Saturday, June 14, 2025
Google search engine
Homeರಾಜ್ಯವಾಹನ ಮಾಲೀಕರಿಗೆ ಸಿಹಿಸುದ್ದಿ ನೀಡಿದ ಗೃಹಸಚಿವ ಆರಗ ಜ್ಞಾನೇಂದ್ರ!!

ವಾಹನ ಮಾಲೀಕರಿಗೆ ಸಿಹಿಸುದ್ದಿ ನೀಡಿದ ಗೃಹಸಚಿವ ಆರಗ ಜ್ಞಾನೇಂದ್ರ!!

ಬೆಂಗಳೂರು > ಬೆಂಗಳೂರು ನಗರದಲ್ಲಿ ಟ್ರಾಫಿಕ್ ನಿಯಮ ಉಲ್ಲಂಘನೆ ನೆಪದಲ್ಲಿ ವಾಹನ ಟೋವಿಂಗ್ ಸಿಬ್ಬಂದಿಗಳಿಂದ, ಸಾರ್ವಜನಿಕರಿಗಾಗುತ್ತಿರುವ ಕಿರುಕುಳದ ಬಗ್ಗೆ ಕೇಳಿ ಬಂದ ಆಪಾದನೆಗಳ ಹಿನ್ನೆಲೆಯಲ್ಲಿ ಕರ್ನಾಟಕದ ಗೃಹ ಸಚಿವ ಆರಗ ಜ್ಞಾನೇಂದ್ರ ರವರು, ಇಂದು, ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಹಾಗೂ ಹೆಚ್ಚುವರಿ ಆಯುಕ್ಗ ರವಿಕಾಂತೇಗೌಡ ಅವರ ಜೊತೆ ಸಭೆ ನಡೆಸಿ ಇನ್ನು ಮುಂದೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ತೆಗೆದು ಕೊಳ್ಳುವಂತೆ ನಿರ್ದೇಶನ ನೀಡಿದ್ದಾರೆ.


ಯಾವುದೇ ವಾಹವನವನ್ನು ಟೋವಿಂಗ್ ಮಾಡುವ ಪೂರ್ವದಲ್ಲಿ ಸ್ಥಳದಲ್ಲಿದ್ದ ಟ್ರಾಫಿಕ್ ಪೊಲೀಸರು ವಾಹನ ಮಾಲೀಕರ ಗಮನ ಸೆಳೆಯಲು ಸೈರನ್ ಅಥವಾ ಹಾರ್ನ್ ಮಾಡಬೇಕು ಹಾಗೂ ವಾಹನ ಟೋವಿಂಗ್ ಮಾಡಬೇಕಾದ ಸಂಧರ್ಭದಲ್ಲಿ ತೆಗೆದುಕೊಳ್ಳಬೇಕಾದ ಎಲ್ಲಾ ನಿಯಾಮಾವಳಿಗಳನ್ನು ಚಾಚೂ ತಪ್ಪದೆ ಅನುಸರಿಸಬೇಕು ಎಂದು ಸೂಚಿಸಿದ್ದಾರೆ.


ಇನ್ನು ಮುಂದೆ ಯಾವುದೇ ಸಂಧರ್ಭದಲ್ಲಿ ಟ್ರಾಫಿಕ್ ಪೊಲೀಸರು ವಾಹನ ವನ್ನು ಹೊತ್ತೊಯ್ಯುವ ಸಮಯದಲ್ಲಿ ವಾಹನದ ಮಾಲೀಕರು ಸ್ಥಳದಲ್ಲಿದ್ದರೆ ಕೇವಲ ‘ನೋ ಪಾರ್ಕಿಂಗ್’ ಶುಲ್ಕದ ಹಣವನ್ನು ಮಾತ್ರ ಪಡೆದುಕೊಳ್ಳಬೇಕು ಹಾಗೂ ವಾಹನವನ್ನು ಅಲ್ಲಿಯೇ ಅವರಿಗೆ ಬಿಟ್ಟು ಕೊಡಬೇಕು ಮತ್ತು ಟೋವಿಂಗ್ ಮಾಡಬಾರದು ಎಂದು ಸೂಚಿಸಿದ್ದಾರೆ.


ಟೋವಿಂಗ್ ಸಿಬ್ಬಂದಿ ಗಳು ಸಾರ್ವಜನಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು ಹಾಗೂ ಟೋವಿಂಗ್ ಮಾಡಲಾಗುವ ವಾಹನಗಳನ್ನು ಅತ್ಯಂತ ಜಾಗರೂಕತೆಯಿಂದ ಯಾವುದೇ ಹಾನಿ ಗೊಳಗಾಗದಂತೆಯೂ ನೋಡಿಕೊಳ್ಳಬೇಕು ಎಂದೂ ಹೇಳಿದ್ದಾರೆ.

ವರದಿ …ರಘುರಾಜ್ ಹೆಚ್ .ಕೆ…

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ….9449553305/7892830899…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!