
ಶಿವಮೊಗ್ಗ: ಜಿಲ್ಲಾಧ್ಯಂತ ನಿರಂತರ ಮಳೆಯಾಗುತ್ತಿದ್ದು ಕೆಲವು ಭಾಗಗಳಲ್ಲಿ ಈಗಾಗಲೇ ಕಳೆದ ಒಂದು ವಾರಗಳಿಂದ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ನಿಲ್ಲದ ಮಳೆಯ ಕಾರಣ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ನಾಳೆ ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ನಾಳೆ ಘೋಷಿಸಲಾಗಿರುವ ರಜೆಯನ್ನು ಮುಂದಿನ ರಜಾ ದಿನದಲ್ಲಿ ತರಗತಿ ನಡೆಸುವ ಮೂಲಕ ಶಾಲಾ ದಿನಗಳನ್ನು ಮರು ಹೊಂದಾಣಿಕೆ ಮಾಡಿಕೊಳ್ಳಲು ಶಾಲಾ ಮುಖ್ಯ ಶಿಕ್ಷಕರಿಗೆ ಸೂಚಿಸಿದೆ.
ಪದವಿಪೂರ್ವ ಕಾಲೇಜುಗಳಿಗೆ ರಜೆ ಇಲ್ಲ ಜಿಲ್ಲಾಧಿಕಾರಿ ಡಾ/ ಆರ್ ಸೇಲ್ವಮಣಿ ..!
ಪದವಿ ಪೂರ್ವ ಕಾಲೇಜುಗಳಿಗೆ ನಾಳೆ ರಜೆ ಘೋಷಿಸಲಾಗಿಲ್ಲ ಆದರೆ ಸ್ಥಳೀಯವಾಗಿ ಅಲ್ಲಿನ ಪರಿಸ್ಥಿತಿಗಳನ್ನು ನೋಡಿಕೊಂಡು ರಜೆ ಘೋಷಿಸಬಹುದು ಎಂದು ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಜಿಲ್ಲಾಧಿಕಾರಿಗಳ ಅನುಮತಿ ಮೇರೆಗೆ ಅವಶ್ಯಕತೆ ಇದ್ದಲ್ಲಿ ರಜೆ ಘೋಷಣೆ ಮಾಡುತ್ತೇವೆ ಡಿಡಿಪಿಯು ..!
ಈಗಾಗಲೇ ಜಿಲ್ಲಾಧಿಕಾರಿಗಳು ಜಿಲ್ಲೆಯ ಎಲ್ಲಾ ಖಾಸಗಿ ಸರ್ಕಾರಿ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿದ್ದಾರೆ. ಪದವಿಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಣೆಯ ಆದೇಶ ನೀಡಿಲ್ಲ ಆದರೆ ಸ್ಥಳೀಯವಾಗಿ ಆಯಾ ತಾಲೂಕುಗಳಲ್ಲಿ ಪರಿಸ್ಥಿತಿಗಳನ್ನು ನೋಡಿಕೊಂಡು ಅವಶ್ಯಕತೆ ಇದ್ದಲ್ಲಿ ರಜೆ ನೀಡಬಹುದು.
ಒಂದು ವೇಳೆ ಅವಶ್ಯಕತೆ ಇದ್ದು ರಜೆ ನೀಡಿದ್ದಲ್ಲಿ ಆ ರಜಾ ದಿನಗಳನ್ನು ಮುಂದಿನ ದಿನಗಳಲ್ಲಿ ಸರಿದೂಗಿಸಿ ಕೊಂಡು ಹೋಗ ತಕ್ಕದ್ದು ಎಂದು ಜಿಲ್ಲಾಧಿಕಾರಿಗಳ ಅನುಮತಿ ಮೇರೆಗೆ ಡಿಡಿಪಿಯು ತಿಳಿಸಿದ್ದಾರೆ…
ರಘುರಾಜ್ ಹೆಚ್.ಕೆ…9449553305…