ಶಿವಮೊಗ್ಗ : ಆಜಾನ್ ಖಾನ್ ಬಿನ್ ತಬ್ರೇಜ್ ಖಾನ್, 8 1/2 ವರ್ಷ, 1ನೇ ತರಗತಿ, ವಾಸ ಸೂಳೆಬೈಲು, ಶಿವಮೊಗ್ಗ ಟೌನ್ ಹಾಲಿ ವಾಸ ಎನ್ ಆರ್ ಪುರ ರಸ್ತೆ, ಬಾಳೆಹೊನ್ನೂರು ಚಿಕ್ಕಮಂಗಳೂರು ಈ ಬಾಲಕನು ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದು,
ಈ ಬಾಲಕನಿಗೆ ತಾನು ಪೊಲೀಸ್ ಅಧಿಕಾರಿಯಾಗಬೇಕೆಂಬ ಇಚ್ಛೆ ಇರುತ್ತದೆ. ಆದ್ದರಿಂದ ಬಾಲಕನ ಮತ್ತು ಆತನ ಪೋಷಕರ ಕೋರಿಕೆ ಮೇರೆಗೆ ಶಿವಮೊಗ್ಗ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಜಿ. ಕೆ, ಸಮ್ಮುಖದಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಇಂದು ಸಂಜೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಬಾಲಕ ಆಜಾನ್ ಖಾನ್ ನಿಗೆ ಪೊಲೀಸ್ ಅಧಿಕಾರಿಯ ಸಮವಸ್ತ್ರವನ್ನು ಧರಿಸಿ, ಪೊಲೀಸ್ ನಿರೀಕ್ಷಕರ ಹುದ್ದೆಯನ್ನು ಸಾಂಕೇತಿಕವಾಗಿ ಅಲಂಕರಿಸಲು ಅವಕಾಶ ಮಾಡಿಕೊಡಲಾಯಿತು.
ಈ ಸಂದರ್ಭದಲ್ಲಿ ಅನಿಲ್ ಕುಮಾರ್ ಭೂಮರಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಬಾಲರಾಜ್, ಪೊಲೀಸ್ ಉಪಾಧೀಕ್ಷಕರು, ಶಿವಮೊಗ್ಗ-ಎ ಉಪ ವಿಭಾಗ, ಪ್ರಭು ಡಿ.ಟಿ, ಪೊಲೀಸ್ ಉಪಾಧೀಕ್ಷರು, ಡಿಸಿಆರ್.ಬಿ, ವಿಭಾಗ, ಜಿಲ್ಲಾ ಪೊಲೀಸ್ ಕಛೇರಿ ಶಿವಮೊಗ್ಗ, ಅಂಜನ್ ಕುಮಾರ್, ಪೊಲೀಸ್ ನಿರೀಕ್ಷಕರು, ದೊಡ್ಡಪೇಟೆ ಪೊಲೀಸ್ ಠಾಣೆ ಮತ್ತು ಪೊಲೀಸ್ ಅಧಿಕಾರಿ ಸಿಬ್ಬಧಿಗಳು ಹಾಗೂ ಬಾಲಕನ ಪೋಷಕರು ಉಪಸ್ಥಿತರಿದ್ದರು...