Home ತೀರ್ಥಹಳ್ಳಿತೀರ್ಥಹಳ್ಳಿ ಪೊಲೀಸರ ಭರ್ಜರಿ ಕಾರ್ಯಾಚರಣೆ ಕೋಣಂದೂರು ತೋಟದ ಗಾಂಜಾ ಗಿಡಗಳ ವಶ..!

ತೀರ್ಥಹಳ್ಳಿ ಪೊಲೀಸರ ಭರ್ಜರಿ ಕಾರ್ಯಾಚರಣೆ ಕೋಣಂದೂರು ತೋಟದ ಗಾಂಜಾ ಗಿಡಗಳ ವಶ..!

by EDITOR NEWS WARRIORS
0 comments
         ತೀರ್ಥಹಳ್ಳಿ: ನಿನ್ನೆ  ಅಂದರೆ 09-08-2023 ರಂದು ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕೋಣಂದೂರು ಕೋಲಿಗೆ ಗ್ರಾಮದ ತೋಟವೊಂದರಲ್ಲಿ ಅಕ್ರಮವಾಗಿ ಮಾದಕ ವಸ್ತು ಗಾಂಜಾ ಗಿಡಗಳನ್ನು ಬೆಳೆದಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ  ಗಜಾನನ  ವಾಮನ ಸುತಾರ ಪೊಲೀಸ್ ಉಪಾಧೀಕ್ಷಕರು, ತೀರ್ಥಹಳ್ಳಿ ಉಪ ವಿಭಾಗ ರವರ ನೇತೃತ್ವದಲ್ಲಿ, ಅಶ್ವತ್ ಗೌಡ ಪೊಲೀಸ್ ನಿರೀಕ್ಷಕರು, ಗಾದಿ ಲಿಂಗಪ್ಪ ಗೌಡರ್, ಪೊಲೀಸ್ ಉಪ ನಿರೀಕ್ಷಕರು ಮತ್ತು ಸಿಬ್ಬಂಧಿಗಳನ್ನೊಳಗೊಂಡ ತಂಡವು ಸ್ಥಳಕ್ಕೆ ಹೋಗಿ ದಾಳಿ ನಡೆಸಿ, ಅಂದಾಜು ಮೌಲ್ಯ 80,000/- ರೂ ಗಳ, 2 ಕೆಜಿ 164  ಗ್ರಾಂ ತೂಕದ ಹಸಿ ಗಾಂಜಾ ಗಿಡಗಳನ್ನು ಅಮಾನತ್ತು ಪಡಿಸಿಕೊಂಡು,  ಆರೋಪಿತರಾದ 1) ಸುನಿಲ್ 34 ವರ್ಷ, ಕೋಲಿಗೆ ಗ್ರಾಮ, ಕೋಣಂದೂರು, ತೀರ್ಥಹಳ್ಳಿ ಮತ್ತು 2) ಕಾರ್ತಿಕ್ 29 ವರ್ಷ, ಕೋಲಿಗೆ ಗ್ರಾಮ, ಕೋಣಂದೂರು, ತೀರ್ಥಹಳ್ಳಿ ಇವರುಗಳನ್ನು ದಸ್ತಗಿರಿ ಮಾಡಿ, ಆರೋಪಿತರ ವಿರುದ್ಧ ಗುನ್ನೆ ಸಂಖ್ಯೆ 0144/2023  ಕಲಂ 8(a), 20(a) (i) NDPS ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ಇತ್ತೀಚಿನ ವರ್ಷಗಳಲ್ಲಿ ಗಾಂಜಾದ ಅಮಲಿನಲ್ಲಿ ತೇಲಾಡುತ್ತಿರುವ ಯುವಕರು ಹೆಚ್ಚಾಗಿದ್ದು ಇದರ ಮತ್ತಿನಲ್ಲಿ ಸಾಕಷ್ಟು ಅಪರಾಧಗಳನ್ನು ಮಾಡುತ್ತಿದ್ದಾರೆ. ಇದನ್ನು ನಿಯಂತ್ರಿಸುವಲ್ಲಿ ಪೊಲೀಸ್ ಇಲಾಖೆಯೂ ಸಹ ಸಾಕಷ್ಟು ಶ್ರಮಪಡುತ್ತಿದೆ. ಸ್ಥಳೀಯರು ಸಾರ್ವಜನಿಕರು ಕೂಡ ಪೊಲೀಸ್ ಇಲಾಖೆಗೆ ಇದರ ಬಗ್ಗೆ ಮಾಹಿತಿ ನೀಡಬೇಕು ಆಗ ಮಾತ್ರ ಇದರ ಸಂಪೂರ್ಣ ನಾಶ ಸಾಧ್ಯ..

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...