
ತೀರ್ಥಹಳ್ಳಿ : ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ರಾಷ್ಟ್ರದ ಹಿರಿಯ ರಾಜಕಾರಣಿಗಳು ಆದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅವಹೇಳನ ಮಾಡಿ ಟೀಕಿಸಿದ ತೀರ್ಥಹಳ್ಳಿ ಕ್ಷೇತ್ರದ ಶಾಸಕರು ಹಾಗೂ ಮಾಜಿ ಗೃಹ ಸಚಿವರಾದ ಆರಗ ಜಾನೇಂದ್ರ ಅವರ ವಿರುದ್ಧ ತಾಲ್ಲೂಕು ಅಫೀಸ್ ಎದುರು ಪ್ರತಿಭಟನೆಯನ್ನು ಮಾಜಿ ಸಚಿವರಾದ ಕಿಮ್ಮನೆ ರತ್ನಕರ್ ಹಾಗೂ ಕೆಪಿಸಿಸಿ ಸಹಕಾರ ವಿಭಾಗದ ರಾಜ್ಯ ಸಂಚಾಲಕರು ಡಾ ಆರ್ ಎಂ ಮಂಜುನಾಥ ಗೌಡ ಅವರ ನೇತೃತ್ವದಲ್ಲಿ ಹಮ್ಮಿಕೊಂಡಿದ್ದು ಕಾಂಗ್ರೆಸ್ ಪಕ್ಷದ ಎಲ್ಲಾ ಪದಾಧಿಕಾರಿಗಳು ಜಿಲ್ಲಾ ಪಂಚಾಯತಿ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯರು ಪಟ್ಟಣ ಪಂಚಾಯತಿ ಸದಸ್ಯರು ಗ್ರಾ ಪ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು APMC ಸದಸ್ಯರು ಎಲ್ಲರೂ ಕಾಂಗ್ರೆಸ್ ಕಛೇರಿ ( ಗಾಂಧಿ ಭವನ ) ಹತ್ತಿರ 11, 30 ಬೆಳಗ್ಗೆ ಇಂದು 03 08 2023 ಆಗಮಿಸಿ ಪ್ರತಿಭಟನೆಯಲ್ಲಿ ಭಾಗವಹಿಸಲು ತಿಳಿಸಿದ್ದಾರೆ.. ಇತ್ತ ಶಿವಮೊಗ್ಗದಲ್ಲೂ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಲು ಮುಂದಾಗಿದ್ದಾರೆ..
ಬೆಂಗಳೂರಿನ ನಿಮ್ಹಾನ್ಸ್ ಗೆ ಸೇರಿಸಿ ಎಂದ ಡಿಕೆ ಶಿವಕುಮಾರ್:
ಮಾಜಿ ಗೃಹ ಸಚಿವರ ಮನಸ್ಥಿತಿ ಸರಿಯಿಲ್ಲ ಅವರನ್ನು ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಗೆ ಸೇರಿಸಿ ಎಂದು ಉಚಿತ ಸಲಹೆಯನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೀಡಿದ್ದಾರೆ.
ಏನಿದು ಘಟನೆ..?!
ಕಸ್ತೂರಿ ರಂಗನ್ ವರದಿ ಕುರಿತಂತೆ ರಾಜ್ಯ ಸರ್ಕಾರ ಅದರಲ್ಲೂ ರಾಜ್ಯ ಸರ್ಕಾರದ ಅರಣ್ಯ ಮಂತ್ರಿ ಈಶ್ವರ್ ಖಂಡ್ರೆ ಕ್ರಮಕ್ಕೆ ಒಲವು ತೋರಿಸುತ್ತಿದ್ದಾರೆ ಎನ್ನುವ ಆರೋಪದ ಮೇಲೆ ಬಿಜೆಪಿ ಆರಗ ಜ್ಞಾನೇಂದ್ರ ಅವರ ನೇತೃತ್ವದಲ್ಲಿ ತೀರ್ಥಹಳ್ಳಿಯಲ್ಲಿ ಪ್ರತಿಭಟನೆಯನ್ನು ನಡೆಸಿತ್ತು. ಈ ಪ್ರತಿಭಟನೆಯ ಸಮಯದಲ್ಲಿ ಜ್ಞಾನೇಂದ್ರ ಅವರು ಮಾತನಾಡುತ್ತಾ ಬಯಲು ಸೀಮೆಯವರಿಗೆ ಮಲೆನಾಡಿನ ಸಮಸ್ಯೆ ಅರ್ಥವಾಗುವುದಿಲ್ಲ ಅವರ ತಲೆ ಕೂದಲು ಮೈಬಣ್ಣ ನೋಡಿದರೆ ಗೊತ್ತಾಗುತ್ತದೆ ಎನ್ನುವ ರೀತಿಯಲ್ಲಿ ಮಾತನಾಡಿದರು ಮಾತನಾಡುವ ಬರದಲ್ಲಿ ಈಶ್ವರ್ ಖಂಡ್ರೆ ಬದಲಾಗಿ ಮಲ್ಲಿಕಾರ್ಜುನ್ ಖರ್ಗೆಯನ್ನು ಹೋಲಿಸಿ ಮಾತನಾಡಿದರು. ಮಲ್ಲಿಕಾರ್ಜುನ್ ಖರ್ಗೆ ಅವರ ಬಗ್ಗೆ ಮಾತನಾಡಿದ್ದೇನೆ ಆದರೆ ಬೇಕಂತ ಮಾತನಾಡಿರುವುದಲ್ಲ ತಪ್ಪಾಗಿ ಮಾತನಾಡಿರುವುದು ಇದನ್ನು ತಪ್ಪಾಗಿ ಅರ್ಥೈಸುವ ಅಗತ್ಯತೆ ಇಲ್ಲ ಎಂದು ಸಮಜಾಯಿಸಿ ನೀಡಿದ್ದಾರೆ.
ಇದು ದಲಿತ ಸಮುದಾಯದವರ ಮೇಲೆ ಮಾಡಿರುವ ಗಂಭೀರ ಆರೋಪ ಜಾತಿನಿಂದಲೇ ಆಗುತ್ತದೆ ಆದ್ದರಿಂದ ಶಾಸಕರನ್ನು ಕೂಡಲೇ ವಜಾ ಗೊಳಿಸಬೇಕು ಅವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪ್ರತಿಭಟನೆಗೆ ಮುಂದಾಗಿದೆ..