Wednesday, April 30, 2025
Google search engine
Homeರಾಜ್ಯಆರ್ಯವೈಶ್ಯ ಸಮುದಾಯ ಅಭಿವೃದ್ದಿ ನಿಗಮ ಸಾಲ ಸೌಲಭ್ಯ ಒದಗಿಸಲು ಅರ್ಜಿ ಆಹ್ವಾನ..!

ಆರ್ಯವೈಶ್ಯ ಸಮುದಾಯ ಅಭಿವೃದ್ದಿ ನಿಗಮ ಸಾಲ ಸೌಲಭ್ಯ ಒದಗಿಸಲು ಅರ್ಜಿ ಆಹ್ವಾನ..!

ಕ್ಯುಆರ್ ಕೋಡ್

ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿಗೆ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯವನ್ನು ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ವೆಬ್‍ಸೈಟ್ kacdc.karnataka.gov.in ಮೂಲಕ ಸೆ.18 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿದಾರರು ಸಾಮಾನ್ಯ ವರ್ಗದಲ್ಲಿ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿರಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-ಜಿ ಯಲ್ಲಿ ಪಡೆದಿರಬೇಕು. ಅರ್ಜಿದಾರರ ಆಧಾರ್ ಸಂಖ್ಯೆಗೆ ಮೊಬೈಲ್ ನಂಬರ್ ಜೋಡಣೆಯಾಗಿರಬೇಕು. ಬ್ಯಾಂಕ್ ಖಾತೆಗೆ ಆಧಾರ್ ನಂಬರ್‍ನ್ನು ಸೀಡ್ ಮಾಡಿಸಿರಬೇಕು. ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33, ವಿಕಲಚೇತನರಿಗೆ ಶೇ.5 ಹಾಗೂ ತೃತೀಯ ಲಿಂಗಗಳಿಗೆ ಶೇ.5 ಮೀಸಲಾತಿ ಇರಿಸಿದೆ

.
ಸ್ವಯಂ-ಉದ್ಯೋಗ ನೇರ ಸಾಲ ಯೋಜನೆಯ ಅರ್ಹತೆಗಳು :

ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ.3,00,000/-ಗಳ ಮಿತಿಯೊಳಗಿರಬೇಕು. ಅರ್ಜಿದಾರರು 18 ರಿಂದ 45 ವರ್ಷದ ಒಳಗಿನವರಾಗಿರಬೇಕು. ಈ ಯೋಜನೆಯಲ್ಲಿ ಕನಿಷ್ಠ ರೂ.50,000/-ಗಳಿಂದ ಗರಿಷ್ಠ ರೂ.1,00,000/-ಗಳ ಸಾಲ ಒದಗಿಸಲಾಗುವುದು. ಈ ಮೊತ್ತದಲ್ಲಿ ಶೇ.20 ರಷ್ಟು ಸಹಾಯಧನ ಹಾಗೂ ಶೇ.80 ರಷ್ಟು ಸಾಲವನ್ನು ವಾರ್ಷಿಕ ಶೇ.4ರ ಬಡ್ಡಿದರದಲ್ಲಿ ಮಂಜೂರು ಮಾಡಲಾಗುವುದು. 2 ತಿಂಗಳ ವಿರಾಮ ಅವಧಿ ಇದ್ದು, ನಂತರ ಸಾಲವನ್ನು 34 ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು.


ಆರ್ಯ ವೈಶ್ಯ ಆಹಾರ ವಾಹಿನಿ ಯೋಜನೆಯ ಅರ್ಹತೆಗಳು :

ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ.6,00,000/-ಗಳ ಮಿತಿಯೊಳಗಿರಬೇಕು. ಅರ್ಜಿದಾರರು 21 ವರ್ಷದಿಂದ 55 ವರ್ಷದ ಒಳಗಿನವರಾಗಿರಬೇಕು. ಈ ಯೋಜನೆಯಡಿ ಆಹಾರ ವಾಹಿನಿ ಪ್ರಾರಂಭಿಸಲು ಬ್ಯಾಂಕ್/ಸಹಕಾರಿ ಸಂಘಗಳಿಂದ ಸಾಲ ಪಡೆಯಬೇಕು ಹಾಗೂ ನಿಗಮದಿಂದ ಗರಿಷ್ಠ ರೂ.2,00,000/-ಗಳ ಸಹಾಯಧನ ವನ್ನು ನೀಡಲಾಗುವುದು.


ವಾಸವಿ ಜಲಶಕ್ತಿ ಯೋಜನೆಯ ಅರ್ಹತೆಗಳು :

ಈ ಯೋಜನೆಯಡಿ 2 ರಿಂದ 5 ಎಕರೆ ಕೃಷಿ ಭೂಮಿ ಹೊಂದಿರುವವರಿಗೆ ನೀರಾವರಿ ಸೌಲಭ್ಯವನ್ನು ಒದಗಿಸಲು ಸಾಲ-ಸಹಾಯಧನವನ್ನು ನೀಡಲಾಗುವುದು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ.6,00,000/-ಗಳ ಮಿತಿಯೊಳಗಿರಬೇಕು. ಅರ್ಜಿದಾರರು 21 ವರ್ಷದಿಂದ 50 ವರ್ಷದ ಒಳಗಿನವರಾಗಿರಬೇಕು. ಈ ಯೋಜನೆಯಡಿ ಗರಿಷ್ಠ ರೂ.2,00,000/-ಗಳ ಸಾಲವನ್ನು ವಾರ್ಷಿಕ ಶೇ.4ರ ಬಡ್ಡಿದರದಲ್ಲಿ ಒದಗಿಸಲಾಗುವುದು ಹಾಗೂ ವಿದ್ಯುದೀಕರಣಕ್ಕಾಗಿ ರೂ.50,000/-ಗಳ ಸಹಾಯಧನ ನೀಡಲಾಗುವುದು. 6 ತಿಂಗಳ ವಿರಾಮಾವಧಿಯ ನಂತರ ಸಾಲವನ್ನು 34 ಮಾಸಿಕ ಕಂತುಗಳಲ್ಲಿ ಪಾವತಿಸಬೇಕು.
ಅರಿವು ಶೈಕ್ಷಣಿಕ ಸಾಲ ಯೋಜನೆಯ ಅರ್ಹತೆಗಳು : ಈ ಯೋಜನೆಯಲ್ಲಿ ಸಿ.ಇ.ಟಿ/ಎನ್.ಇ.ಇ.ಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವೃತ್ತಿಪರ ಕೋರ್ಸ್ ಹಾಗೂ ಪಿ.ಹೆಚ್.ಡಿ.ನಲ್ಲಿ ವ್ಯಾಸಂಗ ಮಾಡುವ ಆರ್ಯ ವೈಶ್ಯ ವಿದ್ಯಾರ್ಥಿಗಳಿಗೆ ಶೇ.2ರ ಬಡ್ಡಿದರದಲ್ಲಿ ವಾರ್ಷಿಕ ರೂ.1,00,000/-ಗಳ ಶೈಕ್ಷಣಿಕ ಸಾಲ ನೀಡಲಾಗುವುದು. ವ್ಯಾಸಂಗ ಪೂರ್ಣಗೊಂಡ ನಂತರ 04 ತಿಂಗಳ ವಿರಾಮಾವಧಿ ಇರುತ್ತದೆ. ನಂತರ ಸಾಲವನ್ನು 36 ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು. ಅರ್ಜಿದಾರರು 18 ವರ್ಷದಿಂದ 35 ವರ್ಷದ ಒಳಗಿನವರಾಗಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ.6,00,000/-ಗಳ ಮಿತಿಯೊಳಗಿರಬೇಕು. ಈ ಯೋಜನೆಗೆ ಸಂಬಂಧಪಟ್ಟಂತೆ ಸಿ.ಇ.ಟಿ ಪರೀಕ್ಷೆಯ ಕೌನ್ಸಿಲಿಂಗ್ ಮುಗಿದ ನಂತರ ಅರ್ಜಿಯನ್ನು ಸ್ವೀಕರಿಸಲಾಗುವುದು.
ನಿಗಮದ ಯೋಜನೆಗಳ ಮಾರ್ಗಸೂಚಿ, ಆನ್‍ಲೈನ್ ಅರ್ಜಿ, ಜಿಲ್ಲಾ ಕಚೇರಿಗಳ ವಿಳಾಸ, ಸರ್ಕಾರಿ ಆದೇಶಗಳು ಹಾಗೂ ಎಲ್ಲಾ ಸಂಕ್ಷಿಪ್ತ ವಿವರಗಳನ್ನು ಕೆಳಕಂಡ ಕ್ಯುಆರ್ ಕೋಡ್‍ನ್ನು ಗೂಗಲ್‍ನಲ್ಲಿ ಸ್ಕ್ಯಾನ್ ಮಾಡಿ ಪಡೆಯಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ : 9448451111, 08182-229634 ನ್ನು ಸಂಪರ್ಕಿಸಬಹುದೆಂದು ಶಿವಮೊಗ್ಗ ಜಿಲ್ಲೆಯ ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...