
ಆರೋಗ್ಯ ಇಲಾಖೆಯ ಎನ್ ಹೆಚ್ ಎಂ ನೌಕರರ ಬಹು ವರ್ಷಗಳ ಆಸೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಈಡೇರಿಸುತ್ತಾ..?! ಹಿಂದೆ ಬಿಜೆಪಿ ಸರ್ಕಾರ ಆಡಳಿತ ನಡೆಸುತ್ತಿದ್ದಾಗ ಎನ್ಎಚ್ಎಮ್ ಒಳಗುತ್ತಿಗೆ ನೌಕರರು ಖಾಯಂಗಾಗಿ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿದ್ದರು.
ಈ ಪ್ರತಿಭಟನೆಯ ಸಮಯದಲ್ಲಿ ಸ್ಥಳಕ್ಕೆ ಬಂದ ಕಾಂಗ್ರೆಸ್ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಅವರು ನಮ್ಮ ಸರ್ಕಾರ ಮುಂದೆ ಅಧಿಕಾರಕ್ಕೆ ಬಂದರೆ ನಿಮ್ಮನ್ನು ಖಾಯಂಗೊಳಿಸುವುದಾಗಿ ಭರವಸೆ ನೀಡಿದ್ದರು.
ಈಗ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸ್ಪಷ್ಟ ಬಹುಮತದಿಂದ ಗೆದ್ದು ಬಂದು ಸರ್ಕಾರ ರಚನೆ ಮಾಡಿದ್ದು ಡಿಕೆ ಶಿವಕುಮಾರ್ ಉಪಮುಖ್ಯಮಂತ್ರಿಯಾಗಿದ್ದಾರೆ. ಹಾಗೆ ದಿನೇಶ್ ಗುಂಡೂರಾವ್ ಆರೋಗ್ಯ ಸಚಿವರಾಗಿದ್ದಾರೆ.
ಹಳೆ ಪ್ರತಿಭಟನೆಗೆ ಸಿಕ್ಕಿತು ಮರುಜೀವ..!!
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು, ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಭಿಯಾನ ನಿರ್ದೇಶಕರಿಗೆ ಸಚಿವರಿಗೆ ಸಂಘದಿಂದ ಸಲ್ಲಿಸಲಾಗಿದ್ದಂತ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಸರ್ಕಾರ ನೀಡಿರುವ ಮನವಿಯನ್ನು ವರ್ಗಾವಣೆ ಮಾಡಿದ್ದಾರೆ.
ಆರೋಗ್ಯ ಇಲಾಖೆಯ ಆಯುಕ್ತರಿಗೆ ಬರೆದಂತ ಪತ್ರದಲ್ಲಿ, ಕರ್ನಾಟಕ ರಾಜ್ಯದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ ( NHM) ರಡಿಯಲ್ಲಿ ಒಳಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ನೌಕರರನ್ನು ಖಾಯಂಗೊಳಿಸುವ ಬಗ್ಗೆ ನಿಯಮಾನುಸಾರ ಪರಿಶೀಲಿಸಿ, ಕ್ರಮ ಕೈಗೊಳ್ಳುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಯಿಂದ ತಮ್ಮನ್ನು ಕೋರಲು ನಿರ್ದೇಶಿಸಲ್ಪಟ್ಟಿದ್ದೇನೆ ಎಂದು ತಿಳಿಸಿದ್ದಾರೆ.
ಇದರಿಂದ ಆರೋಗ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎನ್ ಹೆಚ್ ಎಂ ನೌಕರರಿಗೆ ಶುಭ ಸುದ್ದಿ ಒಂದು ಸಿಕ್ಕಿದ್ದು ಕಾಂಗ್ರೆಸ್ ಸರ್ಕಾರ ನೀಡಿದ ಭರವಸೆಯನ್ನು ಈಡೇರಿಸುತ್ತಾ ಕಾದು ನೋಡಬೇಕಾಗಿದೆ..