
ಬೆಂಗಳೂರು: ಬಹಳ ದಿನಗಳಿಂದ ಚರ್ಚೆಯಲ್ಲಿರುವ ವಿಚಾರ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಸ್ಥಾನ ಯಾರಿಗೆ ಹಾಗೂ ಬಿಜೆಪಿಯ ವಿರೋಧ ಪಕ್ಷದ ನಾಯಕನ ಸ್ಥಾನ ಯಾರಿಗೆ ಎನ್ನುವ ಚರ್ಚೆಗಳು ಹಲವು ದಿನಗಳಿಂದ ಶುರುವಾಗಿದೆ.
ಕರ್ನಾಟಕದ ಇತಿಹಾಸದಲ್ಲಿ ಬಹುತೇಕ ಇದೆ ಮೊದಲ ಬಾರಿಗೆ ಎನ್ನುವಂತೆ ವಿಪಕ್ಷ ನಾಯಕ ಇಲ್ಲದಂತೆ ವಿಧಾನಸಭೆಯ ಅಧಿವೇಶನ ಮುಗಿಸಿರುವುದು ಇತಿಹಾಸ ಇದು ದೊಡ್ಡ ಮಟ್ಟದ ಚರ್ಚೆಯಾಗಿ ಬಿಜೆಪಿ ಅಂತಹ ಬಹುದೊಡ್ಡ ರಾಷ್ಟ್ರೀಯ ಪಕ್ಷಕ್ಕೆ ಇರಿಸುಮುರಿಸು ಉಂಟಾಗಿತ್ತು.
ಇದೀಗ ಬಹುತೇಕ ವಿರೋಧ ಪಕ್ಷದ ನಾಯಕ ಯಾರಾಗಬೇಕು ಎನ್ನುವ ಆಯ್ಕೆ ಹಂತ ಮುಗಿದಿದ್ದು ಹಲವು ಜನ ಆಕಾಂಕ್ಷಿಗಳ ನಡುವೆಯೂ ಬಸನಗೌಡ ಪಾಟೀಲ್ ಯತ್ನಾಳ್ ವಿರೋಧ ಪಕ್ಷದ ನಾಯಕನಾಗಿ ಆಯ್ಕೆಯಾಗುವ ಸಾಧ್ಯತೆ ಅಧಿಕವಾಗಿದೆ ಎನ್ನಲಾಗುತ್ತಿದೆ.
ಅದೇ ರೀತಿ ಈ ಬಾರಿ ಚುನಾವಣೆಯಲ್ಲಿ ಸೋತಿರುವ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಸಿಟಿ ರವಿ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಸಿಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಮಹತ್ವದ ಹೇಳಿಕೆ ..!
ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಸಿಟಿ ರವಿ ಅವರಿಗೆ ವಿರೋಧ ಪಕ್ಷದ ನಾಯಕರಾಗಿ ಬಸವನಗೌಡ ಪಾಟೀಲ್ ಯತ್ನಾಳ್ ಆಯ್ಕೆಯಾಗುವ ಸಾಧ್ಯತೆ ಬಹುತೇಕ ಖಚಿತವಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿರುವುದು ಕುತೂಹಲಕಾರಿಯಾಗಿದೆ…
ರಘುರಾಜ್ ಹೆಚ್.ಕೆ…9449553305…