
ರಾಜ್ಯದಲ್ಲಿ ಸ್ಪಷ್ಟ ಬಹುಮತದೊಂದಿಗೆ ಕಾಂಗ್ರೆಸ್ ಅಧಿಕಾರ ಹಿಡಿದು ಸರ್ಕಾರ ನಡೆಸುತ್ತಿದೆ. ಬಹುಮತ ಬಂದ ಬೆನ್ನಲ್ಲೇ ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿಯಾ ಆಯ್ಕೆ ಬಗ್ಗೆ ಹಲವು ಭಿನ್ನಮತಗಳು ಎದುರಾಗಿದ್ದವು. ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ನಡುವೆ ಮುಖ್ಯಮಂತ್ರಿ ಹಾದಿಗಾಗಿ ತೀವ್ರ ಹೋರಾಟ ಏರ್ಪಡಾಗಿತ್ತು. ಕೊನೆಗೂ ಸಿದ್ದರಾಮಯ್ಯ ಮುಖ್ಯಮಂತ್ರಿ ಯಾಗಿ ಆಯ್ಕೆಯಾದರು.
ಈ ಸಮಯದಲ್ಲಿ ಹಿಂದೆ ಆಡಳಿತ ನಡೆಸುತ್ತಿದ್ದ ಬಿಜೆಪಿ ಪಕ್ಷ 66 ಸೀಟುಗಳನ್ನು ಅಷ್ಟೇ ತೆಗೆದುಕೊಂಡು ಹೀನಾಯ ಸೋಲು ಕಂಡಿತ್ತು. ಆದರೆ ಕಾಂಗ್ರೆಸ್ ಪಕ್ಷ ಮುಖ್ಯಮಂತ್ರಿ ಆಯ್ಕೆ ಮಾಡುವಲ್ಲಿ ವಿಳಂಬ ನೀತಿ ಅನುಸರಿಸುತ್ತಿದೆ ಎಂದು ವ್ಯಂಗ್ಯ ಮಾಡಿತ್ತು.
ಆದರೆ ಈಗ ಕಾಂಗ್ರೆಸ್ ಪಕ್ಷ ಮಂತ್ರಿ ಮಂಡಲವನ್ನು ವಿಸ್ತರಣೆ ಮಾಡಿ ಅಧಿಕಾರವನ್ನು ನಡೆಸುತ್ತಿದೆ ಆದರೆ ಬಿಜೆಪಿ ಪಕ್ಷ ತನ್ನ ವಿರೋಧ ಪಕ್ಷದ ನಾಯಕನ ಆಯ್ಕೆಯನ್ನು ಇನ್ನು ಅಂತಿಮಗೊಳಿಸಿಲ್ಲ. ಈಗ ವ್ಯಂಗ್ಯ ಮಾಡುವ ಸರದಿ ಕಾಂಗ್ರೆಸ್ ದ್ದು ಅವರು ಬಿಜೆಪಿ ಪಕ್ಷದ ವಿಪಕ್ಷ ನಾಯಕನ ಬಗ್ಗೆ ಟ್ವಿಟ್ ಮೂಲಕ ವ್ಯಂಗ್ಯ ಮಾಡಿದ್ದು ಈ ಕೆಳಗಿನಂತಿದೆ.
ಸಂವಿಧಾನವನ್ನು ತಿಳಿದವರು, ಪ್ರಜಾಪ್ರಭುತ್ವವನ್ನು ಅರಿತವರು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ.
- ಸಿಡಿಗೆ ತಡೆಯಜ್ಞೆ ತರದವರು, ಭ್ರಷ್ಟಾಚಾರಿಯಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ.
- RSS ಕೈಗೊಂಬೆಯಾಗದವರು, ಕೋಮುವಾದಿ ಅಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ.
*ವಾಟ್ಸಾಪ್ ಯೂನಿವರ್ಸಿಟಿಯಲ್ಲಿ ಪದವಿ ಪಡೆದಿರಬಾರದು, ಸುಳ್ಳು ಹೇಳಬಾರದು.
- ಘನತೆಯ ವ್ಯಕ್ತಿತ್ವದವರು, ತೂಕದ ಮಾತಿನವರು ವಿಪಕ್ಷ ನಾಯಕ ಬೇಕಾಗಿದ್ದಾರೆ.
ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ! ಎಂದು ಕಾಂಗ್ರೆಸ್ ಟ್ವೀಟ್ ಮಾಡಿತ್ತು.
ವಿಪಕ್ಷ ನಾಯಕನ ಆಯ್ಕೆಯ ಬಗ್ಗೆ ಕಾಂಗ್ರೆಸ್ ವ್ಯಂಗ್ಯ ಮಾಡುತ್ತಿದೆ.
ಆದರೆ ಬಿಜೆಪಿ ಪಕ್ಷದಲ್ಲಿ ಒಳಜಗಳಗಳು ಶುರುವಾಗಿವೆ ಈ ಶೀತಲ ಸಮರ ಯಾವ ಮಟ್ಟಕ್ಕೆ ತಲುಪುತ್ತದೆ ಕಾದುನೋಡಬೇಕು ಇದರ ನಡುವೆ ವಿಪಕ್ಷ ನಾಯಕನ ಆಯ್ಕೆಗೆ ಕಸರತ್ತು ನಡೆಯುತ್ತಿದ್ದು ಮಾಜಿ ಮುಖ್ಯಮಂತ್ರಿ ಬಿಎಸ್ ವೈ ಗೆ ಬಿಜೆಪಿ ಹೈ ಕಮಾಂಡ್ ಬುಲಾವ್ ನೀಡಿದ್ದು ವಿಪಕ್ಷ ನಾಯಕನ ಆಯ್ಕೆ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆ ಇದ್ದು. ರಾಜ್ಯ ಬಿಜೆಪಿಯಲ್ಲಿ ವಿಪಕ್ಷ ನಾಯಕನ ಸ್ಥಾನಕ್ಕೆ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ, ವಿ ಸುನಿಲ್ ಕುಮಾರ್, ಬಸನಗೌಡ ಯತ್ನಾಳ್, ಡಾಕ್ಟರ್ ಅಶ್ವಥ್ ನಾರಾಯಣ್, ಹಾಗೆ ಇದೇ ಪ್ರಥಮ ಬಾರಿಗೆ ಗೆದ್ದಿರುವ ಮಾಜಿ ಮುಖ್ಯಮಂತ್ರಿ ಬಿಎಸ್ ವೈ ಕಿರಿಯ ಪುತ್ರ ಬಿ ವೈ ವಿಜಯೇಂದ್ರ ಹೆಸರುಗಳು ಮುಂಚೂಣಿಯಲ್ಲಿವೆ.
ಅಂತಿಮವಾಗಿ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾಗುವ ಸಾಧ್ಯತೆಗಳು ಅಧಿಕವಾಗಿವೆ…
ರಘುರಾಜ್ ಹೆಚ್.ಕೆ..9449553305…