
ಶಿವಮೊಗ್ಗ: ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಹಲವು ಅಪರಾಧಗಳಲ್ಲಿ ಪ್ರಮುಖ ಆರೋಪಿಯಾಗಿದ್ದ ಆರೋಪಿ ಮೋಟು @ ಪ್ರವೀಣ ಈತನನ್ನು ಮೇ 24ರ ವರೆಗೆ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿತ್ತು. ಆದರೆ ಈತ ಈತನ ಸಂಗಡಿಗರೊಂದಿಗೆ ಜಿಲ್ಲಾಧಿಕಾರಿಗಳ ಗಡಿಪಾರು ಆದೇಶ ಉಲ್ಲಂಘನೆ ಮಾಡಿ ಗಾಂಜಾ ಚಟುವಟಿಕೆಯಲ್ಲಿ ಭಾಗಿಯಾಗಿರುವುದು ಕಂಡು ಬಂದಿದ್ದು ಈತ ಮತ್ತು ಈತನ ಸಂಗಡಿಗರನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ.
ಈತನ ಬಂಧನದಲ್ಲಿ ಪ್ರಮುಖ ಪಾತ್ರ ವಹಿಸಿರುವ ಪೊಲೀಸ್ ಸಿಬ್ಬಂದಿಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪ್ರಶಂಸಿಸಿ ಅಭಿನಂದಿಸಿದ್ದಾರೆ…
