
ಮೈಸೂರು: ಮೈಸೂರು ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ಕಾಮುಕರ ವಿಚಾರಣೆ ವೇಳೆ ಮತ್ತೊಂದು ಸ್ಫೋಟಕ ಮಾಹಿತಿ ಬಹಿರಂಗವಾಗಿದೆ.
ಮೈಸೂರಿಗೆ ತರಕಾರಿ ಹೊತ್ತು ಬರುತ್ತಿದ್ದ ರೇಪಿಸ್ಟ್ ಗಳಲ್ಲಿ ಇಬ್ಬರು ಮಾತ್ರ ಗೂಡ್ಸ್ ವಾಹನದಲ್ಲಿ ಬರುತ್ತಿದ್ದರು.
ಉಳಿದವರು ಬಸ್ಸಿನಲ್ಲಿ ಬರುತ್ತಿದ್ದರು. ತರಕಾರಿ ಲೋಡ್ ಇಳಿಸಿದ ಮೇಲೆ ಖಾಲಿ ಗಾಡಿಯಲ್ಲಿ ಕುಳಿತು ಎಲ್ಲರೂ ಪಾರ್ಟಿ ಮಾಡಲು ಸವಾರಿ ಹೊರಡುತ್ತಿದ್ದರು.
ನಿರ್ಜನ ಸ್ಥಳಗಳು ಇವರ ಟಾರ್ಗೆಟ್;
ನಿರ್ಜನ ಸ್ಥಳಗಳಲ್ಲಿ ಕೂರುವ ಪ್ರೇಮಿಗಳೆ ಈ ಕೀಚಕರ ಟಾರ್ಗೆಟ್ ಆಗಿರುತ್ತಿತ್ತು. ಯುವತಿ ಮೇಲೆ ಗ್ಯಾಂಗ್ ರೇಪ್ ಮಾಡಿ ಬೆತ್ತಲೆ ವಿಡಿಯೋ ತೆಗೆದು ಬ್ಲ್ಯಾಕ್ ಮೇಲೆ ಮಾಡುತ್ತಿದ್ದರು. ಯುವಕ ಮತ್ತು ಯುವತಿ ಬಳಿ ಇರುವ ಹಣ ಮತ್ತು ಅವರು ಧರಿಸಿರುವ ಚಿನ್ನಾಭರಣ ಕಸಿದುಕೊಂಡು ಪರಾರಿಯಾಗುತ್ತಿದ್ದರು.
ನಿರ್ಜನ ಸ್ಥಳದಲ್ಲಿ ನಡೆಯುವ ಈ ಕೃತ್ಯ ಯಾರಿಗೂ ತಿಳಿಯದ ಕಾರಣ ಪ್ರೇಮಿಗಳು ಮಾನ ಮರ್ಯಾದೆಗೆ ಅಂಜಿ ಪೊಲೀಸರಿಗೆ ದೂರು ನೀಡದೆ ಹೋಗುತ್ತಿದ್ದರು. ಹೀಗೆ ನಿರ್ಜನ ಪ್ರದೇಶಗಳೆ ಇವರ ಟಾರ್ಗೆಟ್ ಆಗಿತ್ತು. ಹೀಗೆ ಊರಿಗೆ ವಾಪಸ್ ಆಗುವ ಮುನ್ನ ಮತ್ತೆ ರೋಡ್ ರಾಬರಿ ಮಾಡಿಕೊಂಡು ಹೋಗುತ್ತಿದ್ದರು. ಕೈ ಸೇರಿದ ಹಣವನ್ನು ಕಂಠ ಪೂರ್ತಿ ಕುಡಿದು ಮೋಜು ಮಸ್ತಿ ಮಾಡುತ್ತಿದ್ದರು ಎನ್ನುವ ವಿಚಾರ ವಿಚಾರಣೆ ವೇಳೆ ಬೆಳಕಿಗೆ ಬಂದಿದೆ.

ಹೊಂಚುಹಾಕಿ ಹಿಡಿದ ಪೊಲೀಸರು:
ಆರೋಪಿಗಳ ಮಾಹಿತಿ ದೊರೆತರೂ ಸ್ಥಳಕ್ಕೆ ಹೋಗುವುದು ದೊಡ್ಡ ಸವಾಲಾಗಿದ್ದರಿಂದ ತಂತ್ರಗಾರಿಕೆ ಬಳಸಿದ ಪೊಲೀಸರು ರಾತ್ರಿಯಾಗುವ ತನಕ ಕಾದು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಒಂದು ವೇಳೆ ಕರ್ನಾಟಕ ಪೊಲೀಸರು ತಿರುಪುರ್‌ಗೆ ಬಂದಿರುವ ಸುಳಿವು ಆರೋಪಿಗಳಿಗೆ ಸಿಕ್ಕಿದ್ದರೆ ಪರಾರಿಯಾಗುವ ಸಂಭವವಿತ್ತು.
ಸ್ಥಳಕ್ಕೆ ಧಾವಿಸಿದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು:
ಪ್ರಕರಣದ ವಿಚಾರ ಗೊತ್ತಾಗುತ್ತಿದ್ದಂತೆ ಮೈಸೂರಿಗೆ ಧಾವಿಸಿದ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಪ್ರತಾಪ್ ರೆಡ್ಡಿ ಅವರು ದಕ್ಷಿಣ ವಲಯದ ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಿದ್ದ ಪರಿಣಿತ ಅಧಿಕಾರಿಗಳು, ಸಿಬ್ಬಂದಿಗಳನ್ನು ಸೇರಿಸಿ 7 ತಂಡ ರಚನೆ ಮಾಡಿದ್ದರು. ಮೈಸೂರು ನಗರ ಪೊಲೀಸ್ ಆಯುಕ್ತರು ಹಾಗೂ ಐಜಿಪಿ ಪ್ರವೀಣ್ ಮಧುಕರ್ ಪವಾರ್ ಅವರು ತನಿಖೆಯ ವ್ಯೆಹ ರಚಿಸಿದ್ದರು. ಘಟನೆ ನಡೆದ ಸ್ಥಳದಲ್ಲಿ ಸಿಕ್ಕ ಸಾಕ್ಷ್ಯಾಧಾರ ಹಾಗೂ ಸಂತ್ರಸ್ತೆಯ ಸ್ನೇಹಿತ ನೀಡಿದ್ದ ಕೆಲವು ಮಾಹಿತಿ ತಾಳೆಯಾಗುತ್ತಿತ್ತು. ಆರೋಪಿಗಳು ತಮಿಳು ಭಾಷೆ ಮಾತನಾಡುತ್ತಿದ್ದರು. ಘಟನಾ ಸ್ಥಳದಲ್ಲಿ ತಾಳವಾಡಿ ಬಸ್ ಟಿಕೆಟ್ ಸಿಕ್ಕಿತ್ತು. ಮೊಬೈಲ್ ಟವರ್‌ನಲ್ಲಿ ಟ್ರೇಸ್ ಆಗಿದ್ದ ಮೊಬೈಲ್ ನಂಬರ್‌ನ ಸಿಮ್ ತಮಿಳುನಾಡಿನಲ್ಲಿ ಬಳಸಿದ್ದ ಸಿಮ್ ಒಂದೇ ಆಗಿತ್ತು. ಇದು ಆರೋಪಿಗಳು ತಮಿಳುನಾಡಿನವರು ಎಂಬುದನ್ನು ಬಲವಾಗಿ ದೃಢಪಡಿಸಿತ್ತು.
ಎರಡು ದಿನದಲ್ಲೇ ಜಾಡು ಪತ್ತೆ ಹಚ್ಚಿದ ಪೊಲೀಸರು: ಘಟನಾ ಸ್ಥಳದಲ್ಲಿ ಟ್ರೇಸ್ ಆಗಿದ್ದ ನಂಬರ್‌ಗಳ ಕಾಲ್ ಡಿಟೇಲ್ ರೆಕಾರ್ಡ್ ಪಡೆದುಕೊಂಡಿದ್ದ ಪೊಲೀಸರು ಈ ಮಾಹಿತಿ ಆಧರಿಸಿ ಆರೋಪಿಗಳ ಬೆನ್ನತ್ತಿ ತಾಳವಾಡಿಗೆ ತೆರಳಿದ್ದರು.

ಮೊಬೈಲ್ ಆನ್ ಮಾಡುವುದನ್ನೇ ಕಾಯುತ್ತಿದ್ದ ಪೊಲೀಸರು:
ಇತ್ತ ಆರೋಪಿ ಮೊಬೈಲ್ ಆನ್ ಮಾಡುವುದನ್ನೇ ಕಾಯುತ್ತಿದ್ದ ಸಿಡಿಆರ್ ವಿಭಾಗದ ಸಿಬ್ಬಂದಿ ಆರೋಪಿಯ ಮೊಬೈಲ್ ಆನ್ ಆಗುತ್ತಿದ್ದಂತೆ ಆರೋಪಿಗಳಲ್ಲಿ ಒಬ್ಬನಾದ ಭೂಪತಿ ಎಂಬಾತ ತಾಳವಾಡಿ ಫಿರ್ಕಾದ ಸುಸೈಪುರಂ ಗ್ರಾಮದಲ್ಲಿ ಇದ್ದಾನೆ ಎನ್ನುವುದು ಖಚಿತವಾಗಿತ್ತು. ತಕ್ಷಣ ಅವರು ತಾಳವಾಡಿಯಲ್ಲಿ ಬೀಡು ಬಿಟ್ಟಿದ್ದ ಪೊಲೀಸರಿಗೆ ಮಾಹಿತಿ ನೀಡದರು. ಈತನ ಬಗ್ಗೆ ಸಂಜೆ ವೇಳೆಗೆ ಸಂಪೂರ್ಣ ಮಾಹಿತಿ ಕಲೆ ಹಾಕಿದ ಪೊಲೀಸರು ತಮಿಳುನಾಡಿನ ಪೊಲೀಸರನ್ನು ತಮ್ಮ ಜತೆಯಲ್ಲೇ ಕರೆದುಕೊಂಡು ಊರ ಹೊರಗೆ ಆರೋಪಿಗೆ ಕಾದಿದ್ದರು.
ಆದರೆ ದಿಢೀರ್ ಆಗಿ ಆರೋಪಿ ಬಂಧನಕ್ಕೆ ಮುಂದಾದರೆ ಪ್ರಕರಣದ ಬಗ್ಗೆ ಅರಿಯದ ಸ್ಥಳೀಯರು ತಿರುಗಿ ಬೀಳಬಹುದು. ಈ ಸಂದರ್ಭವನ್ನೇ ಬಳಸಿಕೊಂಡು ಆರೋಪಿ ಪರಾರಿಯಾಗಬಹುದು ಎಂದರಿತು ರಾತ್ರಿ 11 ಗಂಟೆಯ ತನಕವೂ ಕಾದು ಕುಳಿತಿದ್ದ ಪೊಲೀಸರು
ಜನರೆಲ್ಲ ಮಲಗುತ್ತಿದ್ದಂತೆ ಆರೋಪಿಯ ಮನೆಯನ್ನು ಸುತ್ತುವರಿದಿದ್ದಾರೆ. ನಂತರ ಮಲಗಿದ್ದವನನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಸುಸೈಪುರಂನಲ್ಲಿ ಭೂಪತಿ ಸಿಕ್ಕಿಬೀಳುತ್ತಿದ್ದಂತೆ ಉಳಿದ ಆರೋಪಿಗಳು ತಿರುಪುರ್ ಪಕ್ಕದ ವೆಡಿಯಲೂರು ಎಂಬಲ್ಲಿ ಇದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಪೊಲೀಸರು ಈ ಮಾಹಿತನ್ನು ತಿರುಪೂರ್‌ನಲ್ಲಿದ್ದ ಮತ್ತೊಂದು ತಂಡಕ್ಕೆ ರವಾನಿಸಿದ್ದರು. ಅದರಂತೆ ವೆಡಿಯಲೂರು ಗ್ರಾಮದ ಶೆಡ್‌ನಲ್ಲಿ ಮಲಗಿದ್ದ ಮುರುಗೇಶ್, ಅರವಿಂದ್, ಜೋಸೆಫ್, ಅಪ್ರಾಪ್ತ ಬಾಲಕನನ್ನು ಬಂಧಿಸುವಲ್ಲಿ ಆ ತಂಡ ಯಶಸ್ವಿಯಾಗಿದೆ. ಒಂದು ವೇಳೆ ಭೂಪತಿ ಸಿಗದೆ ಇದ್ದರೆ ಈ ನಾಲ್ವರ ಬಂಧನ ಮತ್ತಷ್ಟು ವಿಳಂಬವಾಗುತ್ತಿತ್ತು. ಪ್ರಕರಣದಲ್ಲಿ ಇನ್ನು ಇಬ್ಬರು ಭಾಗಿಯಾಗಿದ್ದು, ಇವರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಇಡೀ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೊಲೀಸರ ಬಗ್ಗೆ,ತಮ್ಮ ಮೇಲೆ ಇರುವ ಆರೋಪಗಳಿಗೆ ಪ್ರತಿಕ್ರಿಯೆ ನೀಡಿರುವ ಗೃಹಸಚಿವರಾದ ಆರಗ ಜ್ಞಾನೇಂದ್ರ ಅವರು:

ಮೈಸೂರು ಗ್ಯಾಂಗ್ ರೇಪ್ ಕೇಸು ರಾಜ್ಯಕ್ಕೆ ಒಂದು ಕಪ್ಪು ಚುಕ್ಕೆಯಾಗಿದೆ. ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದೆ, ಪೊಲೀಸರ ಕಾರ್ಯವೈಖರಿ ಬಗ್ಗೆ ಏನು ಹೇಳುತ್ತೀರಿ?
-ಪಾರಂಪರಿಕ, ಸಾಂಸ್ಕೃತಿಕ ನಗರಿ ಮೈಸೂರಿಗೆ ದೇಶ ವಿದೇಶಗಳಿಂದ ಸಾಕಷ್ಟು ಜನರು ಬರುತ್ತಾರೆ. ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಜವಾಬ್ದಾರಿ ಗೃಹ ಇಲಾಖೆ, ಪೊಲೀಸರ ಮೇಲಿದೆ. ಅದೇ ರೀತಿ ಮೈಸೂರು ನಗರದ ಗೌರವ, ಪ್ರತಿಷ್ಠೆಯನ್ನು ಕೂಡ ಎತ್ತಿ ಹಿಡಿಯಬೇಕು. ಗ್ಯಾಂಗ್ ರೇಪ್ ಪ್ರಕರಣವನ್ನು ಅತ್ಯಂತ ಕ್ಷಿಪ್ರವಾಗಿ ಭೇದಿಸಿ ಪೊಲೀಸರು ನಿಜಕ್ಕೂ ಕಾರ್ಯಕ್ಷಮತೆ ಮೆರೆದಿದ್ದಾರೆ. ರಾಜ್ಯದ ಜನತೆಗೆ ದಿನಪೂರ್ತಿ, ವಾರಪೂರ್ತಿ, ವರ್ಷಪೂರ್ತಿ ಹಗಲು-ರಾತ್ರಿ ಸುರಕ್ಷತೆ ನೀಡುವುದು ಸರ್ಕಾರದ ಜವಾಬ್ದಾರಿಯಾಗಿದೆ.
ಪೊಲೀಸ್ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ, ಪೊಲೀಸರು ವೃತ್ತಿಹೀನರಾಗುತ್ತಿದ್ದಾರೆ, ಸಂವೇದನರಹಿತರಾಗುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ, ಈ ಬಗ್ಗೆ ಏನು ಹೇಳುತ್ತೀರಿ?
-ಈಗ ಪರಿಸ್ಥಿತಿ ಸುಧಾರಿಸುತ್ತಿದೆ. ಅತ್ಯುನ್ನತ ವಿದ್ಯಾವಂತರು, ಪಿ ಎಚ್ ಡಿ, ಸ್ನಾತಕೋತ್ತರ ಪದವಿ ಓದಿದವರು ಕೂಡ ಪೊಲೀಸ್ ಇಲಾಖೆಗೆ ಸೇರುತ್ತಿದ್ದಾರೆ. ಮಹಿಳೆಯರಿಗೆ ಕೋಟಾ ಇರುವುದರಿಂದ ಅವರು ಕೂಡ ಸೇರುತ್ತಿದ್ದಾರೆ. ಇಲಾಖೆಯ ಇಮೇಜ್ ಬದಲಾಗುತ್ತಿದೆ.
ಇನ್ನು ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಪಟ್ಟಂತೆ ಪೊಲೀಸ್ ಇಲಾಖೆಯನ್ನು ಹೆಚ್ಚು ಪಾರದರ್ಶಕಗೊಳಿಸಲು ಪ್ರಯತ್ನಗಳು ನಡೆಯುತ್ತಿದ್ದು, ಇತ್ತೀಚೆಗೆ ಹೆಚ್ಚು ಪಾರದರ್ಶಕವಾಗುತ್ತಿದೆ. ದೂರುಗಳ ದಾಖಲಾತಿ ಕಂಪ್ಯೂಟರೀಕರಣಗೊಳ್ಳುತ್ತಿದೆ, ಪೊಲೀಸ್ ಠಾಣೆಗೆ ಬರುವ ಜನರು ದೂರು ಸಲ್ಲಿಸಿದ ನಂತರ ರಶೀದಿಗೆ ಕಾಯಬೇಕಾಗಿಲ್ಲ.ವರ್ಗಾವಣೆಗಳನ್ನು ತರ್ಕಬದ್ಧಗೊಳಿಸಲಾಗಿದೆ ಮತ್ತು ಪೊಲೀಸ್ ಸ್ಥಾಪನಾ ಮಂಡಳಿಯು ನಿರ್ವಹಿಸುತ್ತಿದೆ.ಕಾನೂನುಬಾಹಿರ ಸಂಘಟನೆಗಳು ಮತ್ತು ಭೂಗತ ಜಗತ್ತಿನೊಂದಿಗೆ ಸಂಬಂಧ ಹೊಂದಿರುವ ಯಾರನ್ನಾದರೂ ಗಂಭೀರವಾಗಿ ಪರಿಗಣಿಸಲಾಗುವುದು ಎಂದು ನಾನು ಪೊಲೀಸ್ ಸಿಬ್ಬಂದಿಗೆ ಎಚ್ಚರಿಕೆ ನೀಡಿದ್ದೇನೆ.
ಮೈಸೂರು ಪೊಲೀಸರು ನಾಲ್ಕು ದಿನಗಳಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಭೇದಿಸಿದ ನಂತರ ನೀವು ಉತ್ಸಾಹಭರಿತರಾಗಿರುವಂತೆ ತೋರುತ್ತಿದೆ.
-ಹೌದು. ಸಂತ್ರಸ್ತೆಯ ಹೇಳಿಕೆಯಿಲ್ಲದೆ, ಪೋಲಿಸರು ಲಭ್ಯವಿರುವ ತಾಂತ್ರಿಕ ಮತ್ತು ಇತರ ಪುರಾವೆಗಳನ್ನು ಪಡೆದು ಆರೋಪಿಗಳನ್ನು ಹಿಡಿದಿರುವುದು ಶ್ಲಾಘನೀಯ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೆಚ್ಚಿನ ಅನುಭವ ಹೊಂದಿರುವವರನ್ನು ಗೃಹ ಸಚಿವರನ್ನಾಗಿ ನೇಮಿಸಬೇಕೆಂದು ಕಾಂಗ್ರೆಸ್ ಹೇಳಿದೆ, ಈ ಬಗ್ಗೆ ಏನು ಹೇಳುತ್ತೀರಿ?
-ನಾನು ಹೊಸಬ ಅಲ್ಲ, ಕಳೆದ ನಾಲ್ಕು ದಶಕಗಳಿಂದ ರಾಜಕೀಯದಲ್ಲಿದ್ದೇನೆ. ಇದು ನಾನು ನಾಲ್ಕನೇ ಬಾರಿ ಶಾಸಕನಾಗಿರುವುದು. ಹಲವು ಶಾಸನ ಸಮಿತಿಗಳಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಪ್ರಮುಖ ಸಾರ್ವಜನಿಕ ಲೆಕ್ಕಪರಿಶೋಧನೆ ಸಮಿತಿಯಲ್ಲಿ ಕೂಡ ಇದ್ದೆ. ಕಾಂಗ್ರೆಸ್ ನಾಯಕರು ಮೈಸೂರಿನಲ್ಲಿ ನಡೆದ ದುರದೃಷ್ಟಕರ ಘಟನೆಯಿಂದ ರಾಜಕೀಯ ಲಾಭ ಪಡೆದುಕೊಳ್ಳಲು ನೋಡುತ್ತಿದ್ದಾರೆ. ಅತ್ಯಾಚಾರ ಘಟನೆ ಬೆಳಕಿಗೆ ಬಂದ ಕೂಡಲೇ ಮೈಸೂರಿಗೆ ಹೋಗಿ ತನಿಖೆ ಪ್ರಗತಿ ಬಗ್ಗೆ ಪೊಲೀಸರೊಂದಿಗೆ ಚರ್ಚಿಸುತ್ತಲೇ ಇದ್ದೆ.
ಪೊಲೀಸ್ ಇಲಾಖೆಯಲ್ಲಿ ನಾಗರಿಕರ ಪಾಲ್ಗೊಳ್ಳುವಿಕೆ ಬಗ್ಗೆ ಕಾಂಗ್ರೆಸ್ ನಾಯಕರು ಸಲಹೆ ನೀಡುತ್ತಿದ್ದಾರೆ. ಈ ಬಗ್ಗೆ ನೀವು ಏನು ಹೇಳುತ್ತೀರಿ, ಏನಾದರೂ ಯೋಜನೆಗಳಿವೆಯೇ?
-ಪೊಲೀಸರ ಕಾರ್ಯಚರಣೆಯಲ್ಲಿ ಹೆಚ್ಚಿನ ಜನರನ್ನು ಒಳಗೊಳ್ಳಲು ನಾವು ಹಲವಾರು ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಪೊಲೀಸ್ ಸುಧಾರಣಾ ಆಯೋಗ, ರಾಷ್ಟ್ರೀಯ ಕಾನೂನು ಆಯೋಗ ಮತ್ತು ಸುಪ್ರೀಂ ಕೋರ್ಟ್‌ಗಳಿಂದ ಶಿಫಾರಸುಗಳು ಬಂದಿವೆ. ನಾವು ಸಮುದಾಯ ಪೊಲೀಸರನ್ನು ಪ್ರೋತ್ಸಾಹಿಸುತ್ತೇವೆ.
ತಮ್ಮ ವಿರುದ್ಧ ಕೇಳಿಬರುತ್ತಿರುವ ಟೀಕೆಗಳಿಗೆ ಪ್ರತಿಕ್ರಿಯಿಸಿದ ಅವರು ಕಳೆದ ನಾಲ್ಕು ದಶಕಗಳಿಂದ ತಾನು ಸಾರ್ವಜನಿಕ ಜೀವನದಲ್ಲಿದ್ದು ಹಲವು ಶಾಸನ ಸಮಿತಿಗಳ ಭಾಗವಾಗಿದ್ದೆ. ರಾಜಕೀಯವಾಗಿ ಅನುಭವವಿದೆ ಎಂದಿದ್ದಾರೆ. ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆ ಜೊತೆ ನಡೆಸಿದ ಸಂದರ್ಶನದ ಆಯ್ದ ಭಾಗ ಹೀಗಿದೆ…
ವರದಿ ..ರಘುರಾಜ್ ಹೆಚ್. ಕೆ…
ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ…9449553305/7892830899…