
ತೀರ್ಥಹಳ್ಳಿ : ತಾಲೂಕಿನ ಆಗುಂಬೆ ಠಾಣೆಯ ಪಿಎಸ್ಐ ರಂಗನಾಥ್ ಅಂತರಗಟ್ಟಿ ಅವರಿಂದ ಇಂದು ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನೇತಾಳು ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಮಹಿಳಾ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಭಾಗವಹಿಸಿ, ಮಹಿಳಾ ಸಬಲೀಕರಣ, ಮಹಿಳಾ ಮತ್ತು ಮಕ್ಕಳ ಹಕ್ಕುಗಳು, ಕಾನೂನಿನಲ್ಲಿ ಮಹಿಳೆಯರಿಗಿರುವ ರಕ್ಷಣೆ, ಪೋಕ್ಸೋ ಕಾಯ್ದೆ, ವರದಕ್ಷಿಣಾ ನಿಷೇಧ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಸೈಬರ್ ಕ್ರೈಂ ಮತ್ತು ಇತ್ತೀಚಿನ ದಿನಗಳಲ್ಲಿ ಮಕ್ಕಳಲ್ಲಿ ಹೆಚ್ಚುತ್ತಿರುವ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆಯ ಗೀಳು ಮತ್ತು ಅದರಿಂದಾಗುವ ದುಷ್ಪರಿಣಾಮಗಳು, ಐಎಂವಿ ಕಾಯ್ದೆ, ಮಾದಕ ವಸ್ತುಗಳಿಂದಾಗುವ ದುಷ್ಪರಿಣಾಮಗಳು, ಎನ್.ಡಿ.ಪಿ.ಎಸ್ ಕಾಯ್ದೆ ಮತ್ತು ಕಾನೂನಿನ ಬಗ್ಗೆ ತಿಳುವಳಿಕೆ ನೀಡಿರುತ್ತಾರೆ.….