
ದಾವಣಗೆರೆ:-ಕೇಂದ್ರ ಗೃಹ ಸಚಿವ ಅಮಿತ್ ಶಾ ನಾಳೆ(2/9/21) ರಂದು ದಾವಣಗೆರೆ ಜಿಲ್ಲೆಗೆ ಆಗಮಿಸುತ್ತಿದ್ದು, ಜಿಲ್ಲೆಯ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅವರು ಸ್ಪಷ್ಟಪಡಿಸಿದರು .

ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿಗಳು ಕೇಂದ್ರ ಸಚಿವ ಅಮಿತ್ ಶಾ ಅವರು ಹುಬ್ಬಳ್ಳಿಯಿಂದ ನೇರವಾಗ ದಾವಣಗೆರೆ ಜಿಲ್ಲೆಯ ಜಿ ಎಂ ಐ ಟಿ ಯ ಹೆಲಿಪ್ಯಾಡ್ ಗೆ ಬಂದು ಜಿಐಎಂಟಿಯ ಅತಿಥಿ ಗೃಹದಲ್ಲಿ ಊಟ ಮಾಡಿ ಅಲ್ಲಿಂದ ನೇರವಾಗಿ ಜಿಲ್ಲೆಯ ರಾಮನಗರಕ್ಕೆ ತೆರಳಿ ಗಾಂಧಿ ಭವನವನ್ನು ಲೋಕಾರ್ಪಣೆಗೊಳಿಸಲಿದ್ದಾರೆ.ಬಳಿಕ ಕೊಂಡಜ್ಜಿ ಸ್ಕೌಟ್&ಗೈಡ್ಸ್ ಸಂಸ್ಥೆಯಲ್ಲಿ ಕೊಂಡಜ್ಜಿ ಬಸಪ್ಪ ಅವರ ಸಮಾಧಿ ಮತ್ತು ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸುವರು.
ಕೊಂಡಜ್ಜಿಯಲ್ಲಿ ನಿರ್ಮಾಣವಾಗಿರುವ ಪೊಲೀಸ್ ಪಬ್ಲಿಕ್ ವಸತಿ ಶಾಲೆಯನ್ನು ಉದ್ಘಾಟಿಸುವರು.ದಾವಣಗೆರೆಯಲ್ಲಿ ಸುಮಾರು ಹದಿನೈದು ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಪೊಲೀಸ್ ವಸತಿ ಗೃಹಗಳಿಗೆ ಕೊಂಡಜ್ಜಿಯಿಂದಲೇ ಚಾಲನೆ ನೀಡುವರು.
ಜಿ ಎಂ ಐ ಟಿ ಯಲ್ಲಿ ಸುಮಾರು 9ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಹೈಟೆಕ್ ಲೈಬ್ರರಿಯನ್ನು ಉದ್ಘಾಟಿಸಿ ನೇರವಾಗಿ ಹುಬ್ಬಳ್ಳಿಗೆ ತೆರಳುವರು.
ಕೇಂದ್ರ ಸಚಿವ ಅಮಿತ್ ಶಾ ಅವರು ಎಲ್ಲಿಯೂ ಸಭಾಕಾರ್ಯಕ್ರಮಗಳು ನಡೆಸೋದಿಲ್ಲ .ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು,ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು ದೆಹಲಿಯಿಂದ ಸಿ ಆರ್ ಪಿಎಫ್ ಪ್ರಮುಖರು ಈಗಾಗಲೇ ಬಂದಿದ್ದು .ಇಲ್ಲಿನ ಪೊಲೀಸ್ ಅಧಿಕಾರಿಗಳು, ಜಿಲ್ಲಾಡಳಿತ ಜತೆಗೆ ಸಭೆ ನಡೆಸಿದ್ದಾರೆ. ಎಲ್ಲಿ, ಹೇಗೆ ಯಾವ ರೀತಿಯಲ್ಲಿ ಕಾರ್ಯಕ್ರಮ ಇರಬೇಕು ಎಂಬುದರ ಬಗ್ಗೆ ಸಲಹೆಗಳನ್ನು ನೀಡಿದ್ದಾರೆ ಎಂದರು .
ನಾಳೆ ಕೇಂದ್ರ ಸಚಿವರು ಪಾಲುಗೊಳ್ಳುವ ವಿವಿಧ ಕಾರ್ಯಕ್ರಮಗಳಲ್ಲಿ ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಗೃಹ ಸಚಿವ ಆರಗ ಜ್ಞಾನೇಂದ್ರ ,ಉಸ್ತುವಾರಿ ಸಚಿವ ಬೈರತಿ ಬಸವರಾಜ್, ಬೃಹತ್ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಸೇರಿದಂತೆ ರಾಜ್ಯ ಸಚಿವ ಸಂಪುಟದ ಸಹದ್ಯೋಗಿಗಳು ಸೇರಿದಂತೆ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.
ವರದಿ …ಪ್ರಕಾಶ್ ಮಂದಾರ…
ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ…9449553305/7892830899…