
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ತೀರ್ಥಹಳ್ಳಿ ತಾಲ್ಲೂಕು ಶಾಖೆಯಿಂದ ಸ್ವಾತಂತ್ರೋತ್ಸವವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು.
ಸಂಘದ ಕಚೇರಿ ಆವರಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ನುಡಿಗಳನ್ನಾಡಿದ ಕಾರ್ಯದರ್ಶಿ ರಾಮು ಬಿ, ಸ್ವಾತಂತ್ರ್ಯಕ್ಕಾಗಿ ಬಹಳಷ್ಟು ಜನ ತ್ಯಾಗ ಬಲಿದಾನಗಳನ್ನು ಮಾಡಿದ್ದಾರೆ. ಆ ಎಲ್ಲಾ ಹೋರಾಟಗಾರರ ತ್ಯಾಗ ಬಲಿದಾನಗಳನ್ನು ನಾವೆಲ್ಲಾ ಸದಾ ನೆನಪಿಸಿಕೊಳ್ಳಬೇಕು ಎಂದರು.
ಧ್ವಜಾರೋಹಣವನ್ನು ನೆರವೇರಿಸಿದ ಸಂಘದ ಅಧ್ಯಕ್ಷ ಟಿ ವಿ ಸತೀಶ ಸ್ವಾತಂತ್ರೋತ್ಸವದ ಸಂಭ್ರಮದ ಪ್ರಯುಕ್ತ ನಮ್ಮ ಸಂಘ ಪ್ರತಿ ವರ್ಷ ರಕ್ತದಾನ ಶಿಬಿರಗಳನ್ನು ಸಂಘಟಿಸಿ ರಕ್ತದಾನ ಮಾಡುವ ಮೂಲಕ ಸ್ವಾತಂತ್ರ್ಯ ಸೇನಾನಿಗಳಿಗೆ ಗೌರವ ಸಲ್ಲಿಸುವ ಕಾರ್ಯ ಮಾಡುತ್ತಿದೆ. ನಿನ್ನೆ ಹಲವಾರು ರಕ್ತದಾನಿಗಳು ರಕ್ತ ದಾನ ಮಾಡುವ ಮೂಲಕ ನಮ್ಮೊಂದಿಗೆ ಕೈಜೋಡಿಸಿದ್ದಾರೆ. ಇಂದೂ ಕೂಡ ಕೆಲವರು ರಕ್ತದಾನ ಮಾಡುವವರಿದ್ದಾರೆ. ನಮ್ಮೆಲ್ಲಾ ಸಮಾಜಮುಖಿ ಕಾರ್ಯಗಳಿಗೆ ಸಹಕರಿಸಿ ಬೆಂಬಲಿಸುತ್ತಿರುವ ಸಹೃದಯಿ ಬಂಧುಗಳಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುವುದಾಗಿ ತಿಳಿಸಿ ಸರ್ವರಿಗೂ ಶುಭ ಕೋರಿದರು.
ಖಜಾಂಚಿ ಪವಿತ್ರ ಹೆಚ್ ಸಿ, ಉಪಾಧ್ಯಕ್ಷರುಗಳಾದ ಸುಷ್ಮ ಎಸ್ ಪಿ,ಸತೀಶ್ ಟಿ ಆರ್, ಜಂಟಿ ಕಾರ್ಯದರ್ಶಿ ಕೌಶಿಕ್, ಸಂಘಟನಾ ಕಾರ್ಯದರ್ಶಿ ವೆಂಕಟೇಶ್, ಮಾಜಿ ಗೌರವಾಧ್ಯಕ್ಷ ಆರ್ ಎಂ ಧರ್ಮಕುಮಾರ್ ಮತ್ತಿತರರು ಇದ್ದರು….