
ಶಿವಮೊಗ್ಗ : ನಗರದ ಸೆಕ್ರೆಟ್ ಹಾರ್ಟ್ ಕಾಲೇಜಿನಲ್ಲಿ ಪಿಯುಸಿ ಓದುತ್ತಿರುವ ಬಂಜಾರ ಸಮಾಜದ ಅಪ್ರಾಪ್ತ ಹೆಣ್ಣುಮಗಳಿಗೆ ಲೈಂಗಿಕ ಕಿರುಕುಳ ನೀಡಿ ಹಾಗೂ ಬಲಾತ್ಕಾರ ಕ್ಕೆ ಪ್ರಯತ್ನ ಪಟ್ಟಿರುವ ಇದೆ ಕಾಲೇಜಿನ ಪ್ರಿನ್ಸಿಪಾಲ್ ಹಾಗೂ ಚರ್ಚ್ ಫಾದರ್ ಆಗಿರುವ ಫ್ರಾನ್ಸಿಸ್ ಫರ್ನಾಂಡಿಸ್ ರವರನ್ನು ಈಗಾಗಲೇ ಬಂಧಿಸಲಾಗಿದೆ.
ಕ್ರಿಶ್ಚಿಯನ್ ಶಿಕ್ಷಣ ಸಂಸ್ಥೆಗಳು ಬಲಾಢ್ಯವಾಗಿದ್ದು ಈತನಿಗೆ ರಕ್ಷಣೆ ನೀಡಲು ಮುಂದಾಗಿದೆ ಆದ್ದರಿಂದ ಇವನಿಗೆ ಕಠಿಣವಾದ ಶಿಕ್ಷೆಯನ್ನು ನೀಡಬೇಕು ಹಾಗೂ ಇವನಿಗೆ ರಕ್ಷಣೆ ನೀಡುವರ ವಿರುದ್ಧ ಕ್ರಮ ತೆಗೆದುಕೊಳ್ಳಲು ಒತ್ತಾಯಿಸಿ ಮತ್ತು ಬಂಜಾರ ಸಮಾಜದ ಅಪ್ರಾಪ್ತ ಬಾಲಕಿಯ ಕುಟುಂಬಕ್ಕೆ ಪರಿಹಾರ ನೀಡಬೇಕು ಮತ್ತು ಈ ಕುಟುಂಬಕ್ಕೆ ರಕ್ಷಣೆ ನೀಡಬೇಕೆಂದು ಒತ್ತಾಯಿಸಿ ಶಿವಮೊಗ್ಗ ಜಿಲ್ಲಾ ಬಂಜಾರ ಸಂಘದ ನೇತೃತ್ವದಲ್ಲಿ
ಇಂದು ಬೆಳಗ್ಗೆ 10 ಗಂಟೆಗೆ ಶಿವಮೊಗ್ಗದ ನಗರದ ಸೈನ್ಸ್ ಮೈದಾನದಿಂದ ಮೆರವಣಿಗೆ ಮುಖಾಂತರ ಜಿಲ್ಲಾಧಿಕಾರಿಗಳ ಕಚೇರಿಗೆ ಬಂದು ಜಿಲ್ಲಾಧಿಕಾರಿಗಳಿಗೆ ಮನವಿ ನೀಡಲಾಗುತ್ತಿದೆ .
ಆದ್ದರಿಂದ ಬಂಜಾರ ಸಮಾಜದ ಪ್ರಮುಖರು ಮುಖಂಡರು ಚುನಾಯಿತ ಜನಪ್ರತಿನಿಧಿಗಳು ತಾಂಡದ ನಾಯಕ್ ಡಾವ್ ಕಾರಬಾರಿಗಳು ಮಹಿಳಾ ಸಮಿತಿಗಳು ಮತ್ತು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೈನ್ಸ್ ಮೈದಾನದ ಬಳಿ ಬೆಳಿಗ್ಗೆ 10 ಗಂಟೆಗೆ ಭಾಗವಹಿಸಬೇಕಾಗಿ ಶಿವಮೊಗ್ಗ ಜಿಲ್ಲಾ ಬಂಜಾರ ಸಂಘದ ಅಧ್ಯಕ್ಷರು ಕಾರ್ಯದರ್ಶಿಗಳು ಆಡಳಿತ ಮಂಡಳಿಯವರು ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ…
ರಘುರಾಜ್ ಹೆಚ್.ಕೆ..9449553305…