
ಬೆಂಗಳೂರು : ಭಾರತದ ಮಾಧ್ಯಮ ಲೋಕದ ಪ್ರತಿಷ್ಠಿತ ಸುವರ್ಣ ನ್ಯೂಸ್ ಚಾನಲ್ ಹಾಗೂ ಕರ್ನಾಟಕದ ಪ್ರತಿಷ್ಠಿತ ರಾಜ್ಯ ಮಟ್ಟದ ದಿನ ಪತ್ರಿಕೆಯಾದ ಕನ್ನಡಪ್ರಭ ದಿನಪತ್ರಿಕೆ ವತಿಯಿಂದ ವೈದ್ಯಲೋಕದ ಅಪ್ರತಿಮ ಸಾಧಕರಿಗೆ ಕೊಡಮಾಡುವ 2023 ನೇ ಸಾಲಿನ ಹೆಲ್ತ್ ಕೇರ್ ಎಕ್ಸಲೆನ್ಸ್ ಪ್ರಶಸ್ತಿಯು ಶಿವಮೊಗ್ಗ ದ ಮೆಟ್ರೋ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ.ಪೃಥ್ವಿ ಬಿ. ಸಿ ಅವರಿಗೆ ಶನಿವಾರ ಸಂಜೆ ಬೆಂಗಳೂರಿನ ದಿ ಲಲಿತ್ ಅಶೋಕ್ ಹೋಟೆಲ್ ಸಭಾಂಗಣದಲ್ಲಿ ನಡೆದ ಅಭೂತಪೂರ್ವ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ದಿನೇಶ್ ಗುಂಡೂರಾವ್, ಬೆಂಗಳೂರು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾದ ಡಾ.ಸಿ.ಎನ್.ಮಂಜುನಾಥ್, ಚಿತ್ರನಟಿ ಶ್ರೀಮತಿ ಪ್ರಿಯಾಂಕ ಉಪೇಂದ್ರ, ಏಷ್ಯಾ ನೆಟ್ ಸುವರ್ಣ ಚಾನಲ್ ಸಂಪಾದಕರಾದ ಅಜಿತ್ ಹನುಮಕ್ಕವರ್ ಹಾಜರಿದ್ದರು. ಕನ್ನಡ ಪ್ರಭ ಹಾಗೂ ಏಷ್ಯಾನೆಟ್ ಸುವರ್ಣ ನ್ಯೂಸ್‌ನ ಪ್ರಧಾನ ಸಂಪಾದಕರಾದ ರವಿ ಹೆಗಡೆ ಅಧ್ಯಕ್ಷತೆ ವಹಿಸಿದ್ದರು.