನಡೆಯಲಿದ್ದು ಸುವ್ಯವಸ್ಥಿತ ಮತ್ತು ಶಾಂತಿಯುತವಾಗಿ ಪರೀಕ್ಷೆಗಳನ್ನು ನಡೆಸಲು ಅಗತ್ಯವಾದ ಸಕಲ ಸಿದ್ದತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ತಿಳಿಸಿದರು.


ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆಯ ಪೂರ್ವಸಿದ್ದತೆ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲು ಕರೆಯಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಸೂಚನೆಗಳನ್ನು ನೀಡಿದರು.


ಒಟ್ಟು 3523 ವಿದ್ಯಾರ್ಥಿಗಳು ಪೂರಕ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, ಜಿಲ್ಲೆಯ ಒಟ್ಟು 14 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಜೂನ್ 12 ರಂದು ಪ್ರಥಮ ಭಾಷೆ, ಜೂ.13 ರಂದು ವಿಜ್ಞಾನ, ಜೂ.14 ರಂದು ದ್ವಿತೀಯ ಭಾಷೆ, ಜೂನ್ 15 ಸಮಾಜ ವಿಜ್ಞಾನ, ಜೂನ್ 16 ರಂದು ತೃತೀಯ ಭಾಷೆ, ಜೂನ್ 17 ರಂದು ಗಣಿತ, ಜೂನ್ 19 ರಂದು ಇತರೆ ಕೋರ್ ವಿಷಯಗಳ ಪರೀಕ್ಷೆ ನಡೆಯಲಿದೆ.


ಈಗಾಗಲೇ 14 ಮುಖ್ಯ ಅಧೀಕ್ಷಕರರು, 14 ಜನ ಸ್ಥಾನಿಕ ಜಾಗೃತ ದಳ ಅಧಿಕಾರಿ, 7 ಜನ ಮಾರ್ಗಾಧಿಕಾರಿ, 7 ಮೊಬೈಲ್ ಸ್ವಾಧೀನಾಧಿಕಾರಿ, 9 ಜನ ವೀಕ್ಷಕರನ್ನು ನೇಮಿಸಲಾಗಿದೆ. ಹಾಗೂ ಕೊಠಡಿ ಮೇಲ್ವಿಚಾರಕು, ಸಿಬ್ಬಂದಿ ನಿಯೋಜನೆ ಆಗಿದ್ದು, ಪರೀಕ್ಷಾ ಕೇಂದ್ರಗಳಿಗೆ ಮೊಬೈಲ್ ಮತ್ತು ಇತರೆ ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳಿಗೆ ಅವಕಾಶವಿರುವುದಿಲ್ಲ.


ಪರೀಕ್ಷಾ ದಿನಗಳಂದು ಯಾವುದೇ ಅಹಿತರ ಘಟನೆಗಳಿಗೆ ಅವಕಾಶ ನೀಡದಂತೆ ಮುಂಜಾಗ್ರತಾ ಕ್ರಮವಾಗಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀ.ಫಾಸಲೆಯವರೆಗೆ ಸಿಆರ್‍ಪಿಸಿ ಸೆಕ್ಷನ್ 144 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಲಾಗಿದೆ.


ಪರೀಕ್ಷಾ ಕೇಂದ್ರಗಳಲ್ಲಿ ಸೂಕ್ತ ಆಸನ/ಪೀಠೋಪಕರಣ ವ್ಯವಸ್ಥೆ, ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಕರ್ಯಗಳ ಕುರಿತು ಪರಿಶೀಲನೆ ನಡೆಸಿ, ಒದಗಿಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಟಿವಿ ಕಾರ್ಯನಿರ್ವಹಣೆ ಖಾತರಿಪಡಿಸಿಕೊಳ್ಳಬೇಕು ಎಂದ ಅವರು ಸುವ್ಯವಸ್ಥಿತವಾಗಿ ಪರೀಕ್ಷೆಗಳನ್ನು ನಡೆಸಲು ಅಗತ್ಯವಾದ ಸಕಲ ಸಿದ್ದತೆ ಬಗ್ಗೆ ಸೂಚನೆ ನೀಡಿದರು.


ಡಿಡಿಪಿಐ ಸಿ.ಆರ್.ಪರಮೇಶ್ವರಪ್ಪ ಮಾತನಾಡಿ, ಪರೀಕ್ಷೆಗೆ ನಿಯೋಜಿಸಿದ ಅಧಿಕಾರಿಗಳು ಅನುಸರಿಸಬೇಕಾದ ಮಾರ್ಗಸೂಚಿಗಳ ಕುರಿತು ವಿವರಿಸಿದರು.


ಸಭೆಯಲ್ಲಿ ಜಿ.ಪಂ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ .ಕೆ.ಮಿಥುನ್‍ಕುಮಾರ್, ಡಯಟ್ ಪ್ರಾಚಾರ್ಯ ಬಸವರಾಜಪ್ಪ, ಶಿಕ್ಷಣಾಧಿಕಾರಿಗಳು, ಅಧಿಕಾರಿಗಳು ಪಾಲ್ಗೊಂಡಿದ್ದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 2012 ಲೇಖನಗಳು

EDITOR NEWS WARRIORS

EDITOR NEWS WARRIORS ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.